4:07 PM Friday17 - September 2021
ಬ್ರೇಕಿಂಗ್ ನ್ಯೂಸ್
ವಿಶ್ವದ ಅಗ್ರ ಶ್ರೇಣಿಯ ಆಪಲ್ ‘ಐಫೋನ್ 13’ ಸರಣಿ ಬಿಡುಗಡೆ !; ಹಾಗಾದರೆ… ರಾಜ್ಯದ 372 ತಾಲೂಕುಗಳಲ್ಲಿ ಸ್ಮಶಾನವೇ ಇಲ್ಲ: ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದೇನು?… ವರ್ಗಾವಣೆ ನಿರೀಕ್ಷೆಯಲ್ಲಿದ್ದ ರಾಜ್ಯದ ಶಿಕ್ಷಕರಿಗೆ ಬಿಗ್ ಶಾಕ್: ಹಾಗಾದರೆ ಸರಕಾರ ಹೊರಡಿಸಿದ ಹೊಸ… ದೇಗುಲ ಧ್ವಂಸ; ಮೈಸೂರು ಉಸ್ತುವಾರಿ ಸಚಿವರು ರಾಜೀನಾಮೆ ನೀಡಲಿ: ಮಾಜಿ ಸಚಿವ ಯು.ಟಿ.ಖಾದರ್… ಬಾಲಿವುಡ್ ನಟ, ದಾನಿ ಸೋನು ಸೂದ್‌ಗೆ ಸೇರಿದ 6 ಸ್ಥಳಗಳಿಗೆ ಐಟಿ ದಾಳಿ:… ದಾವೂದ್ ಗ್ಯಾಂಗ್ ನಿಂದ ಹಲವು ನಗರಗಳಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು: 6 ಮಂದಿ… ಇನ್ನು ಕೇವಲ 24 ತಾಸಿನಲ್ಲಿ ಭೂ ಪರಿವರ್ತನೆ: ಕಂದಾಯ ಸಚಿವ ಆರ್. ಅಶೋಕ್… ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಅನಧಿಕೃತ ಧಾರ್ಮಿಕ ಕೇಂದ್ರಗಳ ಪಟ್ಟಿ ಸಿದ್ಧ: ತೆರವು ಲಿಸ್ಟ್… ಮಾಜಿ ಸಚಿವ ಆಸ್ಕರ್ ಪಾರ್ಥಿವ ಶರೀರಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪುಷ್ಪನಮನ:… ಸಿನಿಮಾ ಸಂಭಾಷಣೆಕಾರ ಗುರು ಕಶ್ಯಪ್ ವಿಧಿವಶ: ಹೃದಯಾಘಾತದಿಂದ ಸಾವು

ಇತ್ತೀಚಿನ ಸುದ್ದಿ

ಅಫ್ಘಾನ್  ಭಯೋತ್ಪಾದಕರ ದಾಳಿ: ಸಾವಿನ ಸಂಖ್ಯೆ 103 ಏರಿಕೆ; ಅಮೆರಿಕದಿಂದ ಹೆಚ್ಚುವರಿ ಪಡೆ ನಿಯೋಜನೆ? 

28/08/2021, 10:06

ಅಫ್ಘಾನಿಸ್ತಾನ(reporterkarnataka.com): ರಾಜಧಾನಿ ಕಾಬೂಲ್‌ನಲ್ಲಿ ನಡೆದ ಸರಣಿ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 103ಕ್ಕೆ ಏರಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ.

ಭೀಕರ ಸ್ಫೋಟದಲ್ಲಿ ಕನಿಷ್ಠ 90 ಅಫ್ಘಾನ್ ನಾಗರಿಕರು ಸಾನ್ನಪ್ಪಿದ್ದಾರೆ. 13 ಸೈನಿಕರ ಸಾವನ್ನು ಅಮೆರಿಕದ ಪೆಂಟಗನ್  ದೃಢಪಡಿಸಿದೆ.

ಕಾಬೂಲ್ ವಿಮಾನ ನಿಲ್ದಾಣ ಮತ್ತು ಅದರ ಸುತ್ತಮುತ್ತಲಿನ ಪ್ರದೇಶವನ್ನು ಗುರಿಯಾಗಿಸಿಕೊಂಡು ಸ್ಫೋಟ ನಡೆಸಲಾಗಿದೆ.

ಕನಿಷ್ಠ ನಾಲ್ಕು ಸ್ಫೋಟಗಳು ನಡೆದಿವೆ. ಇಸ್ಲಾಮಿಕ್ ಸ್ಟೇಟ್-ಖೋರಾಸನ್ ಭಯೋತ್ಪಾದಕ ಗುಂಪು ಈ ದಾಳಿಯ ಹೊಣೆ ಹೊತ್ತಿದೆ ಎಂದು ವರದಿಯಾಗಿದೆ.

ಅಮೆರಿಕ ಅಧ್ಯಕ್ಷ ಜೋ ಬೈಡನ್, ಅಮೆರಿಕದ ಜನರನ್ನು ನಾವು ರಕ್ಷಿಸುತ್ತೇವೆ, ನಮ್ಮ ಕಾರ್ಯಾ ಚರಣೆ ಮುಂದುವರೆಯಲಿದೆ ಎಂದು ಹೇಳಿದ್ದಾರೆ. ದಾಳಿ ಹಿನ್ನೆಲೆಯಲ್ಲಿ ಅಫ್ಘಾನಿಸ್ತಾನದಲ್ಲಿ ಹೆಚ್ಚುವರಿ ಮಿಲಿಟರಿ ನಿಯೋಜನೆ ಕುರಿತಂತೆ ಒಂದು ವೇಳೆ ಹೆಚ್ಚುವರಿ ಮಿಲಿಟರಿ ಪಡೆ ಅಗತ್ಯವಾದರೆ ಅದಕ್ಕೆ ಅನುಮೋದನೆ ನೀಡುವುದಾಗಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು