7:22 PM Thursday25 - April 2024
ಬ್ರೇಕಿಂಗ್ ನ್ಯೂಸ್
ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ…

ಇತ್ತೀಚಿನ ಸುದ್ದಿ

ಅಗಲಿದ ಪತ್ರಕರ್ತ ಗುಡಿಹಳ್ಳಿ ನಾಗರಾಜ: ಕೂಡ್ಲಿಗಿ ಪತ್ರಕರ್ತರಿಂದ ಸಂತಾಪ, ನುಡಿನಮನ ಸಲ್ಲಿಕೆ

27/08/2021, 11:16

ವಿ.ಜಿ. ವೃಷಭೇಂದ್ರ ಕೂಡ್ಲಿಗಿ ವಿಜಯನಗರ
info.reporterkarnataka@gmail.com

ಹಿರಿಯ ಪತ್ರಕರ್ತ, ಬಂಡಾಯ ಸಾಹಿತ್ಯ ಸಂಘಟನೆಯ ರಾಜ್ಯ ಸಂಚಾಲಕ ಹಾಗೂ ಕನ್ನಡ ಸಂಸ್ಕೃತಿ ಸಾಹಿತ್ಯ ಲೋಕದೊಂದಿಗೆ ಗುರುತಿಸಿಕೊಂಡಿದ್ದ ಗುಡಿಹಳ್ಳಿ ನಾಗರಾಜ ಗುರುವಾರ ನಿಧನಕ್ಕೆ ಕರ್ನಾಟ ಪತ್ರಕರ್ತರ ಸಂಘದ ಕೂಡ್ಲಿಗಿ ಘಟಕದ ಪದಾಧಿಕಾರಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.

ಅವರು ಕರ್ನಾಟಕ ನಾಟಕ ಅಕಾಡೆಮಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ರಾಜ್ಯೋತ್ಸವ ಪ್ರಶಸ್ತಿ, ಕೆಂಪೇಗೌಡ, ಮುರುಘ ರಾಜೇಂದ್ರ, ನಾಟಕ ಅಕಾಡೆಮಿ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದರು. ಕರ್ನಾಟಕದ ವೃತ್ತಿ ರಂಗಭೂಮಿಯ ಬಗ್ಗೆ ಅಳವಾದ ಜ್ಞಾನ ಹೊಂದಿದ್ದ, ಹಲವು ನಟ-ನಟಿಯರ ಜೀವನಚರಿತ್ರೆಗಳನ್ನು ಬರೆದಿದ್ದ ಹಿರಿಯ ಪತ್ರಕರ್ತ ಗುಡಿಹಳ್ಳಿ ನಾಗರಾಜ್ ಬೆಂಗಳೂರಿನಲ್ಲಿ  ಗುರುವಾರ ನಿಧನರಾಗಿದ್ದಾರೆ.

ಅವರಿಗೆ 67 ವರ್ಷ ವಯಸಾಗಿತ್ತು ಹರಪನಹಳ್ಳಿ ತಾಲ್ಲೂಕು ಗುಡಿಹಳ್ಳಿ ಅವರ ಹುಟ್ಟೂರು. ಅವರು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಎಂಎ ಇಂಗ್ಲಿಷ್ ಪದವಿ ಪಡೆದು, ಹರಪನಹಳ್ಳಿಯಲ್ಲಿ ಮೂರು ವರ್ಷ (1980-83) ಉಪನ್ಯಾಸಕರಾಗಿದ್ದರು.

1983ರಲ್ಲಿ ಪ್ರಜಾವಾಣಿ ಸೇರಿ ಸುಮಾರು 31 ವರ್ಷ ಕಾಲ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದರು. ಎಂ.ಪಿ.ಪ್ರಕಾಶ ಸೇರಿದಂತೆ ರಾಜ್ಯದ ಪ್ರಭಾವಿಗಳ ಆತ್ಮೀಯ ಒಡನಾಡಿಗಳಾಗಿದ್ದರು. ಕರ್ನಾಟಕ ರಂಗಭೂಮಿಯ ಬಗ್ಗೆ ಅಪಾರ ಪ್ರೀತಿ ಮತ್ತು ಅಭಿಮಾನಗಳನ್ನು ಗುಡಿಹಳ್ಳಿ ನಾಗರಾಜ ಹೊಂದಿದ್ದರು.

ಶ್ರದ್ಧಾಂಜಲಿ ಅರ್ಪಣೆ: ಗುಡಿಹಳ್ಳಿ ನಾಗರಾಜರವರ ಅಗಲಿಕೆ ಹಿನ್ನಲೆಯಲ್ಲಿ ಕರ್ನಾಟಕ ಪತ್ರಕರ್ತರ ಸಂಘದ ಕೂಡ್ಲಿಗಿ ಘಟಕದ ಪದಾಧಿಕಾರಿಗಳು ಶ್ರದ್ಧಾಂಜಲಿ ಅರ್ಪಿಸಿದ್ದಾರೆ,

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಬೆಳ್ಳಗಟ್ಟೆ ಕೃಷ್ಣಪ್ಪ ನುಡಿನಮನ ಅರ್ಪಿಸಿದರು.ಗುಡಿಹಳ್ಳಿ ನಾಗರಾಜರ ಅಗಲಿಕೆ ಪತ್ರಕರ್ತರ ಸಂಘಕ್ಕೆ ಅಘಾತವನ್ನುಂಟು ಮಾಡಿದೆ.

ಅವರು ಹದಿನೈದಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿದ್ದಾರೆ. ರಂಗನೇಪಥ್ಯ ಎಂಬ ಮಾಸಪತ್ರಿಕೆ ಪ್ರಕಟಿಸುತ್ತಿದ್ದರು, ನಾಲ್ಕು ರಂಗತಂಡಗಳ ನೇತೃತ್ವವನ್ನೂ ವಹಿಸಿಕೊಂಡಿದ್ದರು.

ರಂಗನಾಟಕ ಪ್ರಯೋಗ ಸಾರ್ಥಕತೆ, ಮಾಲತಿಶ್ರೀ ಮೈಸೂರು ಆತ್ಮಕತೆ (ತೆರೆ ಸರಿದಾಗ),ಮರಿಯಮ್ಮನಹಳ್ಳಿ ಡಾ.ನಾಗರತ್ನಮ್ಮ ಆತ್ಮಕತೆ (ರಂಗಸಿರಿ),ಗುಬ್ಬಿ ವೀರಣ್ಣ, ಡಾ.ಲಕ್ಷ್ಮಣದಾಸ್,ಗಾನಕೋಗಿಲೆ, ಅನುಪಮ ಅಭಿನೇತ್ರಿ ಸುಭದ್ರಮ್ಮ ಮನ್ಸೂರು,ಮೇಕಪ್‍ಮನ್ ಸುಬ್ಬಣ್ಣ,ರಂಗನೇವರಿಕೆ, ರಂಗಸಂದರ್ಶನ,ರಂಗದಿಗ್ಗಜರು, ಚಿಂದೋಡಿ ಲೀಲಾ,ಕಲಾಗ್ರಾಮ, ಜನಪರ ರಂಗಭೂಮಿ,ರಂಗಸೆಲೆ ಸೇರಿದಂತೆ ಹಲವು ಪುಸ್ತಕಗಳನ್ನು ಬರೆದಿದ್ದಾರೆ.

ಅವರ ಅಗಲಿಕೆಯಿಂದ ಕನ್ನಡದ ಸಾರಸ್ವತ ಲೋಕಕ್ಕೆ,ವೃತ್ತಿ ರಂಗಭೂಮಿ,ಪತ್ರಿಕಾ ರಂಗಕ್ಕೆ ತುಂಬಲಾರದ ನಷ್ಟ ಉಂಟಾಗಿದೆ.

ದೇವರು ಅವರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ ಎಂದು  ಗುಡಿಹಳ್ಳಿ ನಾಗರಾಜರಿಗೆ ಅರ್ಪಿಸಿದ್ದಾರೆ,ಈ ಸಂದರ್ಭದಲ್ಲಿ ಸಂಘದ ಹಿರಿಯ ಪತ್ರಕರ್ತರು ಹಾಗೂ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು