5:53 AM Wednesday8 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ: ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳಿಗೆ ಆಹ್ವಾನ

04/08/2021, 09:20

ಮಂಗಳೂರು (reporterkarnataka.com): ಆತ್ಮನಿರ್ಭರ ಭಾರತ ಅಭಿಯಾನದ ಭಾಗವಾಗಿರುವ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ ಯೋಜನೆಯ ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಸಂಪನ್ಮೂಲ ವ್ಯಕ್ತಿಗಳಿಗೆ ಯಾವುದೇ ವೇತನ ಪಾವತಿಸುವುದಿಲ್ಲ, ಆದರೆ ಸಂಪನ್ಮೂಲ ವ್ಯಕ್ತಿಗಳಿಗೆ ನೀಡಲಾಗುವ ಹಣ ಪಾವತಿಯನ್ನು ಅವರು ಬೆಂಬಲಿಸಿರುವಂತಹ ಪ್ರತಿ ಫಲಾನುಭವಿಯನ್ನು ಆಧರಿಸಿ ಬ್ಯಾಂಕ್‍ನಿಂದ ಸಾಲ ಮಂಜೂರಾತಿ ಆದ ನಂತರ ಬ್ಯಾಂಕ್‍ನಿಂದ ಮಂಜೂರಾದ ಪ್ರತಿ ಸಾಲವನ್ನು ಆಧರಿಸಿ 20 ಸಾವಿರ ರೂ. ಗಳನ್ನು 2 ಕಂತುಗಳಲ್ಲಿ ಪಾವತಿಸಲಾಗುತ್ತದೆ.
ಈ ಪೈಕಿ ಶೇ.50 ಮೊತ್ತವನ್ನು ಬ್ಯಾಂಕಿನಿಂದ ಸಾಲ ಮಂಜೂರಾದ ನಂತರ ಹಾಗೂ ಉಳಿದ 50% ಹಣವನ್ನು ಘಟಕಗಳು ಜಿಎಸ್‍ಟಿ ಮತ್ತು ಉದ್ಯೋಗ ಆಧಾರ್ ನೋಂದಣಿಗಳನ್ನು ಪಡೆದ ನಂತರ ಎಫ್.ಎಸ್.ಎಸ್.ಎ.ಐ. ವತಿಯಿಂದ ಪ್ರಮಾಣಿತ ಅನುಸರಣೆಯನ್ನು ಪಡೆದ ನಂತರ ನೀಡಲಾಗುತ್ತದೆ.
ಅರ್ಹತೆಗಳಿವು: ಆಹಾರ ತಂತ್ರಜ್ಞಾನ ಆಹಾರ ಇಂಜಿನಿಯರಿಂಗ್‍ನಲ್ಲಿ ಡಿಪ್ಲಮೊ ಅಥವಾ ಪದವಿ ಪ್ರತಿಷ್ಠಿತ ರಾಷ್ಟ್ರ ಅಥವಾ ಅಂತರರಾಷ್ಟ್ರೀಯ ವಿಶ್ವವಿದ್ಯಾಲಯ ಸಂಸ್ಥೆಗಳಿಂದ, ಆಹಾರ ಸಂಸ್ಕರಣಾ ಕೈಗಾರಿಕೆಗಳಿಗೆ ತಂತ್ರಜ್ಞಾನ ಉನ್ನತೀಕರಣ, ಹೊಸ ಉತ್ಪನ್ನ ಅಭಿವೃದ್ಧಿ, ಗುಣಮಟ್ಟದ ಖಾತ್ರಿ, ಆಹಾರ ಭದ್ರತಾ ನಿರ್ವಹಣೆಗಾಗಿ ಸಲಹಾ ಸೇವೆಗಳನ್ನು ಒದಗಿಸಿದ 3 ರಿಂದ 5 ವರ್ಷ ಅನುಭವವಿರಬೇಕು, ಆಹಾರ ಸಂಸ್ಕರಣೆ, ಕೈಗಾರಿಕೆ, ಬ್ಯಾಂಕಿಂಗ್, ಡಿಪಿಆರ್ ಸಿದ್ಧಪಡಿಸುವಿಕೆ ಹಾಗೂ ತರಬೇತಿಯಲ್ಲಿ ಅನುಭವವುಳ್ಳ ವ್ಯಕ್ತಿಯನ್ನು ಪರಿಗಣಿಸಲಾಗುವುದು, ಕೃಷಿ ಮತ್ತು ಸಂಬಂಧಿತ ವಿಷಯಗಳಲ್ಲಿ ಪದವಿ ಪಡೆದಿರಬೇಕು, ಬ್ಯಾಂಕಿಂಗ್ ವಲಯದಲ್ಲಿ ಕೆಲಸದ ಅನುಭವವಿರಬೇಕು.

ಅರ್ಜಿ ಸಲ್ಲಿಸಲು ಆಗಸ್ಟ್ 7 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 0824-2423604 ಅಥವಾ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು