9:15 PM Tuesday23 - April 2024
ಬ್ರೇಕಿಂಗ್ ನ್ಯೂಸ್
ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ… ತಂತ್ರಜ್ಞಾನ ಅಭಿವೃದ್ಧಿಯಾಗಿದ್ದರೂ ಚುನಾವಣೆ 60 ದಿನಗಳ ಕಾಲ ನಡೆಯುತ್ತಿರುವುದು ಅನುಮಾನಾಸ್ಪದ: ಮಾಜಿ ಸಿಎಂ… ಸಿದ್ದರಾಮಯ್ಯ ಸರಕಾರದಲ್ಲಿ ಬದುಕಿನ ಗ್ಯಾರಂಟಿ ಕಳೆದುಕೊಂಡ ಕನ್ನಡಿಗರು: ಶಾಸಕ ಡಾ. ವೈ ಭರತ್… ನಮ್ಮ ಕೆಲಸವೇ ಅಪಪ್ರಚಾರ ನಡೆಸುವವರಿಗೆ ತಕ್ಕ ಉತ್ತರ: ಸರಪಾಡಿ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ… ಗಾಳಿ ಮಳೆಗೆ ಮರ ಬಿದ್ದು ತಂಡಾದ ಪವರ್ ಲೈನ್: ವಿದ್ಯುತ್ ಶಾಕ್ ಹೊಡೆದು… ಕೊಲ್ಯದಿಂದ ಅಬ್ಬಕ್ಕ ರಾಣಿ ಸರ್ಕಲ್‌ ವರೆಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ… 91ರ ಹರೆಯದ ಮಾಜಿ ಪ್ರಧಾನಿ ದೇವೇಗೌಡರು ಮೋದಿ ಗೆಲ್ಲಿಸಿ ಎನ್ನುತ್ತಿದ್ದಾರೆ; ದಿನಬಳಕೆ ವಸ್ತುಗಳ…

ಇತ್ತೀಚಿನ ಸುದ್ದಿ

ಕೋಲಾರ: ಮಕ್ಕಳಲ್ಲಿ ಹೆಚ್ಚಾಗುತ್ತಿರುವ ವೈರಲ್ ಫೀವರ್ ತಡೆಗೆ ವಿಶೇಷ ವೈದ್ಯರ ತಂಡ ರಚಿಸಿ, ನಕಲಿ ಕ್ಲಿನಿಕ್‍ಗಳಿಗೆ ಕಡಿವಾಣ ಹಾಕಲು ಆಗ್ರಹ

18/09/2021, 09:11

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಮಕ್ಕಳಲ್ಲಿ ಹೆಚ್ಚಾಗುತ್ತಿರುವ ವೈರಲ್ ಫೀವರ್ ತಡೆಗೆ ವಿಶೇಷ ವೈದ್ಯರ ತಂಡ ರಚಿಸುವ ಜತೆಗೆ ಜಿಲ್ಲೆಯಲ್ಲಿನ ನಕಲಿ ಕ್ಲಿನಿಕ್‍ಗಳಿಗೆ ಕಡಿವಾಣ ಹಾಕುವಂತೆ ಆಗ್ರಹಿಸಿ ರೈತ ಸಂಘದಿಂದ ಆರೋಗ್ಯ ಇಲಾಖೆಯ ವೈದ್ಯಾಧಿಕಾರಿ ಡಾ.ಚಂದನ್‍ಗೆ ಮನವಿ ಸಲ್ಲಿಸಲಾಯಿತು.

ಮನವಿ ಸಲ್ಲಿಸಿ ಮಾತನಾಡಿದ ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಕೊರೊನಾ 1ನೇ, 2ನೇ ಅಲೆಗಳಿಂದ ತತ್ತರಿಸಿದ್ದ ಜನರು ಇದೀಗ ಕೊಂಚ ಮಟ್ಟಿಗೆ ಚೇತರಿಕೆ ಕಾಣುತ್ತಿರುವ ಸಂದರ್ಭದಲ್ಲಿ ಈಗಾಗಲೇ ತಜ್ಞರು ನೀಡಿರುವ ಮೂರನೇ ಅಲೆಗೆ ಸಂಬಂಧಿಸಿದ ವರದಿಯು ಎಚ್ಚರಗೊಳಿಸುತ್ತಿದೆ.

ಮೂರನೇ ಅಲೆಯು ಮಕ್ಕಳ ಮೇಲೆ ಹೆಚ್ಚಿನ ಪರಿಣಾಮ ಬೀರಲಿರುವುದಾಗಿ ವರದಿಯಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ. ಇಂತಹ ಸಂದರ್ಭದಲ್ಲಿ ಜಿಲ್ಲೆಯಲ್ಲಿ ವೈರಲ್ ಫೀವರ್ ಮಕ್ಕಳಲ್ಲಿ ಕಾಣಿಸಿಕೊಂಡಿರುವುದು ಪೋಷಕರಲ್ಲಿ ಮತ್ತಷ್ಟು ಆತಂಕವನ್ನು ಉಂಟು ಮಾಡಿದೆ ಎಂದು ತಿಳಿಸಿದರು.

ಈಗಾಗಲೇ ನೂರಾರು ಮಕ್ಕಳು ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಆದರೆ, ಆರೋಗ್ಯ ಇಲಾಖೆಯಿಂದ ಯಾವುದೇ ಕ್ರಮಕೈಗೊಳ್ಳದೇ ಇರುವುದು ಖಂಡನೀಯವಾಗಿದ್ದು, ಕೂಡಲೇ ವಿಶೇಷ ವೈದ್ಯರ ತಂಡವನ್ನು ರಚಿಸಿ ಮಕ್ಕಳ ರಕ್ಷಣೆಗೆ ಅಗತ್ಯ ಕ್ರಮಕೈಗೊಳ್ಳಬೇಕಿದೆ ಎಂದು ಆಗ್ರಹಿಸಿದರು.

ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ ಮಾತನಾಡಿ, ಇನ್ನು ಜಿಲ್ಲೆಯಲ್ಲಿ ನಕಲಿ ಕ್ಲಿನಿಕ್‍ಗಳ ಹಾವಳಿ ಬಗ್ಗೆ ಸಾಕಷ್ಟು ಬಾರಿ ಮನವಿ ಮೂಲಕ ದೂರು ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ. ಗಡಿ ಭಾಗಗಳಲ್ಲಂತೂ ಪರಿಸ್ಥಿತಿ ಹೇಳತೀರದಾಗಿದ್ದು, ಜನರ ಜೀವಗಳ ಜೊತೆ ಚೆಲ್ಲಾಟವಾಡುತ್ತಿದ್ದರೂ ಸಂಬಂಧಪಟ್ಟ ಇಲಾಖೆಯವರು ಮೌನಕ್ಕೆ ಶರಣಾಗಿರುವುದು ಸರಿಯಲ್ಲ.

ಈಗಾಗಲೇ ಮಕ್ಕಳಲ್ಲಿ ವೈರಲ್ ಫೀವರ್ ಕಾಣಿಸಿಕೊಂಡಿದ್ದು, ಆರೋಗ್ಯ ಇಲಾಖೆಯಿಂದ ಸೂಕ್ತ ಕ್ರಮಕೈಗೊಳ್ಳದ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದ ಜನರು ವಿಧಿಯಿಲ್ಲದೆ ನಕಲಿ ಕ್ಲಿನಿಕ್‍ಗಳ ಮೊರೆ ಹೋಗಬೇಕಾಗಿದೆ. ಹೀಗಾಗಿ ವಿಶೇಷ ವೈದ್ಯರ ತಂಡ ರಚನೆ ಮಾಡುವ ಜೊತೆಗೆ ನಕಲಿ ಕ್ಲಿನಿಕ್‍ಗಳಿಗೆ ಕಡಿವಾಣ ಹಾಕಿ ಜನರ ಆರೋಗ್ಯ ರಕ್ಷಣೆಗೆ ಮುಂದಾಗಬೇಕೆಂದು ಆಗ್ರಹಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಡಾ.ಚಂದನ್, ತಮ್ಮ ಮನವಿಯನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಅಗತ್ಯ ಕ್ರಮಕೈಗೊಳ್ಳುವ ಭರವಸೆ ನೀಡಿದರು.

ಮನವಿ ನೀಡುವಾಗ ಜಿಲ್ಲಾಧ್ಯಕ್ಷ ಐತಾಂಡಹಳ್ಳಿ ಮಂಜುನಾಥ್, ತಾಲೂಕು ಅಧ್ಯಕ್ಷ ಈಕಂಬಳ್ಳಿ ಮಂಜುನಾಥ್, ವಕ್ಕಲೇರಿ ಹನುಮಯ್ಯ, ಮಂಗಸಂದ್ರ ನಾಗೇಶ್, ತಿಮ್ಮಣ್ಣ, ಮಾಲೂರು ತಾಲೂಕು ಅಧ್ಯಕ್ಷ ಮಾಸ್ತಿ ವೆಂಕಟೇಶ್, ಬೂದಿಕೋಟೆ ಅಧ್ಯಕ್ಷ ನಾಗಯ್ಯ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು