11:51 AM Tuesday23 - April 2024
ಬ್ರೇಕಿಂಗ್ ನ್ಯೂಸ್
ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ… ತಂತ್ರಜ್ಞಾನ ಅಭಿವೃದ್ಧಿಯಾಗಿದ್ದರೂ ಚುನಾವಣೆ 60 ದಿನಗಳ ಕಾಲ ನಡೆಯುತ್ತಿರುವುದು ಅನುಮಾನಾಸ್ಪದ: ಮಾಜಿ ಸಿಎಂ… ಸಿದ್ದರಾಮಯ್ಯ ಸರಕಾರದಲ್ಲಿ ಬದುಕಿನ ಗ್ಯಾರಂಟಿ ಕಳೆದುಕೊಂಡ ಕನ್ನಡಿಗರು: ಶಾಸಕ ಡಾ. ವೈ ಭರತ್… ನಮ್ಮ ಕೆಲಸವೇ ಅಪಪ್ರಚಾರ ನಡೆಸುವವರಿಗೆ ತಕ್ಕ ಉತ್ತರ: ಸರಪಾಡಿ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ… ಗಾಳಿ ಮಳೆಗೆ ಮರ ಬಿದ್ದು ತಂಡಾದ ಪವರ್ ಲೈನ್: ವಿದ್ಯುತ್ ಶಾಕ್ ಹೊಡೆದು… ಕೊಲ್ಯದಿಂದ ಅಬ್ಬಕ್ಕ ರಾಣಿ ಸರ್ಕಲ್‌ ವರೆಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ… 91ರ ಹರೆಯದ ಮಾಜಿ ಪ್ರಧಾನಿ ದೇವೇಗೌಡರು ಮೋದಿ ಗೆಲ್ಲಿಸಿ ಎನ್ನುತ್ತಿದ್ದಾರೆ; ದಿನಬಳಕೆ ವಸ್ತುಗಳ… ಮಂಗಳೂರು ಮಾಜಿ ಮೇಯರ್ ಕವಿತಾ ಸನಿಲ್ ಬಿಜೆಪಿ ಸೇರ್ಪಡೆ: ಪಕ್ಷದ ಧ್ವಜ ನೀಡಿ…

ಇತ್ತೀಚಿನ ಸುದ್ದಿ

ಅಗಸ್ಟ್‌ 27ರ ವರೆಗೆ ಉತ್ತರ, ಈಶಾನ್ಯ ಭಾರತದಲ್ಲಿ ಭಾರಿ ಮಳೆ ನಿರೀಕ್ಷೆ: ಹವಾಮಾನ ಇಲಾಖೆ

24/08/2021, 09:52

ನವದೆಹಲಿ(reporterkarnataka.com) : ಮುಂದಿನ ಮೂರು ದಿನಗಳ ಕಾಲ ಕರ್ನಾಟಕ ಸೇರಿದಂತೆ ಈಶಾನ್ಯ ಭಾರತ, 

ಹಿಮಾಲಯ ಪ್ರಾಂತ್ಯ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಪೂರ್ವ ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ಬಿಹಾರದಲ್ಲಿ ಆ.27ರ ವರೆಗೂ ಬಿರುಸಿನ ಭಾರೀ ಮಳೆಯಾಗಲಿದೆ. ಆಗಸ್ಟ್ 23 ರಿಂದ 25 ರವರೆಗೆ ಅಸ್ಸಾಂ ಮತ್ತು ಮೇಘಾಲಯ, ಅಲ್ಲದೇ ಆಗಸ್ಟ್ 23, 26 ಮತ್ತು 27 ರಂದು ತಮಿಳುನಾಡು, ಕೇರಳ ಮತ್ತು ಮಾಹೆಯಲ್ಲಿ ವ್ಯಾಪಕವಾದ ಮಳೆಯಿಂದಾಗಿ ವ್ಯಾಪಕ ಮಳೆ ಸುರಿಯಲಿದೆ. ಇನ್ನು ರಾಜಸ್ಥಾನದಲ್ಲಿ ಅಗಸ್ಟ್‌ 27ರ ವರಗೆ ಮಳೆಯಾಗಲಿದೆ ಎಂದು ಹೇಳಿದೆ.

ಕಳೆದ ಕೆಲವು ದಿನಗಳಿಂದಲೂ ಕರ್ನಾಟಕ ಕೆಲವು ಕಡೆಗಳಲ್ಲಿ ಮಳೆಯಾಗುತ್ತಿದೆ. ಅಲ್ಲದೇ ಇನ್ನೆರಡು ದಿನಗಳ ಕಾಲ ಮಳೆ ಮುಂದುವರಿಯಲಿದೆ. ಅದ್ರಲ್ಲೂ ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು