9:58 AM Saturday18 - September 2021
ಬ್ರೇಕಿಂಗ್ ನ್ಯೂಸ್
ಕೋಲಾರ: ಮಕ್ಕಳಲ್ಲಿ ಹೆಚ್ಚಾಗುತ್ತಿರುವ ವೈರಲ್ ಫೀವರ್ ತಡೆಗೆ ವಿಶೇಷ ವೈದ್ಯರ ತಂಡ ರಚಿಸಿ,… ಕಾರ್ಕಳ: ಕಾಲೇಜಿಗೆಂದು ತೆರಳಿದ 17ರ ಹರೆಯದ ತರುಣ ನಾಪತ್ತೆ ಒಂದೇ ದಿನ 2 ಕೋಟಿ ಜನರಿಗೆ ವ್ಯಾಕ್ಸಿನೇಶನ್: ಹೊಸ ದಾಖಲೆ ನಿರ್ಮಾಣ; ಯಾವ… ಹುಬ್ಬಳ್ಳಿಯಲ್ಲಿ ಕಣ್ಣೀರು ಸುರಿಸಿದ ಮುಖ್ಯಮಂತ್ರಿ ಬೊಮ್ಮಾಯಿ !!: ಅಷ್ಟಕ್ಕೂ ಸಿಎಂ ದುಃಖಿಸಿದ್ದು ಯಾಕಾಗಿ?  ಪ್ರಧಾನಿ ಮೋದಿ ಜನ್ಮದಿನಾಚರಣೆ: ಮಂಗಳೂರಿನಲ್ಲಿ ಕಾಂಗ್ರೆಸ್ ನಿಂದ ಟೀ, ಪಕೋಡ ಮಾರಿ ವಿನೂತನ… ವಿಶ್ವದ ಅಗ್ರ ಶ್ರೇಣಿಯ ಆಪಲ್ ‘ಐಫೋನ್ 13’ ಸರಣಿ ಬಿಡುಗಡೆ !; ಹಾಗಾದರೆ… ರಾಜ್ಯದ 372 ತಾಲೂಕುಗಳಲ್ಲಿ ಸ್ಮಶಾನವೇ ಇಲ್ಲ: ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದೇನು?… ವರ್ಗಾವಣೆ ನಿರೀಕ್ಷೆಯಲ್ಲಿದ್ದ ರಾಜ್ಯದ ಶಿಕ್ಷಕರಿಗೆ ಬಿಗ್ ಶಾಕ್: ಹಾಗಾದರೆ ಸರಕಾರ ಹೊರಡಿಸಿದ ಹೊಸ… ದೇಗುಲ ಧ್ವಂಸ; ಮೈಸೂರು ಉಸ್ತುವಾರಿ ಸಚಿವರು ರಾಜೀನಾಮೆ ನೀಡಲಿ: ಮಾಜಿ ಸಚಿವ ಯು.ಟಿ.ಖಾದರ್… ಬಾಲಿವುಡ್ ನಟ, ದಾನಿ ಸೋನು ಸೂದ್‌ಗೆ ಸೇರಿದ 6 ಸ್ಥಳಗಳಿಗೆ ಐಟಿ ದಾಳಿ:…

ಇತ್ತೀಚಿನ ಸುದ್ದಿ

ಜಾಜಿ ರಾಜು ಭರತನಾಟ್ಯ ರಂಗಪ್ರವೇಶ: ಬೆಂಗಳೂರಿನ ಜೆಎಸ್‌ಎಸ್‌ ಸಭಾಂಗಣದಲ್ಲಿ ಪ್ರಸ್ತುತಿ

24/08/2021, 08:28

ಬೆಂಗಳೂರು(reporterkarnataka.com): ಕಲಾಕ್ಷಿತಿ ಸ್ಕೂಲ್‌ ಆಫ್‌ ಫೈನ್‌ ಆರ್ಟ್‌ ವತಿಯಿಂದ ಜಯನಗರದ ಜೆಎಸ್‌ಎಸ್‌ ಸಭಾಂಗಣದ ಶಿವರಾತ್ರೀಶ್ವರ ಕೆಂದ್ರದಲ್ಲಿ ನಡೆದ ಭರತನಾಟ್ಯ ರಂಗಪ್ರವೇಶ ಕಾರ್ಯಕ್ರಮದಲ್ಲಿ ಡಾ.ಎಂ.ಆರ್‌. ಕೃಷ್ಣಮೂರ್ತಿ ಅವರ ಶಿಷ್ಯೆ ಜಾಜಿ ರಾಜು ಭರತನಾಟ್ಯ ಪ್ರಸ್ತುತಪಡಿಸಿದರು. 


ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ಸ್ವಾಮೀಜಿಗಳ ಸಾನಿಧ್ಯದಲ್ಲಿ ನಡೆದ ರಂಗಪ್ರವೇಶ ಕಾರ್ಯಕ್ರಮದಲ್ಲಿ ಡಾನ್ಸ್‌ ಹಿಸ್ಟೋರಿಯನ್‌


ಕರುಣಾ ವಿಜಯೇಂದ್ರ, ನಟರಾಜ ನೃತ್ಯ ಶಾಲಾ ನಿರ್ದೇಶಕಿ ಗುರು ವಸುಂಧರಾ ಸಂಪತ್‌ ಕುಮಾರ್‌, ಕಂದಾಯ ಸಚಿವ ಆರ್‌. ಅಶೋಕ್‌, ಸಂಸದ ತೇಜಸ್ವಿ ಸೂರ್ಯ, ಬೊಮ್ಮನಹಳ್ಳಿ ಶಾಸಕ ಸತೀಶ್‌ ರೆಡ್ಡಿ ಮುಖ್ಯ ಅತಿಥಿಗಳಾಗಿ  ಭಾಗವಹಿಸಿದ್ದರು. 


ಜಾಜಿ ರಾಜು ಅವರು ಸುನಿತಾ ಮತ್ತು ಮೋಹನ್‌ ರಾಜು ಅವರ ಮಗಳು. ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ನಾಟಕಕಾರ ಬಿ. ಬೋರೇಗೌಡ ಅವರ ಮೊಮ್ಮಗಳು. ಸ್ವತಃ ಭರತನಾಟ್ಯ ಕಲಾವಿದೆ ಆಗಿರುವ ತಮ್ಮ ತಾಯಿ ಸುನಿತಾ ಅವರ ಮಾರ್ಗದರ್ಶನದಲ್ಲಿ ಸಣ್ಣ ವಯಸ್ಸಿನಿಂದಲೇ ಭರತನಾಟ್ಯವನ್ನು ಅಭ್ಯಸಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು