9:37 AM Saturday18 - September 2021
ಬ್ರೇಕಿಂಗ್ ನ್ಯೂಸ್
ಕೋಲಾರ: ಮಕ್ಕಳಲ್ಲಿ ಹೆಚ್ಚಾಗುತ್ತಿರುವ ವೈರಲ್ ಫೀವರ್ ತಡೆಗೆ ವಿಶೇಷ ವೈದ್ಯರ ತಂಡ ರಚಿಸಿ,… ಕಾರ್ಕಳ: ಕಾಲೇಜಿಗೆಂದು ತೆರಳಿದ 17ರ ಹರೆಯದ ತರುಣ ನಾಪತ್ತೆ ಒಂದೇ ದಿನ 2 ಕೋಟಿ ಜನರಿಗೆ ವ್ಯಾಕ್ಸಿನೇಶನ್: ಹೊಸ ದಾಖಲೆ ನಿರ್ಮಾಣ; ಯಾವ… ಹುಬ್ಬಳ್ಳಿಯಲ್ಲಿ ಕಣ್ಣೀರು ಸುರಿಸಿದ ಮುಖ್ಯಮಂತ್ರಿ ಬೊಮ್ಮಾಯಿ !!: ಅಷ್ಟಕ್ಕೂ ಸಿಎಂ ದುಃಖಿಸಿದ್ದು ಯಾಕಾಗಿ?  ಪ್ರಧಾನಿ ಮೋದಿ ಜನ್ಮದಿನಾಚರಣೆ: ಮಂಗಳೂರಿನಲ್ಲಿ ಕಾಂಗ್ರೆಸ್ ನಿಂದ ಟೀ, ಪಕೋಡ ಮಾರಿ ವಿನೂತನ… ವಿಶ್ವದ ಅಗ್ರ ಶ್ರೇಣಿಯ ಆಪಲ್ ‘ಐಫೋನ್ 13’ ಸರಣಿ ಬಿಡುಗಡೆ !; ಹಾಗಾದರೆ… ರಾಜ್ಯದ 372 ತಾಲೂಕುಗಳಲ್ಲಿ ಸ್ಮಶಾನವೇ ಇಲ್ಲ: ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದೇನು?… ವರ್ಗಾವಣೆ ನಿರೀಕ್ಷೆಯಲ್ಲಿದ್ದ ರಾಜ್ಯದ ಶಿಕ್ಷಕರಿಗೆ ಬಿಗ್ ಶಾಕ್: ಹಾಗಾದರೆ ಸರಕಾರ ಹೊರಡಿಸಿದ ಹೊಸ… ದೇಗುಲ ಧ್ವಂಸ; ಮೈಸೂರು ಉಸ್ತುವಾರಿ ಸಚಿವರು ರಾಜೀನಾಮೆ ನೀಡಲಿ: ಮಾಜಿ ಸಚಿವ ಯು.ಟಿ.ಖಾದರ್… ಬಾಲಿವುಡ್ ನಟ, ದಾನಿ ಸೋನು ಸೂದ್‌ಗೆ ಸೇರಿದ 6 ಸ್ಥಳಗಳಿಗೆ ಐಟಿ ದಾಳಿ:…

ಇತ್ತೀಚಿನ ಸುದ್ದಿ

7 ಕಿಮೀ ಶಿರಸಾಷ್ಟಾಂಗ ನಮಸ್ಕಾರ ಸಾಕಾರ: ತುರುವಿಹಾಳ ಭರ್ಜರಿ ಗೆಲುವಿಗೆ ಹೊತ್ತ ಹರಕೆ ಪೂರೈಸಿದ ವಿಶ್ವನಾಥ ದೇಸಾಯಿ !!

24/08/2021, 11:37

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಉಪ ಚುನಾವಣೆಯಲ್ಲಿ ಭರ್ಜರಿ ಮತಗಳಿಂದ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರುವಿಹಾಳ ಜಯಗಳಿಸಿದರೆ ಮಸ್ಕಿಯ ಗುಡದೂರು ಗ್ರಾಮದ ಮಲ್ಲಿಕಾರ್ಜುನ ದೇವಸ್ಥಾನದ ವರೆಗೆ ಶಿರಸಾಷ್ಟಾಂಗ ನಮಸ್ಕಾರಗಳು ಹಾಕುವುದಾಗಿ ಹರಕೆ ಹೊತ್ತ ಗುಡೂರು ಗ್ರಾಮದ ತುರುವಿಹಾಳ ಅವರ ಅಪ್ಪಟ ಅಭಿಮಾನಿಯೊಬ್ಬರು ಇದೀಗ ಹರಕೆ ನೆರವೇರಿಸಿದ್ದಾರೆ.

ಮಸ್ಕಿ ತಾಲೂಕಿನ ಗುಡದೂರು ಗ್ರಾಮದಲ್ಲಿ ನೂತನ ಶಾಸಕರಿಗೆ ನಡೆಸಿದ ಅಭಿನಂದನಾ ಸಮಾರಂಭ ವೇಳೆ ವಿಶ್ವನಾಥ ದೇಸಾಯಿ ಎಂಬವರು ಬರೋಬ್ಬರಿ 7 ಕಿಮೀ. ದೂರದಿಂದ ಶಿರಸಾಷ್ಟಾಂಗ ನಮಸ್ಕಾರ ಮಾಡುತ್ತಾ ಮಸ್ಕಿಯ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ತಲುಪಿದರು. ಶಿರಸಾಷ್ಟಾಂಗಣ ಕ್ಷಣಗಳನ್ನು ಕಂಗಳಲ್ಲಿ ತುಂಬಿಸಿಕೊಳ್ಳಲು ಭಾರಿ ಸಂಖ್ಯೆಯಲ್ಲಿ ಜನಸ್ತೋಮ ನೆರೆದಿತ್ತು.

ಈ ಸಂದರ್ಭದಲ್ಲಿ ಶಾಸಕರು ಆರ್. ಬಸನಗೌಡ ತುರುವಿಹಾಳ, ಮಾಜಿ ಸಂಸದ ಶಿವರಾಮೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನುಮಂತಪ್ಪ ಮುದ್ದಾಪುರ, ಯೂತ್ ಕಾಂಗ್ರೆಸ್ ಅಧ್ಯಕ್ಷ ಹನುಮೇಶ ಬಾಗೋಡಿ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಶಿವಣ್ಣ ನಾಯಕ್, ಸಿದ್ದಣ್ಣ ಹೂವಿನಬಾವಿ, ಬಸವರಾಜ ಹಿರೇಗೌಡರು, ವೆಂಕನಗೌಡ ಕೋಳಬಾಳ, ಮಲ್ಲನಗೌಡ ಸುಂಕನೂರ್, ಮಾಂತೇಶ್ ಜಾಲವಾಡಗಿ, ಸಿದ್ದನಗೌಡ ಮಾಟೂರು, ದುರ್ಗೇಶ್ ವಕೀಲರು, ಸಂಜಯ್ ಬಳಗನೂರ್, ಮಂಜುನಾಥ್, ಹುಲ್ಲೇಶ, ಮಲ್ಲೇಶ ಗುಡುದೂರು ಮುಂತಾದವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ತುರುವಿಹಾಳ, ಮತದಾರರ ಋಣ ತೀರಿಸುವುದಾಗಿ ವಾಗ್ದಾನ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು