12:15 PM Tuesday30 - November 2021
ಬ್ರೇಕಿಂಗ್ ನ್ಯೂಸ್
ಕಾರ್ಕಳ : ಕೆಲಸಕ್ಕೆಂದು ಹೋದ ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು 9 ಮಂದಿ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ: ಆರೋಪಿ ಡಾ. ರತ್ನಾಕರ್ ಗೆ… ದಂಪತಿ ಜತೆ ಸುರತ್ಕಲ್ ಟೋಲ್ ಸಿಬ್ಬಂದಿ ಅನುಚಿತ ದುರ್ವರ್ತನೆ: ಪೋಲೀಸ್ ಕಮಿಷನರ್ ಶಶಿಕುಮಾರ್… ಕಾಫಿನಾಡಲ್ಲಿ ಪ್ರಾಮಾಣಿಕ ಕಳ್ಳರು!: 4 ಬಾರ್ ಗಳಿಗೆ ಹೊಕ್ಕ ಚೋರರು: ಹಣ ಸಿಕ್ಕಿಲ್ಲ, ಆದ್ರೆ… ಕಡೂರು: ನೀರಿನ ಟ್ಯಾಂಕ್ ಕ್ಲೀನ್ ಮಾಡುವಾಗ ಉಸಿರುಗಟ್ಟಿ ಇಬ್ಬರು ಸಾವು; ಒಬ್ಬ ಗಂಭೀರ ಬೆಂಗಳೂರು: ನವಜಾತ ಹೆಣ್ಣು ಶಿಶುವನ್ನು ದೇವರ ಗುಡಿ ಮುಂದಿಟ್ಟು ಪರಾರಿ ಮೂಡಿಗೆರೆ: ಒಣ ಗಾಂಜಾ ಮಾರಾಟ; ಮಾಲು ಸಹಿತ ಆರೋಪಿ ಬಂಧನ ಕಲಬುರಗಿ ಪಾಲಿಕೆ ಕಮಿಷನರ್ ವಿರುದ್ಧ ಲವ್, ಸೆಕ್ಸ್, ದೋಖಾ ಆರೋಪ: ಕಮಿಷನರ್ ಈ… ಸೋವೇನ ಹಳ್ಳಿ, ಹಗರಿಬೊಮ್ಮನ ಹಳ್ಳಿಗೆ ಸಮರ್ಪಕ ಬಸ್ ವ್ಯವಸ್ಥೆ: ಗ್ರಾಮಸ್ಥರ ಹಕ್ಕೊತ್ತಾಯ 9 ಮಂದಿ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ: ಡಾ. ರತ್ನಾಕರ್ ಬಂಧನ; 2…

ಇತ್ತೀಚಿನ ಸುದ್ದಿ

ಮೈಸೂರು: ಚಲಿಸುತ್ತಿದ್ದ ಕಾರಿನ ಟಯರ್ ಸ್ಫೋಟಗೊಂಡು ತಾಯಿ- ಮಗ ಸಾವು; ತಂದೆಗೆ ಗಾಯ

07/10/2021, 07:53

ಮೈಸೂರು(reporterkarnataka.com): ಟಯರ್ ಸ್ಫೋಟಗೊಂಡು ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ತಾಯಿ ಮತ್ತು ಮಗ ಮೃತಪಟ್ಟ ದಾರುಣ ಘಟನೆ ಮೈಸೂರಿನ ದಟ್ಟಗಳ್ಳಿ ರಿಂಗ್ ರಸ್ತೆಯ ಬಳಿ ನಡೆದಿದೆ.
ಮೃತಪಟ್ಟವರನ್ನು ದೈವಿಕ್(12) ಹಾಗೂ ಗುಣಲಕ್ಷ್ಮಿ(35) ಎಂದು ಗುರುತಿಸಲಾಗಿದೆ.

ಮೈಸೂರಿನ ದಟ್ಟಗಳ್ಳಿ ರಿಂಗ್ ರಸ್ತೆಯ ಬಳಿ ಕಾರಿನಲ್ಲಿ ಪತಿ ಜಗದೀಶ್ ಜತೆಗೆ ಗುಣಲಕ್ಷ್ಮಿ ಮತ್ತು ಮಗ ದೈವಿಕ್ ಹೋಗುತ್ತಿದ್ದರು. ಮುಂಜಾನೆ 4.30 ಸಮಯದಲ್ಲಿ ಕಾರಿನ ಮುಂಭಾಗದ ಟೈಯರ್ ಸ್ಫೋಟಗೊಂಡಿದೆ. ಇದರ ಪರಿಣಾಮ ಕಾರು ಕಂಬಕ್ಕೆ ಗುದ್ದಿದೆ. ಕಾರು ಓಡಿಸುತ್ತಿದ್ದ ಜಗದೀಶ್ ಅವರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಗುಣಲಕ್ಷ್ಮಿ ಮತ್ತು ದೈವಿಕ್ ಮಾತ್ರ ಕಾರಿನಲ್ಲಿ ಮೃತಪಟ್ಟಿದ್ದಾರೆ.

ಈ ಸಂಬಂಧ ಮೈಸೂರಿನ ಕುವೆಂಪು ನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು