9:57 PM Saturday20 - April 2024
ಬ್ರೇಕಿಂಗ್ ನ್ಯೂಸ್
91ರ ಹರೆಯದ ಮಾಜಿ ಪ್ರಧಾನಿ ದೇವೇಗೌಡರು ಮೋದಿ ಗೆಲ್ಲಿಸಿ ಎನ್ನುತ್ತಿದ್ದಾರೆ; ದಿನಬಳಕೆ ವಸ್ತುಗಳ… ಮಂಗಳೂರು ಮಾಜಿ ಮೇಯರ್ ಕವಿತಾ ಸನಿಲ್ ಬಿಜೆಪಿ ಸೇರ್ಪಡೆ: ಪಕ್ಷದ ಧ್ವಜ ನೀಡಿ… ಮಂಗಳೂರಿನಲ್ಲಿ ಕರ್ಕಶ ಹಾರ್ನ್ ಗಳ ಕಿರಿಕಿರಿ ತಪ್ಪಿಸಲು ಪೊಲೀಸ್ ಕಾರ್ಯಾಚರಣೆ: ಹಾರ್ನ್ ಕಿತ್ತೆಸೆದು… ಎಡಪದವು: ಅಂಗಡಿಗೆ ಗುದ್ದಿದ ಲಾರಿಯಿಂದ ಸರಣಿ ಅಪಘಾತ; ಬಸ್, ಕಾರು, ಸ್ಕೂಟರ್ ಜಖಂ;… ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್…

ಇತ್ತೀಚಿನ ಸುದ್ದಿ

ಅನುಮಾನ ಮೂಡಿಸಿದ ಕೂಡ್ಲಿಗಿ ಅಮ್ಮನಕೇರಿ ಕರಡಿಗಳ ಸಾವು: ಸೂಕ್ತ ತನಿಖೆಗೆ ಜಿಲ್ಲಾಡಳಿತಕ್ಕೆ ಒತ್ತಾಯ

23/09/2021, 07:48

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com  

ಜಿಲ್ಲೆಯ ಕೂಡ್ಲಿಗಿ ತಾಲೂಕು ಅಮ್ಮನಕೇರಿ ಗ್ರಾಮದ ಹೊರವಲಯದಲ್ಲಿ,ಕರಡಿ ಮೃತಪಟ್ಟಿದ್ದು ಕಾರಣ ತಿಳಿದು ಬಂದಿಲ್ಲ. ಕಳೆದ ತಿಂಗಳ ಹಿಂದೆಯಷ್ಟೇ ಕರಡಿಯೊಂದು ಹಾಗೂ ಕೆಲ ತಿಂಗಳ ಹಿಂದೆ ಒಂದು ಕರಡಿ, ಹೀಗೆ ಎರಡು ವರ್ಷಗಳಲ್ಲಿ  ಮೂರು ಕರಡಿಗಳು ಮೃತಪಟ್ಟಿರುವ ಘಟನೆಗಳು ಬೆಳಕಿಗೆ ಬಂದಿದ್ದು, ಸೂಕ್ತ ತನಿಖೆ ನಡೆಸುವಂತೆ ಜಿಲ್ಲಾಡಳಿತವನ್ನು ಒತ್ತಾಯಿಸಲಾಗಿದೆ.

ಕರಡಿ ಧಾಮ ನಿರ್ಮಾಣವಾಗಿದ್ದರೂ ಕೂಡ ಈ ರೀತಿ ವನ್ಯ ಪ್ರಾಣಿಗಳ ಸಾವಿನ ಪ್ರಕರಣಗಳು ಆಗಾಗ್ಗೆ ಜರುಗುತ್ತಿದ್ದು, ಈ ಅಹಿತಕರ ಬೆಳವಣಿಗೆ  ಹತ್ತಾರು ಅನುಮಾನಗಳು ಮೂಡುತ್ತಿವೆ. ಜಿಲ್ಲಾಡಳಿತ ಶೀಘ್ರವೇ ತನಿಖೆ ನಡೆಸಬೇಕು ಹಾಗೂ ವನ್ಯ ಜೀವಿಗಳ ಸಂರಕ್ಷಣೆಗೆ ಅಗತ್ಯ ಕ್ರಮಗಳನ್ನು ಶೀಘ್ರವೇ ಹಮ್ಮಿಕೊಳ್ಳುಬೇಕೆಂದು ಭಾರತ ಕಮ್ಯೂನಿಷ್ಟ್ ಪಕ್ಷದ ಕಾರ್ಯದರ್ಶಿ ಎಚ್.ವೀರಣ್ಣ ಹಾಗೂ ವಂದೇ ಮಾತರಂ ಜಾಗೃತಿ ವೇದಿಕೆ ಅಧ್ಯಕ್ಷ ವಿ.ಜಿ.ವೃಷಭೇಂದ್ರ ಈ ಮೂಲಕ ಜಿಲ್ಲಾಡಳಿತಕ್ಕೆ ಒತ್ತಾಯಿಸಿದ್ದಾರೆ.

ಅಮ್ಮನಕೇರಿ ಗ್ರ‍ಾಮಸ್ಥರು ಹಾಗೂ ಮೊರಬನಹಳ್ಳಿ ಸದಸ್ಯ ಕರಿಯಪ್ಪ ಹಾಗೂ ಗ್ರಾಮದ ಮುಖಂಡರು, ತಾಲೂಕಿನ ವಿವಿದ ಸಂಘಟನೆಗಳ ಪದಾಧಿಕಾರಿಗಳು ಈ ಮೂಲಕ ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು