1:50 AM Tuesday16 - April 2024
ಬ್ರೇಕಿಂಗ್ ನ್ಯೂಸ್
ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ… ಕಾರು ಬಿಟ್ಟು ಆಟೋ ಏರಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ: ಗಮನ… ಮಂಗಳೂರಿನಲ್ಲಿ ನಾಳೆ ‘ಇಂಡಿಯಾ’ ಘಟಕ ಪಕ್ಷಗಳು ಹಾಗೂ ಸಮಾನ ಮನಸ್ಕ ಸಂಘಟನೆಗಳಿಂದ ‘ಬಿಜೆಪಿ… ವಿಜಯ ಬ್ಯಾಂಕ್, ಕಾರ್ಪೊರೇಶನ್ ಬ್ಯಾಂಕ್‌ ಎಲ್ಲಿಗೆ ಹೋಯಿತು?; ಬಿಜೆಪಿ ನಾಯಕರು ಉತ್ತರಿಸಲಿ: ಮಾಜಿ… ಪ್ರಧಾನಿ ಮೋದಿ ರೋಡ್ ಶೋ: ಏರ್ ಪೋರ್ಟ್ ನಿಂದ ಲೇಡಿಹಿಲ್ ವರೆಗೆ ಎಸ್… ದ.ಕ.ಲೋಕಸಭೆ: ತಗ್ಗಿತೇ ಬಿಜೆಪಿ ಪ್ರಚಾರ?: ದಿನ ಕಳೆದಂತೆ ಸ್ಟ್ರಾಂಗ್ ಆಗುತ್ತಿದೆಯೇ ಪದ್ಮರಾಜ್ ಟೀಮ್… ಪೋಷಕರ ನಿರ್ಲಕ್ಷ್ಯ: ಏರ್ ಗನ್ ನಲ್ಲಿ ಶೂಟ್ ಮಾಡಿಕೊಂಡು 7 ವರ್ಷದ ಬಾಲಕ… ಬಾಳೆಹೊನ್ನೂರು ಭಾಗದಲ್ಲಿ ಭಾರೀ ವರ್ಷಧಾರೆ: ಕಾದ ನೆಲಕ್ಕೆ ತಂಪೆರಚಿದ ಮಳೆ; ಕೃಷಿಕರ ಮೊಗದಲ್ಲಿ…

ಇತ್ತೀಚಿನ ಸುದ್ದಿ

ರೈತ ಕಾರ್ಮಿಕರ ಹೋರಾಟದ ಪ್ರಚಾರಾಂದೋಲನ: ಮಂಗಳೂರಿನಲ್ಲಿ ಪಾದಯಾತ್ರೆ

03/08/2021, 08:18

ಮಂಗಳೂರು(reporterkarnataka.com): ಕ್ವಿಟ್ ಇಂಡಿಯಾ ಚಳುವಳಿಯ ಸವಿನೆನಪಿನಲ್ಲಿ ರೈತ ಕಾರ್ಮಿಕರ  ಸಖ್ಯತೆಯಲ್ಲಿ ಬೃಹತ್ ಹೋರಾಟವು ಆಗಸ್ಟ್ 9 ರಂದು ದೇಶಾದ್ಯಂತ ನಡೆಯಲಿದ್ದು, ಅದರ ಪ್ರಚಾರಾಂದೋಲನದ ಭಾಗವಾಗಿ ನಗರದಲ್ಲಿ ಸೋಮವಾರ ಸಿಐಟಿಯು ನೇತೃತ್ವದಲ್ಲಿ ಪಾದಯಾತ್ರೆ ನಡೆಸಿ ಸಾರ್ವಜನಿಕರಲ್ಲಿ ಜಾಗ್ರತಿ ಮೂಡಿಸಲಾಯಿತು.

ಪಾದಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದ ಸಿಐಟಿಯು ಜಿಲ್ಲಾಧ್ಯಕ್ಷ ಜೆ. ಬಾಲಕೃಷ್ಣ ಶೆಟ್ಟಿ, ದೇಶವನ್ನಾಳುವ ನರೇಂದ್ರ ಮೋದಿ ಸರಕಾರವು ಪ್ರತೀ ಹೆಜ್ಜೆಯಲ್ಲಿಯೂ ರೈತ ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೊಳಿಸುವ ಮೂಲಕ ದೇಶದ ಆರ್ಥಿಕತೆಯನ್ನು ಸರ್ವನಾಶಗೊಳಿಸಿದೆ. ಜನತೆಯ ಹಿತ ಕಾಪಾಡುವ ಬದಲು ಕಾರ್ಪೋರೇಟ್ ಕಂಪನಿಗಳ ಹಿತಾಸಕ್ತಿಗಳನ್ನು ಕಾಪಾಡುತ್ತಿದೆ. ಆ ಮೂಲಕ ದೇಶದ ಅಮೂಲ್ಯ ಸಂಪತ್ತುಗಳನ್ನು ಕಾರ್ಪೋರೇಟ್ ಕಂಪೆನಿಗಳಿಗೆ ಧಾರೆ ಎರೆದು ಕೊಡುತ್ತಿದೆ. ರೈತ ವಿರೋಧಿ ಮಸೂದೆಗಳನ್ನು ಜಾರಿಗೊಳಿಸಲು ಹೊರಟ ಕೇಂದ್ರ ಸರಕಾರವು ದೇಶದ ಕೃಷಿರಂಗವನ್ನೇ ಬುಡಮೇಲುಗೊಳಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಮಾತನಾಡಿ, ಅಂದು ಈಸ್ಟ್ ಇಂಡಿಯಾ ಕಂಪೆನಿಯ ಮೂಲಕ ದೇಶದ ಸಂಪತ್ತನ್ನು ದೋಚಿದ ಬ್ರಿಟೀಷರ ವಿರುದ್ದ ದೇಶದ ಜನತೆ ಸಮರ ಧೀರ ಹೋರಾಟ ನಡೆಸಿದರೆ, ಇಂದು ನಮ್ಮ ದೇಶದ ಸಂಪತ್ತನ್ನು ಕೊಳ್ಳೆಹೊಡೆಯುತ್ತಿರುವ ನೂರಾರು ಕಾರ್ಪೋರೇಟ್ ಕಂಪೆನಿಗಳ ವಿರುದ್ಧ ದೇಶದ ರೈತ ಕಾರ್ಮಿಕರು ಒಂದಾಗಿ ಪ್ರಬಲ ಚಳುವಳಿ ರೂಪಿಸಬೇಕಾಗಿದೆ ಎಂದು ಹೇಳಿದರು.

ಪಾದಯಾತ್ರೆಯಲ್ಲಿ ಸಿಐಟಿಯು ಜಿಲ್ಲಾ ಮುಖಂಡರಾದ ಜಯಂತಿ ಶೆಟ್ಟಿ, ಭಾರತಿ ಬೋಳಾರ, ಜಯಲಕ್ಷ್ಮಿ, ಸಂತೋಷ್ ಆರ್.ಎಸ್, ಅಶೋಕ್ ಸಾಲ್ಯಾನ್, ಕೃಷ್ಣ ತಣ್ಣೀರುಬಾವಿ, ಅನ್ವರ್ ಶೇಕ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು