7:45 AM Saturday20 - April 2024
ಬ್ರೇಕಿಂಗ್ ನ್ಯೂಸ್
ಎಡಪದವು: ಅಂಗಡಿಗೆ ಗುದ್ದಿದ ಲಾರಿಯಿಂದ ಸರಣಿ ಅಪಘಾತ; ಬಸ್, ಕಾರು, ಸ್ಕೂಟರ್ ಜಖಂ;… ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ

ಇತ್ತೀಚಿನ ಸುದ್ದಿ

Latest Update | ಕಟೀಲು, ಧರ್ಮಸ್ಥಳ, ಕುಕ್ಕೆಯಲ್ಲಿ ಬೆಳಿಗ್ಗೆ 7 ರಿಂದ ಸಂಜೆ 7ರವರೆಗೆ ದರ್ಶನಕ್ಕೆ ಅವಕಾಶ, ವಾರಾಂತ್ಯ ಭಕ್ತಾಧಿಗಳಿಗೆ ನಿರ್ಬಂಧ

07/09/2021, 19:07

ಮಂಗಳೂರು(Reporterkarnataka.com)

ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ನಿಯಂತ್ರಣ ಹಿನ್ನಲೆ ಕಟೀಲು ಶ್ರೀ ದುರ್ಗಾಪರಮೇಶ್ವರಿ, ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಹಾಗೂ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಗಳಿಗೆ ಬೆಳಿಗ್ಗೆ 7 ರಿಂದ ಸಂಜೆ 7 ಗಂಟೆಯವರೆಗೆ ದರ್ಶನಕ್ಕೆ ಅವಕಾಶ ಕಲ್ಪಿಸಿದ್ದು, ವಾರಾಂತ್ಯದಲ್ಲಿ (ಶನಿವಾರ ಮತ್ತು ಭಾನುವಾರ) ಭಕ್ತಾದಿಗಳ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.

ಜಿಲ್ಲೆಯ ಪ್ರಸಕ್ತ ವಿದ್ಯಮಾನಗಳನ್ನು ಅವಲೋಕಿಸಿ, ಕೋವಿಡ್ ಪಾಸಿಟಿವಿಟಿ ದರದಲ್ಲಿ ಇಳಿಕೆಯಾಗಿದ್ದರೂ, ಸಂಭಾವ್ಯ 3ನೇ ಅಲೆಯನ್ನು ಸಮರ್ಪಕವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಜಿಲ್ಲಾ ದಂಡಾಧಿಕಾರಿಗಳೂ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ.ಕೆ.ವಿ ಅವರು ಮುಂದಿನ ಆದೇಶದವರೆಗೆ ಕೆಲವು ನಿರ್ಬಂಧಗಳನ್ನು ಜಾರಿಗೊಳಿಸಿ, ಆದೇಶ ಹೊರಡಿಸಿದ್ದಾರೆ.

ಕಟೀಲು ಶ್ರೀ ದುರ್ಗಾಪರಮೇಶ್ವರಿ, ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಹಾಗೂ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಗಳಲ್ಲಿ ಮುಂದಿನ ಆದೇಶದವರೆಗೆ ಭಕ್ತಾದಿಗಳಿಗೆ ಬೆಳಿಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಮಾತ್ರ ತೆರೆಯಲಾಗಿರುತ್ತದೆ. ಈ ಸಂದರ್ಭದಲ್ಲಿ ಕಡ್ಡಾಯವಾಗಿ ಸಾಮಾಜಿಕ ಅಂತರ, ಅಗತ್ಯ ಮಂಜಾಗ್ರತಾ ಕ್ರಮಗಳನ್ನು ಕೈಗೊಂಡು ಭಕ್ತಾದಿಗಳಿಗೆ ಕೇವಲ ದೇವರ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ತೀರ್ಥ ಪ್ರಸಾದ, ಸೇವೆಗಳು, ಅನ್ನಸಂತರ್ಪಣೆಗೆ ಅವಕಾಶವಿರುವುದಿಲ್ಲ.

ವಾರಾಂತ್ಯದಲ್ಲಿ (ಶನಿವಾರ ಮತ್ತು ಭಾನುವಾರ) ಭಕ್ತಾದಿಗಳ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ ಹಾಗೂ ವಸತಿ ಗೃಹಗಳಲ್ಲಿ ತಂಗುವುದಾಗಲೀ ಅಥವಾ ದೇವರ ದರ್ಶನಕ್ಕೆ ಅವಕಾಶವಿರುವುದಿಲ್ಲ. ಶನಿವಾರ ಮತ್ತು ಭಾನುವಾರ ಎಲ್ಲಾ ರೀತಿಯ, ಉತ್ಸವ, ಸೇವೆಗಳ, ತೀರ್ಥ, ಪ್ರಸಾದ, ಮುಡಿ ಸೇವೆ ವಸತಿಗಳನ್ನು ನಿರ್ಬಂಧಿಸಿ, ಅರ್ಚಕರುಗಳಿಂದ ಸಾಂಪ್ರಾದಾಯಿಕ ಪೂಜೆಗೆ ಅವಕಾಶ ಕಲ್ಪಿಸಲಾಗಿದೆ. ಜಾತ್ರೆಗಳು, ದೇವಾಲಯದ ಉತ್ಸವಗಳು ಹಾಗೂ ಮೆರವಣಿಗೆಗಳನ್ನು ಸಹ ನಿಷೇಧಿಸಲಾಗಿದೆ.
ಈ ಆದೇಶವನ್ನು ಉಲ್ಲಂಘಿಸಿದಲ್ಲಿದವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2001ರ ಕಲಂ 51 ರಿಂದ 60ರನ್ವಯ, ಐಪಿಸಿ ಕಲಂ 188ರಂತೆ ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ 2020ರ ಕಲಂ 4, 5 ಮತ್ತು 10 ರಂತೆ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು