5:19 PM Saturday11 - May 2024
ಬ್ರೇಕಿಂಗ್ ನ್ಯೂಸ್
ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ…

ಇತ್ತೀಚಿನ ಸುದ್ದಿ

ಜಪ್ಪಿನಮೊಗರು: ಮಳೆಗೆ ಹಾನಿಗೀಡಾದ ಮನೆ ದುರಸ್ತಿಗೆ ಬಿಜೆಪಿ ಕಾರ್ಯಕರ್ತರ ನೆರವು: ಶಾಸಕರಿಂದ ಕೀಲಿಗೈ ಹಸ್ತಾಂತರ

29/08/2021, 20:26

ಮಂಗಳೂರು(reporterkarnataka.com):  ಪಾಲಿಕೆಯ ಜಪ್ಪಿನಮೊಗರು ವಾರ್ಡಿನಲ್ಲಿ ಮಳೆಯಿಂದ ಹಾನಿಗೀಡಾದ ಅಶೋಕ್ ಕೊಟ್ಟಾರಿ ಎಂಬವರ ಮನೆಯನ್ನು ಸ್ಥಳೀಯ ಬಿಜೆಪಿ ಕಾರ್ಯಕರ್ತರು ಹಾಗೂ ಗೆಳೆಯರ ಬಳಗದ ಸದಸ್ಯರ ನೆರವಿನಿಂದ ದುರಸ್ತಿಗೊಳಿಸಿ ಶಾಸಕ ವೇದವ್ಯಾಸ್ ಕಾಮತ್ ಅವರು ಕೀಲಿ ಗೈ ಹಸ್ತಾಂತರಿಸಿದರು‌.

ಈ ಸಂದರ್ಭ ಮಾತನಾಡಿದ ಶಾಸಕರು, ಜಪ್ಪಿನಮೊಗರು ವಾರ್ಡಿನ ಕಾರ್ಪೋರೇಟರ್ ವೀಣಾ ಮಂಗಳ ಅವರ ಮುಂದಾಳತ್ವದಲ್ಲಿ ಸ್ಥಳೀಯ ಬಿಜೆಪಿ ಕಾರ್ಯಕರ್ತರು ಹಾಗೂ ಗೆಳೆಯರ ಬಳಗದ ಸದಸ್ಯರ ತಂಡವು ಮನೆಯ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡು ಬಡ ಕುಟುಂಬಕ್ಕೆ ಆಸರೆಯಾಗಿರುವುದು ನಿಜಕ್ಕೂ ಶ್ಲಾಘನೀಯ ಎಂದರು. 

ಮಳೆಯಿಂದ ಮನೆಯು ಕುಸಿದಿದ್ದ‌ ಸಂದರ್ಭದಲ್ಲಿ ಮಳೆ ಪರಿಹಾರ ನಿಧಿಯಿಂದ ಪರಿಹಾರ ಒದಗಿಸಲಾಗಿತ್ತು. ಹೆಚ್ಚುವರಿ ಹಣವನ್ನು ಸ್ಥಳೀಯ ಬಿಜೆಪಿ ಕಾರ್ಯಕರ್ತರು ಮತ್ತು ಗೆಳೆಯರ ಬಳಗದ ಸದಸ್ಯರು ಹೊಂದಿಸಿ ಮನೆ ನಿರ್ಮಾಣಕ್ಕೆ ಸಹಕಾರ ನೀಡಿದ್ದಾರೆ ಎಂದು ಹೇಳಿದ್ದಾರೆ. 

ಸ್ಥಳೀಯ ಕಾರ್ಪೋರೇಟರ್ ವೀಣಾ ಮಂಗಳ ಮಾತನಾಡಿ, ಮನೆಯು ಕುಸಿದಿದ್ದ ಸಂದರ್ಭದಲ್ಲಿ ಶಾಸಕರಾದ ವೇದವ್ಯಾಸ್ ಕಾಮತ್ ಅವರು ಮಳೆ ಪರಿಹಾರ ನಿಧಿಯಿಂದ ಪರಿಹಾರ ಧನ ಬಿಡುಗಡೆಗೊಳಿಸಿದ್ದರು. ಹೆಚ್ಚುವರಿ ಹಣವನ್ನು ನಮ್ಮ ಕಾರ್ಯಕರ್ತರು ಹಾಗೂ ಗೆಳೆಯರ ಬಳಗದ ಸದಸ್ಯರು ಒದಗಿಸಿದ್ದಾರೆ. ಎಲ್ಲರಿಗೂ ಕೂಡ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದರು

ಈ ಸಂದರ್ಭದಲ್ಲಿ ಆರೋಗ್ಯ ಸಮಿತಿ ಅಧ್ಯಕ್ಷ ಸಂದೀಪ್ ಗರೋಡಿ, ಶಕ್ತಿ ಕೇಂದ್ರದ ಅಧ್ಯಕ್ಷ ಸಂದೇಶ್ ಶೆಟ್ಟಿ ರಾಮ್ ಪ್ರಸಾದ್ ಶೆಟ್ಟಿ, ಗಣೇಶ್ ಎಂಪಿ, ಸುಜಾತ ,ಗೆಳೆಯರ ಬಳಗದ ಅಧ್ಯಕ್ಷ ದೀಪಕ್ , ಪುಷ್ಪರಾಜ್ ಅಮೀನ್ ರಾಜೇಶ ಸಪಲ್ಯ ಗೆಳೆಯರ ಬಳಗದ ಎಲ್ಲಾ ಪದಾಧಿಕಾರಿಗಳು ಮತ್ತು ಸದಸ್ಯರ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು