4:12 PM Friday26 - April 2024
ಬ್ರೇಕಿಂಗ್ ನ್ಯೂಸ್
ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ…

ಇತ್ತೀಚಿನ ಸುದ್ದಿ

ಖಾಸಗಿ ಬಸ್ ಪ್ರಯಾಣ ದರ ಏರಿಕೆ ತಡೆ ಹಿಡಿದು ಪ್ರಾಧಿಕಾರದ ಸಭೆ ಕರೆಯಿರಿ: ಜಾತ್ಯತೀತ ಪಕ್ಷಗಳು ಹಾಗೂ ಸಮಾನ ಮನಸ್ಕ ಸಂಘಟನೆಗಳ ಆಗ್ರಹ

11/08/2021, 14:36

ಮಂಗಳೂರು(reporterkarnataka.com): ಖಾಸಗೀ ಬಸ್ ಪ್ರಯಾಣ ದರದ ವಿಪರೀತ ಏರಿಕೆಯನ್ನು  ಖಂಡಿಸಿ, ದ.ಕ.ಜಿಲ್ಲಾಡಳಿತದ ಏಕಪಕ್ಷೀಯ ನಿರ್ಧಾರವನ್ನು ವಿರೋಧಿಸಿ, ದ.ಕ.ಜಿಲ್ಲೆಯ ಜಾತ್ಯತೀತ ಪಕ್ಷಗಳ ಹಾಗೂ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಮನವಿ ಅರ್ಪಿಸಲಾಯಿತು.

ಸಾರಿಗೆ ಪ್ರಾಧಿಕಾರದ ಸಭೆಯನ್ನು ಕರೆಯದೆ ಏಕಾಏಕಿಯಾಗಿ ಬಸ್ ಪ್ರಯಾಣ ದರವನ್ನು ಏರಿಸಿದ್ದು, ಸರ್ವಥಾ ಸರಿಯಲ್ಲ. ಕೊರೊನಾ ಸಂಕಷ್ಟದ ಕಾಲಘಟ್ಟದಲ್ಲಿ ಜಿಲ್ಲೆಯ ಲಕ್ಷಾಂತರ ಜನತೆ ಉದ್ಯೋಗವಿಲ್ಲದೆ ಆರ್ಥಿಕ ಸಮಸ್ಯೆಯಿಂದ ತೀವ್ರವಾಗಿ ಕಂಗೆಟ್ಟಿರುವಾಗ ಜಿಲ್ಲಾಧಿಕಾರಿ ಗಳು ಕೇವಲ ನೂರಾರು ಸಂಖ್ಯೆಯಲ್ಲಿರುವ ಬಸ್ ಮಾಲೀಕರ ನೋವಿಗೆ ಸ್ಪಂದಿಸುವ ನೆಪದಲ್ಲಿ ಸಾರಿಗೆ ಪ್ರಾಧಿಕಾರದ ನಿಯಮಗಳನ್ನು ಉಲ್ಲಂಘಿಸಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿರುವ ಸರ್ವ ರಾಜಕೀಯ ಪಕ್ಷಗಳು,ಕೂಡಲೇ ಏರಿಸಿದ ದರವನ್ನು ತಡೆ ಹಿಡಿದು, ಸಾರಿಗೆ ಪ್ರಾಧಿಕಾರದ ಸಭೆಯನ್ನು ಕರೆದು ಸಾರ್ವಜನಿಕರ ಅಹವಾಲನ್ನು ಸ್ವೀಕರಿಸಿ ಸೂಕ್ತ ತೀರ್ಮಾನವನ್ನು ಕೈಗೊಳ್ಳಬೇಕೆಂದು ಒಕ್ಕೊರಲಿನಿಂದ ಒತ್ತಾಯಿಸಿವೆ.

ನಿಯೋಗದಲ್ಲಿ ಕಾಂಗ್ರೆಸ್ ಪಕ್ಷದ ನಾಯಕರಾದ ಸದಾಶಿವ ಉಳ್ಳಾಲ್, ಶಶಿಧರ್ ಹೆಗ್ಡೆ, ನೀರಜ್ ಪಾಲ್, ಸಿಪಿಎಂ ನಾಯಕರಾದ ವಸಂತ ಆಚಾರಿ, ಸುನಿಲ್ ಕುಮಾರ್ ಬಜಾಲ್, ಸಿಪಿಐ ಮುಖಂಡರಾದ ಕರುಣಾಕರ್, ಜಗತ್ಪಾಲ್, ಜಾತ್ಯತೀತ ಜನತಾದಳದ ಮುಖಂಡರಾದ ಸುಮತಿ ಎಸ್ ಹೆಗ್ಡೆ, ಅಲ್ತಾಫ್ ತುಂಬೆ, ಡಿವೈಎಫ್ ಐI ನಾಯಕರಾದ ಮುನೀರ್ ಕಾಟಿಪಳ್ಳ, ಸಂತೋಷ್ ಬಜಾಲ್, ದಲಿತ ಸಂಘಟನೆಗಳ ನಾಯಕರಾದ ಎಂ.ದೇವದಾಸ್, ರಘು ಎಕ್ಕಾರು, ತಿಮ್ಮಯ್ಯ ಕೊಂಚಾಡಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು