7:48 PM Thursday2 - May 2024
ಬ್ರೇಕಿಂಗ್ ನ್ಯೂಸ್
ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ…

ಇತ್ತೀಚಿನ ಸುದ್ದಿ

ಕೊರೊನಾ ಮೂರನೇ ಅಲೆಯ ಮುನ್ಸೂಚನೆ | ರಾತ್ರಿ ಕರ್ಫ್ಯೂ ಘೋಷಿಸಿದ ಸಿಎಂ, ಆ.23ರಿಂದ ಶಾಲೆ ಕಾಲೇಜ್ ತೆರೆಯಲು ಅವಕಾಶ.!!!!

06/08/2021, 15:19

ಬೆಂಗಳೂರು(reporterkarnataka.com)

ರಾಜ್ಯದಲ್ಲಿ ಕೊರೋನಾ 3ನೇ ಅಲೆಯ ಮುನ್ಸೂಚನೆ ನೀಡುತ್ತಿರುವ ಸಂದರ್ಭದಲ್ಲಿಯೇ ರಾಜ್ಯದಲ್ಲಿ ಆಗಸ್ಟ್ 23ರಿಂದ ಶಾಲಾ-ಕಾಲೇಜು ಆರಂಭ ಮಾಡುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ಆಗಸ್ಟ್ 23ರಿಂದ ರಾಜ್ಯದಲ್ಲಿ 9, 10, 11 ಮತ್ತು 12ನೇ ತರಗತಿ ಆರಂಭಿಸಲು ಕ್ರಮ ಕೈಗೊಂಡಿರುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಕೋವಿಡ್ ನಿರ್ವಹಣೆ ಕುರಿತ ನಡೆದಂತ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಗಡಿ ಜಿಲ್ಲೆಗಳಲ್ಲಿ ಕೊರೋನಾ ನಿಯಂತ್ರಣ ಸಂಬಂಧ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತ ನಿರ್ಧಾರ ಕೈಗೊಳ್ಳಲಾಗಿದೆ.

ಇಂದಿನಿಂದ ರಾತ್ರಿ 9 ಗಂಟೆಯಿಂದ ನೈಟ್ ಕರ್ಪ್ಯೂ ಜಾರಿಗೊಳಿಸಲಾಗುತ್ತಿದೆ. ಬೆಳಿಗ್ಗೆ 5 ಗಂಟೆಯವರೆಗೆ ನೈಟ್ ಕರ್ಪ್ಯೂ ಜಾರಿಯಲ್ಲಿ ಇರಲಿದೆ ಎಂಬುದಾಗಿ ತಿಳಿಸಿದ್ದಾರೆ.

ಕೋವಿಡ್ ತಾಂತ್ರಿಕಾ ಸಲಹಾ ಸಮಿತಿಯನ್ನು ಒಳಗೊಂಡ ಅಧಿಕಾರಿಗಳ ಸಭೆಯನ್ನು ನಡೆಸಲಾಯಿತು. ಪಾಸಿಟಿವಿಟಿ ರೇಟ್ ದರ ಆಧರಿಸಿ, ಕೆಲವು ನಿರ್ಧಾರ ಕೈಗೊಳ್ಳಲಾಗಿದೆ. ಮೊದಲನೆಯದಾಗಿ ಗಡಿ ಜಿಲ್ಲೆಗಳಲ್ಲಿ ಈಗ ಇರುವಂತ ನೈಟ್ ಕರ್ಪ್ಯೂವನ್ನು ವೀಕ್ ಎಂಡ್ ಕರ್ಪ್ಯೂ ಕೂಡ ಜಾರಿಗೊಳಿಸಲಾಗುತ್ತಿದೆ. ರಾಜ್ಯಾಧ್ಯಂತ ನೈಟ್ ಕರ್ಪ್ಯೂವನ್ನು ರಾತ್ರಿ 9 ರಿಂದ ಬೆಳಿಗ್ಗೆ 5ರವರೆಗೆ ಜಾರಿಗೊಳಿಸಲಾಗಿದೆ ಎಂದರು.


ಇತ್ತೀಚಿನ ಸುದ್ದಿ

ಜಾಹೀರಾತು