5:08 AM Thursday18 - April 2024
ಬ್ರೇಕಿಂಗ್ ನ್ಯೂಸ್
ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ… ಕಾರು ಬಿಟ್ಟು ಆಟೋ ಏರಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ: ಗಮನ…

ಇತ್ತೀಚಿನ ಸುದ್ದಿ

ವೈದ್ಯಕೀಯ ವಿದ್ಯಾರ್ಥಿಗಳ ಮೇಲೆ ಹಲ್ಲೆ: ಅನೈತಿಕ ಪೊಲೀಸ್ ಗಿರಿ ವಿರುದ್ಧ ಎನ್.ಎಸ್.ಯು.ಐ ಪ್ರತಿಭಟನೆ

03/10/2021, 23:07

ಮಂಗಳೂರು(reporterkarnataka.com): ವೈದ್ಯಕೀಯ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿ ಅನೈತಿಕ ಪೋಲಿಸ್ ಗಿರಿ ನಡೆಸಿದ ಆರೋಪಿಗಳನ್ನು ಕಠಿಣ ಕ್ರಮ ಕೈಗೊಂಡು ಬಂಧಿಸುವಂತೆ ಆಗ್ರಹಿಸಿ ದ.ಕ. ಎನ್.ಎಸ್.ಯು.ಐ ಸಮಿತಿ ನಗರದ

ಕ್ಲಾಕ್ ಟವರ್ ಎದುರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿತು.ಈ ವೇಳೆ ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ಅತ್ಯಂತ ಹೆಚ್ಚು ವಿದ್ಯಾರ್ಥಿಗಳ ಸಂಖ್ಯೆಯಿರುವ ಮಂಗಳೂರಿನಲ್ಲಿ ಇಂತಹ ಘಟನೆ ನಡೆಯುತ್ತಿರುವುದು ಖಂಡನೀಯ. ಪೊಲೀಸರು ರಾಜಕೀಯ ವ್ಯಕ್ತಿಗಳ ಗುಲಾಮರಂತೆ ವರ್ತನೆ ನಡೆಸುವುದು ಸರಿಯಲ್ಲ. ಅನೈತಿಕ ಪೊಲೀಸ್ ಗಿರಿ ನಡೆಸುತ್ತಿರುವ ಸಂಘಟನೆಗಳ ಕಾರ್ಯಕರ್ತರನ್ನು ಕೂಡಲೇ ಬಂಧಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜಾ ಮಾತನಾಡಿ, ಜಿಲ್ಲೆಯಲ್ಲಿ ಅರಾಜಕತೆಯನ್ನು ಸೃಷ್ಟಿಸುತ್ತಿರುವ ಸಂಘಟನೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲಿನ ವಿದ್ಯಾರ್ಥಿಗಳನ್ನು ತಡೆದು ಪ್ರಶ್ನಿಸಲು ಸಂಘಪರಿವಾರದ ಕಾರ್ಯಕರ್ತರಿಗೆ ಏನಿದೆ ಹಕ್ಕು. ರಾಜ್ಯದಲ್ಲಿ ಬಿಜೆಪಿ ಸರ್ಕಾರದ ನಡೆಸುತ್ತಿದೆಯೇ? ಅಥವಾ ಸಂಘಪರಿವಾರದ ಆಡಳಿತ ನಡೆಸುತ್ತಿದೆಯಾ ಎಂದು ಪ್ರಶ್ನಿಸಿದರು.

ಎನ್.ಎಸ್.ಯು.ಐ ಜಿಲ್ಲಾಧ್ಯಕ್ಷ ಸವಾದ್ ಸುಳ್ಯ ಮಾತನಾಡಿ, ವೈದ್ಯಕೀಯ ವಿದ್ಯಾರ್ಥಿಗಳಿಗೆ ಗೂಂಡಾ ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಆರೋಪಿಗಳಿಗೆ ದುರ್ಬಲ ಸೆಕ್ಷನ್ ಹಾಕಿ ರಾತ್ರೋ ರಾತ್ರಿ ಬಿಡುಗಡೆ ಗೊಳಿಸಿರುವ ಪೊಲೀಸ್ ಇಲಾಖೆಯ ನಡೆ ಖಂಡನೀಯವಾಗಿದ್ದು, ವಿದ್ಯಾರ್ಥಿಗಳಲ್ಲಿ ಆತಂಕ ಮೂಡಿಸಿದೆ. ಮುಂದಿನ ದಿನಗಳಲ್ಲಿ ದೇಶದ, ರಾಜ್ಯದ ವಿದ್ಯಾರ್ಥಿಗಳು ಜಿಲ್ಲೆಗೆ ಬರಲು ಹೆದರುವ ಪರಿಸ್ಥಿತಿ ಎದುರಾಗಿದೆ. ಕೂಡಲೇ ಪೊಲೀಸ್ ಆಯುಕ್ತರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ಹಾಗೂ ಮುಂದೆ ಈ ರೀತಿ ನಡೆಯದಂತೆ ಎಚ್ಚರಿಕೆ ವಹಿಸಬೇಕೆಂದು ಆಗ್ರಹಿಸಿದರು.

ಎನ್.ಎಸ್.ಯು.ಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸವಾದ್ ಸುಳ್ಯ, ಎನ್.ಎಸ್.ಯು.ಐ ಕರ್ನಾಟಕ ಪ್ರಧಾನ ಕಾರ್ಯದರ್ಶಿ ಫಾರೂಕ್ ಬಯಾಬೆ, ಎನ್ ಎಸ್ ಯುಐ ಕರ್ನಾಟಕ ಸಂಯೋಜಕ ವಿನಯ್ ಕುಮಾರ್ ಸಿಂಧ್ಯಾ, ಎನ್.ಎಸ್.ಯು.ಐ ಜಿಲ್ಲಾ ಕಾರ್ಯಾಧ್ಯಕ್ಷ ಪವನ್ ಸಾಲ್ಯಾನ್, ಎನ್.ಎಸ್.ಯು.ಐ ಪದಾಧಿಕಾರಿಗಳಾದ ಬಾತೀಷ್ ಅಳಕೆಮಜಲು, ಶೋನಿತ್ ಬಂಗೇರ, ಶ್ವಾನ್ ಸಿರಿ, ಅಬ್ದುಲ್ ರಾಝೀ, ನಿಖಿಲ್ ಶೆಟ್ಟಿ, ಶಫೀಕ್, ನಜೀಬ್ ಮಂಚಿ, ನೀರಜ್, ಅಯಾನ್, ಸಾರ್ಥಕ್, ಶಕೀಲ್, ಫರಾನ್, ನಿಖಿಲ್ ಪೂಜಾರಿ, ಇಸಾಖ್ ಸಾಲ್ಮಾರ್, ಯುವ ಮುಖಂಡರಾದ ರಮಾನಂದ ಪೂಜಾರಿ, ಸೌಹನ್ ಎಸ್.ಕೆ, ಜಗದೀಶ್ ಕಜೆ, ಹನೀಫ್ ಪುಂಚತ್ತಾರ್, ದಾಮೋದರ್ ಮುರಾ, ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು