4:07 PM Friday17 - September 2021
ಬ್ರೇಕಿಂಗ್ ನ್ಯೂಸ್
ವಿಶ್ವದ ಅಗ್ರ ಶ್ರೇಣಿಯ ಆಪಲ್ ‘ಐಫೋನ್ 13’ ಸರಣಿ ಬಿಡುಗಡೆ !; ಹಾಗಾದರೆ… ರಾಜ್ಯದ 372 ತಾಲೂಕುಗಳಲ್ಲಿ ಸ್ಮಶಾನವೇ ಇಲ್ಲ: ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದೇನು?… ವರ್ಗಾವಣೆ ನಿರೀಕ್ಷೆಯಲ್ಲಿದ್ದ ರಾಜ್ಯದ ಶಿಕ್ಷಕರಿಗೆ ಬಿಗ್ ಶಾಕ್: ಹಾಗಾದರೆ ಸರಕಾರ ಹೊರಡಿಸಿದ ಹೊಸ… ದೇಗುಲ ಧ್ವಂಸ; ಮೈಸೂರು ಉಸ್ತುವಾರಿ ಸಚಿವರು ರಾಜೀನಾಮೆ ನೀಡಲಿ: ಮಾಜಿ ಸಚಿವ ಯು.ಟಿ.ಖಾದರ್… ಬಾಲಿವುಡ್ ನಟ, ದಾನಿ ಸೋನು ಸೂದ್‌ಗೆ ಸೇರಿದ 6 ಸ್ಥಳಗಳಿಗೆ ಐಟಿ ದಾಳಿ:… ದಾವೂದ್ ಗ್ಯಾಂಗ್ ನಿಂದ ಹಲವು ನಗರಗಳಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು: 6 ಮಂದಿ… ಇನ್ನು ಕೇವಲ 24 ತಾಸಿನಲ್ಲಿ ಭೂ ಪರಿವರ್ತನೆ: ಕಂದಾಯ ಸಚಿವ ಆರ್. ಅಶೋಕ್… ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಅನಧಿಕೃತ ಧಾರ್ಮಿಕ ಕೇಂದ್ರಗಳ ಪಟ್ಟಿ ಸಿದ್ಧ: ತೆರವು ಲಿಸ್ಟ್… ಮಾಜಿ ಸಚಿವ ಆಸ್ಕರ್ ಪಾರ್ಥಿವ ಶರೀರಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪುಷ್ಪನಮನ:… ಸಿನಿಮಾ ಸಂಭಾಷಣೆಕಾರ ಗುರು ಕಶ್ಯಪ್ ವಿಧಿವಶ: ಹೃದಯಾಘಾತದಿಂದ ಸಾವು

ಇತ್ತೀಚಿನ ಸುದ್ದಿ

ಬಾಲ ನ್ಯಾಯಾಲಯದಲ್ಲಿರುವ ಬಾಕಿ ಪ್ರಕರಣಗಳ ವಿಚಾರಣೆ ಶೀಘ್ರದಲ್ಲೇ ಇತ್ಯರ್ಥಪಡಿಸಿ: ಜಿಲ್ಲಾಧಿಕಾರಿ ಸೂಚನೆ

27/08/2021, 08:36

ಮಂಗಳೂರು (reporterkarnataka.com): ಬಾಲ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳ ವಿಚಾರಣೆಯನ್ನು ಶೀಘ್ರದಲ್ಲೇ ಇತ್ಯರ್ಥಪಡಿಸುವಂತೆ ಮಕ್ಕಳ ರಕ್ಷಣಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ.ಕೆ.ವಿ ಸೂಚಿಸಿದರು.

ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿ ಸಭೆ ಹಾಗೂ ಚೈಲ್ಡ್‍ಲೈನ್ ಸಲಹಾ ಮಂಡಳಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯ 2 ಬಾಲ ನ್ಯಾಯಮಂಡಳಿಯಲ್ಲಿ ಬಾಕಿ ಇರುವ ಒಟ್ಟು 165 ಪ್ರಕರಣಗಳನ್ನು ಶೀಘ್ರವೇ ಇತ್ಯರ್ಥಪಡಿಸಿ, ಬಾಲನ್ಯಾಯ ನಿಧಿಗೆ ನೀಡಿರುವ ಅನುದಾನವನ್ನು ಸರಿಯಾದ ರೀತಿಯಲ್ಲಿ ಸದ್ಬಳಕೆ ಆಗುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ಸಂಘ ಸಂಸ್ಥೆಗಳು, ಬಾಲ ದತ್ತು ಕೇಂದ್ರಗಳನ್ನು ನಡೆಸಲು ಆಸಕ್ತಿಯಿದ್ದೂ, ಅವರ ಬಳಿ ಕಟ್ಟಡ ನಿರ್ಮಿಸಲು ಜಾಗವಿದ್ದಲ್ಲಿ, ಅಂತಹ ಸಂಘ ಸಂಸ್ಥೆಗಳಿಗೆ ದತ್ತು ಕೇಂದ್ರಗಳನ್ನು ನಡೆಸಲು ಕಟ್ಟಡವನ್ನು ನಿರ್ಮಿಸಿಕೊಡಲಾಗುವುದು ಎಂದ ಅವರು, ಕೋವಿಡ್-19 ಕಾರಣದಿಂದ ಪೋಷಕರಿಬ್ಬರನ್ನೂ ಕಳೆದುಕೊಂಡ ವಿಸ್ತøತ ಕುಟುಂಬ ಸದಸ್ಯರ ಆರೈಕೆಯಲ್ಲಿರುವ ಮಕ್ಕಳಿಗೆ ಪ್ರತಿ ತಿಂಗಳೂ 3,500 ರೂ.ಗಳ ಸಹಾಯಧನವನ್ನು ಮಕ್ಕಳ ಸಮಗ್ರ ಮತ್ತು ಪಾಲನೆಗಾಗಿ ಮುಖ್ಯಮಂತ್ರಿ ಬಾಲ ಸೇವಾ ಯೋಜನೆಯಡಿ ನೀಡಲಾಗುತ್ತಿದೆ ಎಂದರು.

ಕೋವಿಡ್ ಸಂದರ್ಭದಲ್ಲಿ ಇಬ್ಬರು ಪೋಷಕರು ಅಥವಾ ದತ್ತು ಪೋಷಕರನ್ನು ಕಳೆದುಕೊಂಡಂತಹ 18 ವರ್ಷ ಮೇಲ್ಪಟ್ಟ ಮಕ್ಕಳ ಪಾಲನೆ, ರಕ್ಷಣೆ ಒಳಗೊಂಡಂತೆ ಅವರ ಆರೋಗ್ಯ ವಿಮೆ, ಶಿಕ್ಷಣ ಮತ್ತು ಸಮಾಜದಲ್ಲಿ ಸ್ವಾವಲಂಭಿಯಾಗಿ ಜೀವನ ನಿರ್ವಹಿಸಲು ಅನುಕೂಲವಾಗುವಂತೆ 23 ವರ್ಷ ತುಂಬಿದ ಪ್ರತಿ ಮಗುವಿಗೆ 10 ಲಕ್ಷ ರೂ.ಗಳನ್ನು ಪ್ರಧಾನ ಮಂತ್ರಿಗಳ ಪಿ.ಎಂ.ಕೇರ್ಸ್ ಫಾರ್ ಚಿಲ್ಡ್ರೆನ್ ಯೋಜನೆಯಡಿ ನೀಡಲಾಗುವುದು. ಈ ಯೋಜನೆಯಡಿ ಈಗಾಗಲೇ 5 ಅನಾಥ ಮಕ್ಕಳನ್ನು ಗುರುತಿಸಿದ್ದೂ, ಮಕ್ಕಳ ಕಲ್ಯಾಣ ಸಮಿತಿ ವತಿಯಿಂದ ಅವರಿಗೆ ಅನುಮೋದನೆ ನೀಡಲಾಗಿದೆ ಎಂದು ಹೇಳಿದರು.

ಬಾಲನ್ಯಾಯ ಮಕ್ಕಳ ಕಾಯ್ದೆಯಡಿ ನೋಂದಾಯಿಸಿರುವ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿರುವ 18 ವರ್ಷ ಪೂರ್ಣಗೊಂಡ ಮಕ್ಕಳ ಮುಂದಿನ ಪುನರ್ವಸತಿ, ಸಮಾಜದಲ್ಲಿ ಗೌರವಯುತವಾಗಿ ಮತ್ತು ಅವರನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿಸಲು ಅನುಕೂಲವಾಗುವಂತೆ ಉಪಕಾರ್ ಎಂಬ ಹೊಸ ಯೋಜನೆಯಡಿ 5,000 ರೂ.ಗಳ ಆರ್ಥಿಕ ನೆರವು ನೀಡಲಾಗುತ್ತಿದೆ ಎಂದರು.

ನಗರ ಪ್ರದೇಶಗಳಲ್ಲಿ ಮಕ್ಕಳು ಭಿಕ್ಷಾಟಣೆ ಮಾಡಿಸುವಂತಹ ಚಟುವಟಿಕೆಗಳು ಹೆಚ್ಚಾಗುತ್ತಿದ್ದೂ, ಅಂತಹ ವ್ಯಕ್ತಿಗಳನ್ನು ಗುರುತಿಸಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಭಿಕ್ಷಾಟನೆಯಲ್ಲಿ ತೊಡಗಿರುವ ಮಕ್ಕಳನ್ನು ರಕ್ಷಿಸಿ ಅವರಿಗೆ ಪುನರ್ವಸತಿ ಕಲಿಸಿಕೊಡಬೇಕು ಎಂದು ತಿಳಿಸಿದರು.

ಮಕ್ಕಳ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಲು ಹಾಗೂ ಅವರುಗಳ ಸುರಕ್ಷತೆಗೆ ಸಂಬಂಧಿಸಿದಂತೆ ಚೈಲ್ಡ್‍ಲೈನ್ ಸಹಾಯವಾಣಿ ಸಂಖ್ಯೆ 1098 ಅನ್ನು ಅನುಷ್ಟಾನಗೊಳಿಸಲಾಗಿದ್ದು, ಈ ಸಹಾಯವಾಣಿಯ ಬಗ್ಗೆ ವ್ಯಾಪಕ ಪ್ರಚಾರ ಮತ್ತು ಜನ ಜಾಗೃತಿ ಮೂಡಿಸುವ ಕೆಲಸವಾಗಬೇಕು. ಕೆ.ಎಸ್.ಆರ್.ಟಿ.ಸಿ ಮತ್ತು ರೈಲು ನಿಲ್ದಾಣಗಳಲ್ಲಿ ಚೈಲ್ಡ್‍ಲೈನ್ ಸಹಾಯವಾಣಿಯ ಕುರಿತ ಮಾಹಿತಿ ಫಲಕಗಳನ್ನು ಅಳವಡಿಸಲು ಸೂಚಿಸಿದರು.

ಬಂದರು ಪ್ರದೇಶದಲ್ಲಿ ಬಾಲಕಾರ್ಮಿಕತೆ ಹೆಚ್ಚಾಗಿ ಕಂಡುಬರುತ್ತಿದ್ದೂ, ಅಂತಹ ಚಟುವಟಿಕೆಗಳನ್ನು ತಡೆಯುವ ನಿಟ್ಟಿನಲ್ಲಿ ಚೈಲ್ಡ್‍ಲೈನ್ ಸಹಾಯವಾಣಿಯು ಉಪಯುಕ್ತವಾಗುತ್ತದೆ ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಪಾಪ ಭೋವಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಯೋಗೇಶ್.ಎಸ್.ಬಿ, ಮಕ್ಕಳ ರಕ್ಷಣಾ ಅಧಿಕಾರಿ ಮಂಜುಳಾ ಹಾಗೂ ಇತರ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು