9:53 PM Thursday2 - December 2021
ಬ್ರೇಕಿಂಗ್ ನ್ಯೂಸ್
ಹೆತ್ತವರು ಮದುವೆ ಮಾಡಿಸದ ಬೇಸರ: ನೇಣು ಬಿಗಿದು ಪ್ರೇಮಿಗಳು ಆತ್ಮಹತ್ಯೆ  ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಶವ ಪತ್ತೆ: ಕೊಲೆ ಶಂಕೆ: ಪತಿ, ಮಾವ,… ಸರ್ವಧರ್ಮಿಯರು ಸಂದರ್ಶಿಸುವ ಪುಣ್ಯ ಕ್ಷೇತ್ರ ಧರ್ಮಸ್ಥಳ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್  ಚಳ್ಳಕೆರೆ ತಾಲೂಕಿನಲ್ಲಿ ಅಕ್ರಮ ಮದ್ಯದ ಹೊಳೆ: ಇಲ್ಲಿನ ಅಂಗಡಿ, ಹೋಟೆಲ್ ಗಳು ಕೂಡ… ಚಳ್ಳಕೆರೆ: ಶೇಂಗಾ ಸಾಗಾಟ ಮಾಡುತ್ತಿದ್ದ ಟಾಟಾ ಎಸಿಇ ಟೈರ್ ಸಿಡಿದು ಸ್ಥಳದಲ್ಲೇ ಚಾಲಕ ಸಾವು;… ಬಿಜೆಪಿಯಿಂದ ಮತ್ತೆ ಮುಖ್ಯಮಂತ್ರಿ ಬದಲಾವಣೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಧೃವನಾರಾಯಣ್ ಸಾಲು ಸಾಲಾಗಿ ಆಸ್ಪತ್ರೆ ಸೇರುತ್ತಿರುವ ಪಚ್ಚನಾಡಿ ತ್ಯಾಜ್ಯ ದುರಂತ ಸಂತ್ರಸ್ತರು: ಜಿಲ್ಲಾಧಿಕಾರಿ ಇತ್ತ… ನಾದಬ್ರಹ್ಮ ಹಂಸಲೇಖಗೆ ಹೈಕೋರ್ಟ್ ಬಿಗ್‌ ರಿಲೀಫ್ : ಪ್ರಕರಣ ದಾಖಲಾತಿಗೆ ತಡೆಯಾಜ್ಞೆ; ದೂರುದಾತರಿಗೆ… ಚಿತ್ರದುರ್ಗ: ಕಾರು- ಬೈಕ್ ಮುಖಾಮುಖಿ ಡಿಕ್ಕಿ; ಓರ್ವ ಸ್ಥಳದಲ್ಲೇ ಸಾವು; ಇನ್ನೊರ್ವ ಗಂಭೀರ… ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?: ಚಿತ್ರದುರ್ಗದಲ್ಲಿ ಸಿದ್ದು…

ಇತ್ತೀಚಿನ ಸುದ್ದಿ

ದಲಿತ ಹೆಣ್ಣು ಮಗಳ ಅತ್ಯಾಚಾರಗೈದು ಹತ್ಯೆ: ನಾಳೆ ಮಸ್ಕಿಯಲ್ಲಿ ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ

07/10/2021, 19:49

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಸುರಪುರ ತಾಲೂಕಿನ ಚೌಡೇಶ್ವರಿಹಾಳ ಗ್ರಾಮದಲ್ಲಿ ಮಾದಿಗ ಸಮುದಾಯದ ಹೆಣ್ಣು ಮಗಳ ಮೇಲೆ ಅತ್ಯಾಚಾರ ನಡೆಸಿ ಪೆಟ್ರೋಲ್ ಹಾಕಿ ಸುಟ್ಟಿರುವ ಘಟನೆಯ ವಿರುದ್ಧ ಭಾರಿ ಪ್ರತಿಭಟನೆಗೆ ಸಿದ್ಧತೆ ನಡೆಸಲಾಗಿದೆ.

ರಾಜ್ಯ ಸರ್ಕಾರದಲ್ಲಿ ಅತಿ ಹೆಚ್ಚಿನ ಪ್ರಮಾಣದಲ್ಲಿ ಮಾದಿಗರಿಗೆ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಸಲಾಗುತ್ತಿದೆ. ಅಸ್ಪೃಶ್ಯತೆ ಆಚರಣೆ, ಮಾರಣಾಂತಿಕ ಹಲ್ಲೆ, ಕೊಲೆ, ಅತ್ಯಾಚಾರ ನಡೆಯುತ್ತಿರುವುದು ಕಂಡು ಬರುತ್ತಿದೆ. ಆದರೆ ಸರ್ಕಾರ ಇಂತಹ ಪ್ರಕರಣಗಳು ನಡೆದರೂ ಯಾವುದೇ ರೀತಿಯ ಕಠಿಣ ಕ್ರಮ ತೆಗೆದುಕೊಳ್ಳದೆ ಅಸಡ್ಡೆ, ಅಲಕ್ಷ್ಯ ತೋರುತ್ತಿದೆ. ಆಡಳಿತ ಪಕ್ಷದಲ್ಲಿ ಇರುವ ಮಾದಿಗ ಶಾಸಕರು ಈ ಕುರಿತು ಮಾತನಾಡಬೇಕು. ಹಾಗೆ ಪ್ರತಿಪಕ್ಷದಲ್ಲಿರುವ ಶಾಸಕ ಸರ್ಕಾರದ ಗಮನ ಸೆಳೆದು ಇಂತಹ ಘಟನಾವಳಿಗಳು ನಿಯಂತ್ರಿಸಲು ಒತ್ತಾಯ ಮಾಡಬೇಕು.

ಸೆ. 8ರಂದು ಸಂಜೆ 6 ಗಂಟೆಗೆ ಮಸ್ಕಿಯ ದಲಿತ, ಪ್ರಗತಿಪರ ರೈತರ, ಕನ್ನಡಪರ ಹಾಗೂ ಇನ್ನುಳಿದ ಹಲವಾರು ಸಂಘಟನೆಗಳ ಒಕ್ಕೂಟದ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದು ಎಂದು ದಲಿತ ಸಾಹಿತಿ ಸಿ.ದಾನಪ್ಪ ನಿಲೋಗಲ ಹಾಗೂ ದಲಿತ ಮುಖಂಡ   ದೊಡ್ಡಪ್ಪ ಮುರಾರಿ  ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು