9:54 AM Saturday18 - September 2021
ಬ್ರೇಕಿಂಗ್ ನ್ಯೂಸ್
ಕೋಲಾರ: ಮಕ್ಕಳಲ್ಲಿ ಹೆಚ್ಚಾಗುತ್ತಿರುವ ವೈರಲ್ ಫೀವರ್ ತಡೆಗೆ ವಿಶೇಷ ವೈದ್ಯರ ತಂಡ ರಚಿಸಿ,… ಕಾರ್ಕಳ: ಕಾಲೇಜಿಗೆಂದು ತೆರಳಿದ 17ರ ಹರೆಯದ ತರುಣ ನಾಪತ್ತೆ ಒಂದೇ ದಿನ 2 ಕೋಟಿ ಜನರಿಗೆ ವ್ಯಾಕ್ಸಿನೇಶನ್: ಹೊಸ ದಾಖಲೆ ನಿರ್ಮಾಣ; ಯಾವ… ಹುಬ್ಬಳ್ಳಿಯಲ್ಲಿ ಕಣ್ಣೀರು ಸುರಿಸಿದ ಮುಖ್ಯಮಂತ್ರಿ ಬೊಮ್ಮಾಯಿ !!: ಅಷ್ಟಕ್ಕೂ ಸಿಎಂ ದುಃಖಿಸಿದ್ದು ಯಾಕಾಗಿ?  ಪ್ರಧಾನಿ ಮೋದಿ ಜನ್ಮದಿನಾಚರಣೆ: ಮಂಗಳೂರಿನಲ್ಲಿ ಕಾಂಗ್ರೆಸ್ ನಿಂದ ಟೀ, ಪಕೋಡ ಮಾರಿ ವಿನೂತನ… ವಿಶ್ವದ ಅಗ್ರ ಶ್ರೇಣಿಯ ಆಪಲ್ ‘ಐಫೋನ್ 13’ ಸರಣಿ ಬಿಡುಗಡೆ !; ಹಾಗಾದರೆ… ರಾಜ್ಯದ 372 ತಾಲೂಕುಗಳಲ್ಲಿ ಸ್ಮಶಾನವೇ ಇಲ್ಲ: ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದೇನು?… ವರ್ಗಾವಣೆ ನಿರೀಕ್ಷೆಯಲ್ಲಿದ್ದ ರಾಜ್ಯದ ಶಿಕ್ಷಕರಿಗೆ ಬಿಗ್ ಶಾಕ್: ಹಾಗಾದರೆ ಸರಕಾರ ಹೊರಡಿಸಿದ ಹೊಸ… ದೇಗುಲ ಧ್ವಂಸ; ಮೈಸೂರು ಉಸ್ತುವಾರಿ ಸಚಿವರು ರಾಜೀನಾಮೆ ನೀಡಲಿ: ಮಾಜಿ ಸಚಿವ ಯು.ಟಿ.ಖಾದರ್… ಬಾಲಿವುಡ್ ನಟ, ದಾನಿ ಸೋನು ಸೂದ್‌ಗೆ ಸೇರಿದ 6 ಸ್ಥಳಗಳಿಗೆ ಐಟಿ ದಾಳಿ:…

ಇತ್ತೀಚಿನ ಸುದ್ದಿ

ಉಡುಪಿಯ ಉಸ್ತುವಾರಿ ಮಂತ್ರಿ ಇನ್ನು ಇಡೀ ರಾಜ್ಯಕ್ಕೆ ಮುಖ್ಯಮಂತ್ರಿ!: ವಲಸೆ ಬಂದು ಸಿಎಂ ಆದ 2ನೇ ರಾಜಕಾರಣಿ!!

27/07/2021, 22:50

ಬೆಂಗಳೂರು(reporterkarnataka news): ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆಗೊಂಡಿದ್ದಾರೆ. ಕರಾವಳಿಯ ಉಡುಪಿ ಜಿಲ್ಲೆಯ ಉಸ್ತುವಾರಿ ಮಂತ್ರಿ ಈಗ ಇಡೀ ರಾಜ್ಯಕ್ಕೆ ಮುಖ್ಯಮಂತ್ರಿಯಾಗಿದ್ದಾರೆ.

ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗುವ ಮೂಲಕ ರಾಜ್ಯದಲ್ಲಿ ಮಾತೃಪಕ್ಷವನ್ನು ತೊರೆದು ಬಂದವರಲ್ಲಿ ಇಬ್ಬರು ಮುಖ್ಯಮಂತ್ರಿ ಆದ್ದಂತಾಗಿದೆ. ಮೊದಲನೆಯದಾಗಿ ಸಿದ್ದರಾಮಯ್ಯ ಅವರು ಜನತಾ ಪರಿವಾರದಿಂದ ಹೊರ ಬಂದು ಕಾಂಗ್ರೆಸ್ ಸೇರಿದ ಬಳಿಕ ಅವರಿಗೆ ಮುಖ್ಯಮಂತ್ರಿ ಪಟ್ಟ ಒಲಿಯಿತು. ಬಸವರಾಜ ಬೊಮ್ಮಾಯಿ ಅವರು ಕೂಡ ತನ್ನ ಮಾತೃಪಕ್ಷವಾದ ಜನತಾ ಪರಿವಾರದಿಂದ ಹೊರ ಬಂದು ಬಿಜೆಪಿ ಸೇರಿದ ಬಳಿಕ ನೀರಾವರಿ ಸಚಿವರಾಗಿ, ಗೃಹ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಇದೀಗ ಮುಖ್ಯಮಂತ್ರಿಯಾಗಿದ್ದಾರೆ.

ಸಿದ್ದರಾಮಯ್ಯ ಅವರು 2006ರಲ್ಲಿ ಜೆಡಿಎಸ್ ಯಿಂದ ಹೊರಗಡೆ ಬಂದು 2013ರಲ್ಲಿ ಕಾಂಗ್ರೆಸ್ ನಿಂದ ಮುಖ್ಯಮಂತ್ರಿಯಾದರು. 2008ರಲ್ಲಿ ಜೆಡಿಎಸ್ ಬಿಟ್ಟು ಬಿಜೆಪಿಗೆ ಬಂದ ಬಸವರಾಜ ಬೊಮ್ಮಾಯಿ ಅವರು ಇದೀಗ ರಾಜ್ಯದ ಮುಖ್ಯಮಂತ್ರಿಯಾಗಿ ಆಯ್ಕೆಗೊಂಡಿದ್ದಾರೆ.

ಬಸವರಾಜ ಬೊಮ್ಮಾಯಿ ಅವರು ಜನತಾ ಪರಿವಾರದಿಂದ ಬಂದ ಎಸ್. ಆರ್. ಬೊಮ್ಮಾಯಿ ಅವರ ಪುತ್ರ. ಜನತಾ ಪರಿವಾರದಿಂದ ಹೊರ ಬಂದ ಬಳಿಕ ಅವರು ರಾಜಕೀಯವಾಗಿ ಆಯ್ಕೆ ಮಾಡಿಕೊಂಡಿರುವುದು ಬಿಜೆಪಿ ಪಕ್ಷವನ್ನು. ಯಡಿಯೂರಪ್ಪ ಅವರ ಮೊದಲ ಸರಕಾರದಲ್ಲಿಯೂ ಬೊಮ್ಮಾಯಿ ಅವರು ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಅವರ ತಂದೆ ಎಸ್. ಆರ್. ಬೊಮ್ಮಾಯಿ ಅವರು ಜನತಾ ಸರಕಾರದಲ್ಲಿ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು. ಅಂದು ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರಕಾರ ಬೊಮ್ಮಾಯಿ ಸರಕಾರವನ್ನು ವಜಾಗೊಳಿಸಿ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರಿತ್ತು. ಇದರ ವಿರುದ್ಧ ಸುಪ್ರೀಂಕೊರ್ಟ್ ಗೆ ಮೊರೆ ಹೋಗಲಾಗಿತ್ತು. ಬೊಮ್ಮಾಯಿ ಸರಕಾರವನ್ನು ವಜಾಗೊಳಿಸಿದ ಕೇಂದ್ರದ ಕ್ರಮ ಅಸಿಂಧು ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿತ್ತು. ಅಷ್ಟೊತ್ತಿಗೆ ಬೇರೆ ಸರಕಾರ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿತ್ತು. 

ಇತ್ತೀಚಿನ ಸುದ್ದಿ

ಜಾಹೀರಾತು