10:40 AM Saturday18 - September 2021
ಬ್ರೇಕಿಂಗ್ ನ್ಯೂಸ್
ಕೋಲಾರ: ಮಕ್ಕಳಲ್ಲಿ ಹೆಚ್ಚಾಗುತ್ತಿರುವ ವೈರಲ್ ಫೀವರ್ ತಡೆಗೆ ವಿಶೇಷ ವೈದ್ಯರ ತಂಡ ರಚಿಸಿ,… ಕಾರ್ಕಳ: ಕಾಲೇಜಿಗೆಂದು ತೆರಳಿದ 17ರ ಹರೆಯದ ತರುಣ ನಾಪತ್ತೆ ಒಂದೇ ದಿನ 2 ಕೋಟಿ ಜನರಿಗೆ ವ್ಯಾಕ್ಸಿನೇಶನ್: ಹೊಸ ದಾಖಲೆ ನಿರ್ಮಾಣ; ಯಾವ… ಹುಬ್ಬಳ್ಳಿಯಲ್ಲಿ ಕಣ್ಣೀರು ಸುರಿಸಿದ ಮುಖ್ಯಮಂತ್ರಿ ಬೊಮ್ಮಾಯಿ !!: ಅಷ್ಟಕ್ಕೂ ಸಿಎಂ ದುಃಖಿಸಿದ್ದು ಯಾಕಾಗಿ?  ಪ್ರಧಾನಿ ಮೋದಿ ಜನ್ಮದಿನಾಚರಣೆ: ಮಂಗಳೂರಿನಲ್ಲಿ ಕಾಂಗ್ರೆಸ್ ನಿಂದ ಟೀ, ಪಕೋಡ ಮಾರಿ ವಿನೂತನ… ವಿಶ್ವದ ಅಗ್ರ ಶ್ರೇಣಿಯ ಆಪಲ್ ‘ಐಫೋನ್ 13’ ಸರಣಿ ಬಿಡುಗಡೆ !; ಹಾಗಾದರೆ… ರಾಜ್ಯದ 372 ತಾಲೂಕುಗಳಲ್ಲಿ ಸ್ಮಶಾನವೇ ಇಲ್ಲ: ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದೇನು?… ವರ್ಗಾವಣೆ ನಿರೀಕ್ಷೆಯಲ್ಲಿದ್ದ ರಾಜ್ಯದ ಶಿಕ್ಷಕರಿಗೆ ಬಿಗ್ ಶಾಕ್: ಹಾಗಾದರೆ ಸರಕಾರ ಹೊರಡಿಸಿದ ಹೊಸ… ದೇಗುಲ ಧ್ವಂಸ; ಮೈಸೂರು ಉಸ್ತುವಾರಿ ಸಚಿವರು ರಾಜೀನಾಮೆ ನೀಡಲಿ: ಮಾಜಿ ಸಚಿವ ಯು.ಟಿ.ಖಾದರ್… ಬಾಲಿವುಡ್ ನಟ, ದಾನಿ ಸೋನು ಸೂದ್‌ಗೆ ಸೇರಿದ 6 ಸ್ಥಳಗಳಿಗೆ ಐಟಿ ದಾಳಿ:…

ಇತ್ತೀಚಿನ ಸುದ್ದಿ

ಇಂದಿನಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ: ಜಿಲ್ಲೆಯ 6 ಪರೀಕ್ಷೆ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ

19/08/2021, 08:22

ಸಾಂದರ್ಭಿಕ ಚಿತ್ರ
ಮಂಗಳೂರು(reporterkarnataka.com): ಜಿಲ್ಲೆಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆಗಸ್ಟ್ 19ರಿಂದ ಸೆಪ್ಟೆಂಬರ್ 3ರ ವರೆಗೆ ನಡೆಯಲಿರುವ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಗಳನ್ನು ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ ಜಿಲ್ಲೆಯ 6 ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತಲಿನ ಪ್ರದೇಶದಲ್ಲಿ ಸೆಕ್ಷನ್ 144 ರಂತೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. 

ಪರೀಕ್ಷೆಯಲ್ಲಿ ನಕಲು ಮಾಡಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು ಅಥವಾ ಇನ್ನಾವುದೇ ವಸ್ತುಗಳನ್ನು ಹಂಚುವುದು ಅಥವಾ ರವಾನಿಸುವುದು ಇತ್ಯಾದಿ ಚಟುವಟಿಕೆಗಳನ್ನು ಹಾಗೂ ಯಾವುದೇ ರೀತಿಯ ಸ್ಫೋಟಕ ವಸ್ತುಗಳನ್ನು ಕೊಂಡು ಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೇಧಿಸಲಾಗಿದೆ.
ನಿಷೇಧಿತ ವಲಯದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಯಾವುದೇ ವಿಷಯಗಳನ್ನು/ಮಾಹಿತಿಯನ್ನು ರವಾನಿಸುವ ಅಥವಾ ತಿಳಿಸುವ ಸಲುವಾಗಿ ಸಂಜ್ಞೆಗಳನ್ನು ಮಾಡುವುದು ಹಾಗೂ ಇನ್ನಿತರ ಕ್ರಿಯೆಗಳಲ್ಲಿ ತೊಡಗುವುದನ್ನು ಸಂಪೂರ್ಣವಾಗಿ
ನಿಷೇಧಿಸಲಾಗಿದೆ. ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷಾ ಅವಧಿಯವರೆಗೆ ಪರೀಕ್ಷಾ ಕೇಂದ್ರಗಳಿಂದ 200 ಮೀಟರ್ ವ್ಯಾಪ್ತಿಯಲ್ಲಿರುವ ಜೆರಾಕ್ಸ್ ಅಂಗಡಿಗಳು ಕಾರ್ಯ ನಿರ್ವಹಿಸುವುದನ್ನು ನಿಷೇಧಿಸಿದೆ. 
ಈ ಆದೇಶವು ನಿಷೇಧಾಜ್ಞೆ ಜಾರಿಯಲ್ಲಿರುವ ಪ್ರದೇಶದಲ್ಲಿ ಸರಕಾರದಿಂದ ಅಥವಾ ಸರಕಾರದ ಆದೇಶದಂತೆ ನಡೆಸಲ್ಪಡುವ ಯಾವುದೇ ಕಾರ್ಯಕ್ರಮ ಸಭೆ ಸಮಾರಂಭಗಳಿಗೆ ಅನ್ವಯವಾಗುವುದಿಲ್ಲ ಮತ್ತು ಪೊಲೀಸ್ ಅಧಿಕಾರಿಗಳು, ಬ್ಯಾಂಕ್ ಭದ್ರತಾ ಸಿಬ್ಬಂದಿಗಳು ಕರ್ತವ್ಯ ನಿರ್ವಹಣೆ ವೇಳೆ ಲಾಠಿ, ಶಸ್ತ್ರಾಸ್ತ್ರ ಉಪಯೋಗಿಸುವುದಕ್ಕೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾ ದಂಡಾಧಿಕಾರಿಗಳೂ ಆದ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

ಇತ್ತೀಚಿನ ಸುದ್ದಿ

ಜಾಹೀರಾತು