12:26 PM Tuesday30 - November 2021
ಬ್ರೇಕಿಂಗ್ ನ್ಯೂಸ್
ಕಾರ್ಕಳ : ಕೆಲಸಕ್ಕೆಂದು ಹೋದ ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು 9 ಮಂದಿ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ: ಆರೋಪಿ ಡಾ. ರತ್ನಾಕರ್ ಗೆ… ದಂಪತಿ ಜತೆ ಸುರತ್ಕಲ್ ಟೋಲ್ ಸಿಬ್ಬಂದಿ ಅನುಚಿತ ದುರ್ವರ್ತನೆ: ಪೋಲೀಸ್ ಕಮಿಷನರ್ ಶಶಿಕುಮಾರ್… ಕಾಫಿನಾಡಲ್ಲಿ ಪ್ರಾಮಾಣಿಕ ಕಳ್ಳರು!: 4 ಬಾರ್ ಗಳಿಗೆ ಹೊಕ್ಕ ಚೋರರು: ಹಣ ಸಿಕ್ಕಿಲ್ಲ, ಆದ್ರೆ… ಕಡೂರು: ನೀರಿನ ಟ್ಯಾಂಕ್ ಕ್ಲೀನ್ ಮಾಡುವಾಗ ಉಸಿರುಗಟ್ಟಿ ಇಬ್ಬರು ಸಾವು; ಒಬ್ಬ ಗಂಭೀರ ಬೆಂಗಳೂರು: ನವಜಾತ ಹೆಣ್ಣು ಶಿಶುವನ್ನು ದೇವರ ಗುಡಿ ಮುಂದಿಟ್ಟು ಪರಾರಿ ಮೂಡಿಗೆರೆ: ಒಣ ಗಾಂಜಾ ಮಾರಾಟ; ಮಾಲು ಸಹಿತ ಆರೋಪಿ ಬಂಧನ ಕಲಬುರಗಿ ಪಾಲಿಕೆ ಕಮಿಷನರ್ ವಿರುದ್ಧ ಲವ್, ಸೆಕ್ಸ್, ದೋಖಾ ಆರೋಪ: ಕಮಿಷನರ್ ಈ… ಸೋವೇನ ಹಳ್ಳಿ, ಹಗರಿಬೊಮ್ಮನ ಹಳ್ಳಿಗೆ ಸಮರ್ಪಕ ಬಸ್ ವ್ಯವಸ್ಥೆ: ಗ್ರಾಮಸ್ಥರ ಹಕ್ಕೊತ್ತಾಯ 9 ಮಂದಿ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ: ಡಾ. ರತ್ನಾಕರ್ ಬಂಧನ; 2…

ಇತ್ತೀಚಿನ ಸುದ್ದಿ

ಮಣೂರು: ರೈತರು ಬೆಳೆಗಳಿಗೆ ಬೆಂಬಲ ಬೆಲೆ ಘೋಷಿಸಲು ಪ್ರಗತಿಪರ ಕೃಷಿಕ ರವೀಂದ್ರ ಶೆಟ್ಟಿ

26/09/2021, 18:53

ಕೋಟ(reporterkarnataka.com): ರೈತರು ಬೆಳೆದ ಬೆಳೆಗಳಿಗೆ ಸರಕಾರ ನಿರ್ದಿಷ್ಟ ಬೆಂಬಲ ಬೆಲೆ ಘೋಷಿಸಬೇಕು ಎಂದು ಮಣೂರು ಪ್ರಗತಿಪರ ಹಿರಿಯ ಕೃಷಿಕ ರವೀಂದ್ರ ಶೆಟ್ಟಿ ದೇವಸ ಹೇಳಿದ್ದಾರೆ.


ಕೋಟದ ಪಂಚವರ್ಣ ಯುವಕ ಮಂಡಲದ ನೇತೃತ್ವದಲ್ಲಿ ಗಿಳಿಯಾರು ಯುವಕ ಮಂಡಲ, ಗೀತಾನಂದ ಫೌಂಡೇಶನ್ ಮಣೂರು, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ, ಮಣೂರು ಫ್ರೆಂಡ್ಸ್, ಮಹಿಳಾ ಬಳಗ ಹಂದಟ್ಟು, ರೈತಧ್ವನಿ ಸಂಘ ಕೋಟ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಇವರುಗಳ ಸಹಯೋಗದೊಂದಿಗೆ 10ನೇ ತಿಂಗಳ ಸರಣಿ ಕಾರ್ಯಕ್ರಮ ರೈತರೆಡೆಗೆ ನಮ್ಮ ನಡಿಗೆಯಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಪ್ರಸ್ತುತ ಕಾಲಘಟ್ಟದಲ್ಲಿ ರೈತನೇ ದೇಶದ ಆಸ್ತಿಯಾಗಿದ್ದಾನೆ. ಅಂತಹ ರೈತನಿಗೆ ಸರಕಾರದ ವಿವಿಧ ರೀತಿಯ ಸೌಲಭ್ಯಗಳು ವಂಚಿತಗೊಳ್ಳುತ್ತಿದೆ. ಸರಕಾರ ರೈತರ ಅಭಿವೃದ್ಧಿಗೆ ಪ್ರೇರಕವಾಗುವ ಕಾರ್ಯಕ್ರಮಗಳನ್ನು ಘೋಷಿಸಬೇಕು. ಆಗ‌ ಮಾತ್ರ ಕೃಷಿ ಉಳಿಯಲು ಸಾಧ್ಯ. ಯುವ ಸಮುದಾಯ ಕೃಷಿಗೆ ಬರಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೃಷಿ ತಜ್ಞ ಮಣೂರು ಭಾಸ್ಕರ್ ಶೆಟ್ಟಿ ರವೀಂದ್ರ ಶೆಟ್ಟಿಯವರನ್ನು ಗೌರವಿಸಿ ಸನ್ಮಾನಿಸಿದರು.

ಪಂಚವರ್ಣ ಯುವಕ ಮಂಡಲದ ಸ್ಥಾಪಾಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ ಅಧ್ಯಕ್ಷತೆ ವಹಿಸಿದರು.

ಮುಖ್ಯ ಅತಿಥಿಗಳಾಗಿ ಕೋಟ ಸಿ ಎ ಬ್ಯಾಂಕ್ ನಿರ್ದೇಶಕ ಮಹೇಶ್ ಶೆಟ್ಟಿ ,ಕೋಟ ಪಂಚಾಯತ್ ಸದಸ್ಯ ಪ್ರಶಾಂತ್ ಹೆಗ್ಡೆ, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ ಅಧ್ಯಕ್ಷೆ ಜ್ಞಾಹ್ನವಿ ಹೇರ್ಳೆ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಅಧ್ಯಕ್ಷ ಶ್ರೀಕಾಂತ್ ಶೆಣೈ, ಹಂದಟ್ಟು ಮಹಿಳಾ ಬಳಗದ ಅಧ್ಯಕ್ಷೆ ಪುಷ್ಭಾ ಕೆ ಹಂದಟ್ಟು, ಪಂಚವರ್ಣ ಯುವಕ ಮಂಡಲದ ಗೌರವ ಸಲಹೆಗಾರ ಉಮೇಶ್ ಪ್ರಭು,ಮಣೂರು ಫ್ರೆಂಡ್ಸ್ ಅಧ್ಯಕ್ಷ ದಿನೇಶ್ ಆಚಾರ್ಯ, ಗಿಳಿಯಾರು ಯುವಕ ಮಂಡಲದ ಅಧ್ಯಕ್ಷ ರಾಮಚಂದ್ರ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು. ಪಂಚವರ್ಣ ಯುವಕ ಮಂಡಲದ ಕಾರ್ಯಾಧ್ಯಕ್ಷ ರವೀಂದ್ರ ಕೋಟ ಪ್ರಾಸ್ತಾವನೆ ಸಲ್ಲಿಸಿ ಸ್ವಾಗತಿಸಿದರು. ಕಾರ್ಯಕ್ರಮವನ್ನು ವಿಪ್ರ ಮಹಿಳಾ ಬಳಗ ಸಾಲಿಗ್ರಾಮ ಸುಜಾತ ಬಾಯಿರಿ ನಿರೂಪಿಸಿದರು. ಪಂಚವರ್ಣದ ಸಂಚಾಲಕ ಅಜಿತ್ ಆಚಾರ್ಯ ವಂದಿಸಿದರು.


ಪಂಚವರ್ಣ ಯುವಕ ಮಂಡಲ ಕೋಟ ಇವರ ನೇತ್ರತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ರೈತರೆಡೆಗೆ ನಮ್ಮ ನಡಿಗೆ ಕಾರ್ಯಕ್ರಮದಲ್ಲಿ ಮಣೂರು ಪ್ರಗತಿಪರ ಹಿರಿಯ ಕೃಷಿಕ ರವೀಂದ್ರ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು

ಇತ್ತೀಚಿನ ಸುದ್ದಿ

ಜಾಹೀರಾತು