8:16 PM Thursday25 - April 2024
ಬ್ರೇಕಿಂಗ್ ನ್ಯೂಸ್
ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ…

ಇತ್ತೀಚಿನ ಸುದ್ದಿ

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಕಲ್ಯಾಣ್ ಸಿಂಗ್ ವಿಧಿವಶ

21/08/2021, 23:21

ಲಕ್ನೋ(reporterkarnataka.com):
ಅನಾರೋಗ್ಯದಿಂದ ಬಳಲುತ್ತಿದ್ದ ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಹಾಗೂ ರಾಜಸ್ಥಾನದ ಮಾಜಿ ರಾಜ್ಯಪಾಲ ಕಲ್ಯಾಣ್  ಸಿಂಗ್ (89)  ಲಖನೌನ ಪಿಜಿಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ.

ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರ ಆರೋಗ್ಯ ಹದಗೆಟ್ಟಿದ್ದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಲಕ್ನೋದ ಸಂಜಯ್ ಗಾಂಧಿ ಪೋಸ್ಟ್​ ಗ್ರ್ಯಾಜುವೇಟ್​ ಇನ್​ಸ್ಟಿಟ್ಯೂಟ್​ ಆಫ್​ ಮೆಡಿಕಲ್ ಸೈನ್ಸಸ್ (ಎಸ್​ಜಿಪಿಜಿಐ) ಆಸ್ಪತ್ರೆಗೆ ಜುಲೈ 4ರಂದು ಚಿಕಿತ್ಸೆಗಾಗಿ ಸೇರಿಸಲಾಗಿತ್ತು.

ಎಸ್​ಜಿಪಿಜಿಐ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ ಅವರ ಆರೋಗ್ಯ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿರಲಿಲ್ಲ. ಸಾಕಷ್ಟು ಚಿಕಿತ್ಸೆ ನೀಡಿ ಗುಣಪಡಿಸಲು ಯತ್ನಿಸಿದ್ದರೂ ಅವರು ಇಂದು ಇಹಲೋಕ ತ್ಯಜಿಸಿದರು.

ಕಲ್ಯಾಣ್ ಸಿಂಗ್ ನಿಧನಕ್ಕೇ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಹಲವು ನಾಯಕರುಗಳು ಸಂತಾಪ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು