11:54 AM Tuesday30 - November 2021
ಬ್ರೇಕಿಂಗ್ ನ್ಯೂಸ್
ಕಾರ್ಕಳ : ಕೆಲಸಕ್ಕೆಂದು ಹೋದ ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು 9 ಮಂದಿ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ: ಆರೋಪಿ ಡಾ. ರತ್ನಾಕರ್ ಗೆ… ದಂಪತಿ ಜತೆ ಸುರತ್ಕಲ್ ಟೋಲ್ ಸಿಬ್ಬಂದಿ ಅನುಚಿತ ದುರ್ವರ್ತನೆ: ಪೋಲೀಸ್ ಕಮಿಷನರ್ ಶಶಿಕುಮಾರ್… ಕಾಫಿನಾಡಲ್ಲಿ ಪ್ರಾಮಾಣಿಕ ಕಳ್ಳರು!: 4 ಬಾರ್ ಗಳಿಗೆ ಹೊಕ್ಕ ಚೋರರು: ಹಣ ಸಿಕ್ಕಿಲ್ಲ, ಆದ್ರೆ… ಕಡೂರು: ನೀರಿನ ಟ್ಯಾಂಕ್ ಕ್ಲೀನ್ ಮಾಡುವಾಗ ಉಸಿರುಗಟ್ಟಿ ಇಬ್ಬರು ಸಾವು; ಒಬ್ಬ ಗಂಭೀರ ಬೆಂಗಳೂರು: ನವಜಾತ ಹೆಣ್ಣು ಶಿಶುವನ್ನು ದೇವರ ಗುಡಿ ಮುಂದಿಟ್ಟು ಪರಾರಿ ಮೂಡಿಗೆರೆ: ಒಣ ಗಾಂಜಾ ಮಾರಾಟ; ಮಾಲು ಸಹಿತ ಆರೋಪಿ ಬಂಧನ ಕಲಬುರಗಿ ಪಾಲಿಕೆ ಕಮಿಷನರ್ ವಿರುದ್ಧ ಲವ್, ಸೆಕ್ಸ್, ದೋಖಾ ಆರೋಪ: ಕಮಿಷನರ್ ಈ… ಸೋವೇನ ಹಳ್ಳಿ, ಹಗರಿಬೊಮ್ಮನ ಹಳ್ಳಿಗೆ ಸಮರ್ಪಕ ಬಸ್ ವ್ಯವಸ್ಥೆ: ಗ್ರಾಮಸ್ಥರ ಹಕ್ಕೊತ್ತಾಯ 9 ಮಂದಿ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ: ಡಾ. ರತ್ನಾಕರ್ ಬಂಧನ; 2…

ಇತ್ತೀಚಿನ ಸುದ್ದಿ

ಹಸಿರು ಶಾಲು ಬಗ್ಗೆ ಸಂಸದ ಮುನಿಸ್ವಾಮಿ ಅವಹೇಳನ: ಬಹಿರಂಗ ಕ್ಷಮೆಗೆ ಒತ್ತಾಯಿಸಿ ರೈತ ಸಂಘದಿಂದ ಪ್ರತಿಕೃತಿ ದಹನ

02/10/2021, 19:03

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಕೋಲಾರ ಸಂಸದ ಮುನಿಸ್ವಾಮಿ ಅವರು ರೈತರ ಹಸಿರು ಶಾಲು ಬಗ್ಗೆ ಹಾಗೂ ಹಸಿರು ಶಾಲು ಹಾಕುವವರ ಬಗ್ಗೆ ಹಗುರವಾಗಿ ಮಾತನಾಡಿರುವುದನ್ನು ಖಂಡಿಸಿ ನಗರದ ಗಾಂಧಿವನದ ಮುಂಭಾಗ ಅನ್ನದಾತರ ಪರ ರೈತ ಸಂಘಟನೆಗಳ ಮುಖಂಡರುಗಳು ಸಂಸದರ ಪ್ರತಿಕೃತಿ ದಹನ ಮಾಡುವ ಮುಖಾಂತರ ಬಹಿರಂಗವಾಗಿ ಕ್ಷಮೆ ಕೇಳಬೇಕೆಂದು ಒತ್ತಾಯಿಸಿದರು.

ಲೋಕಸಭಾ ಚುನಾವಣೆಯಲ್ಲಿ ರೈತರು , ರೈತ ಮುಖಂಡರುಗಳು ಬಹಿರಂಗವಾಗಿ ಸಂಸದ ಮುನಿಸ್ವಾಮಿ ಅವರ ಪರವಾಗಿ ಮತ ನೀಡಬೇಕೆಂದು ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಜನರು ಮತ್ತು ರೈತರಲ್ಲಿ ಮನವಿ ಮಾಡಿಕೊಂಡಿದ್ದೆವು. ಎರಡು ಜಿಲ್ಲೆಗಳ ಅಭಿವೃದ್ಧಿಗೆ ಶ್ರಮಿಸುತ್ತಾರೆಂದು ನಾವೆಲ್ಲಾ ಭಾವಿಸಿ ಮೂರು ದಶಕಗಳ ಆಡಳಿತಕ್ಕೆ ಮಂಗಳ ಹಾಡಿ ಸಂಸದ ಮುನಿಸ್ವಾಮಿಯವರನ್ನು ಗೆಲ್ಲಿಸಿದೆವು. ವೇಮಗಲ್ ಠಾಣೆ ವ್ಯಾಪ್ತಿಯಲ್ಲಿ ನಮ್ಮ ಮೇಲೆ ಕೇಸನ್ನು ದಾಖಲಿಸಿಕೊಂಡೆವು. ಆದರೆ ಸಂಸದರು ಅಭಿವೃದ್ಧಿ ಕಡೆ ಗಮನ ಹರಿಸುವುದನ್ನು ಬಿಟ್ಟು ಜಿಲ್ಲೆಯ ಜನರನ್ನು ದಿಕ್ಕು ತಪ್ಪಿಸುವ ಸಲುವಾಗಿ ಹಾಗೂ ಸಂಸದರು ಮಾಡುತ್ತಿರುವ ಅಕ್ರಮಗಳನ್ನು ಮುಚ್ಚಿಕೊಳ್ಳಲು ರೈತ ಮುಖಂಡರ ಬಗ್ಗೆ , ಹಸಿರು ಶಾಲು ಹಾಕಿಕೊಳ್ಳುವರ ಬಗ್ಗೆ ಪದೇ ಪದೇ ಹಗುರವಾಗಿ ಮಾತನಾಡುತ್ತಿದ್ದಾರೆ ಎಂದು ರೈತ ಮುಖಂಡರು ಆಕ್ಷೇಪಿಸಿದರು.

1980 ರಲ್ಲಿ ರೈತ ಮುಖಂಡರುಗಳ ಬಗ್ಗೆ ಹಗುರವಾಗಿ ಮಾತನಾಡಿದ ಸರ್ಕಾರವನ್ನೇ ಉರುಳಿಸಿರುವುದು ಇತಿಹಾಸ. ಅದೇ ರೀತಿ ಕೋಲಾರ ಜಿಲ್ಲೆಯಿಂದ ನಿಮ್ಮನ್ನು ಹೊರ ಹಾಕುವ ಸಮಯ ಬಹು ದೂರವಿಲ್ಲ. ಸಂಸದರು ಬಹಿರಂಗವಾಗಿ ಕ್ಷಮೆ ಕೇಳದೆ ಹೋದರೆ ಅವರು ಜಿಲ್ಲೆಯಲ್ಲಿ ಮಾಡುತ್ತಿರುವ ಆಕ್ರಮ ದಂಧೆಗಳನ್ನು ಒಂದೊಂದಾಗಿ ಬೀದಿಗೆ ತಂದು ಹೋರಾಟ ಮಾಡುವ ಮೂಲಕ ಉನ್ನತ ಮಟ್ಟದ ತನಿಖೆಗೆ ಆಗ್ರಹಿಸುತ್ತೇವೆ ಹಾಗೂ ಮುನಿಸ್ವಾಮಿ ಹಠಾವೋ … ಕೋಲಾರ ಬಚಾವೋ ಹೋರಾಟ ಹಮ್ಮಿಕೊಳ್ಳಲಾಗುವುದೆಂದು ಎಚ್ಚರಿಕೆ ನೀಡಿದ್ದಾರೆ ಈ ಸಂದರ್ಭದಲ್ಲಿ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ , ಯುವ ಘಟಕದ ಅಧ್ಯಕ್ಷ ಕಲ್ವಮಂಜಲಿ ರಾಮುಶಿವಣ್ಣ , ಜಿಲ್ಲಾಧ್ಯಕ್ಷ ಮರಗಲ್ ಶ್ರೀನಿವಾಸ್ , ಕೋಟಿಗಾನಹಳ್ಳಿ ಗಣೇಶ್‌ಗೌಡ , ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ . ನಾರಾಯಣಸ್ವಾಮಿ , ಮುನೇಗೌಡ , ತಮ್ಮೇಗೌಡ , ಕೆ.ಮುನಿವೆಂಕಟಪ್ಪ ಮಂಗಸಂದ್ರ ತಿಮ್ಮಣ್ಣ , ಪುತ್ತೇರಿ ರಾಜು , ಕೋಲಾರ ತಾಲ್ಲೂಕು ಅಧ್ಯಕ್ಷ ಕೆಂಬೋಡಿ ರವಿ , ಶ್ರೀನಿವಾಸಪುರ ತಾಲ್ಲೂಕು ಅಧ್ಯಕ್ಷ ದೊಡ್ಡಕುರುಬರಹಳ್ಳಿ ಶಂಕರಪ್ಪ , ಮುಳಬಾಗಿಲು ತಾಲ್ಲೂಕು ಅಧ್ಯಕ್ಷ ಎಲ್.ಎನ್ ಬಾಬು , ಉಪಾಧ್ಯಕ್ಷ ಧನರಾಜ್ , ನಗರ ಘಟಕದ ಅಧ್ಯಕ್ಷ ಸತೀಶ್ , ಯುವ ಮುಖಂಡ ಪುಲಿಕೇಶಿ ಇನ್ನು ಮುಂತಾದವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು