10:46 AM Saturday27 - November 2021
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಪುಂಡರ ಎರಡು ತಂಡಗಳ ನಡುವೆ ಮಾರಾಮಾರಿ; ರಸ್ತೆಯಲ್ಲಿ ಓಡಾಡಿ ಹೊಡೆದಾಟ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ  ಭೂಮಿ ಕಂಪನ: ಭಯಭೀತರಾದ ಜನ ಆರೋಗ್ಯ ಇಲಾಖೆಯಲ್ಲೊಬ್ಬ ಕಚ್ಚೆ ಹರುಕ ವೈದ್ಯ!!: ಗುತ್ತಿಗೆ ಸಿಬ್ಬಂದಿ ಯುವತಿಯರ ಜತೆಗಿನ ರಾಸಲೀಲೆ… ದೇವಸ್ಥಾನದೊಳಗೆ ಸೀದಾ ಪ್ರವೇಶಿಸಿದ ಆ ಭಿಕ್ಷುಕಿ ಅಜ್ಜಿ ಸ್ವಾಮೀಜಿ ಕೈಗೆ ಕೊಟ್ಟಿದ್ದೇನು? ಆಂಜನೇಯ… ವೇದಾವತಿ ಡ್ಯಾಂ: ನದಿಯಲ್ಲಿ ಈಜದಂತೆ, ನೀರಿಗಿಳಿದು ಸೆಲ್ಫಿ ತೆಗೆಯದಂತೆ ಶಾಸಕ ರಘುಮೂರ್ತಿ ಮನವಿ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆಗೆ ಎದೆ ನೋವು: ಪುಣೆ ಆಸ್ಪತ್ರೆಗೆ ದಾಖಲು ವೇದಾವತಿ ಚೆಕ್ ಡ್ಯಾಂನಲ್ಲಿ ನೀರು ಪಾಲಾದ ಇಬ್ಬರ ಪೈಕಿ ಒಂದು ಶವ ಪತ್ತೆ:… ನಿರಂತರ ಮಳೆ: ಅಥಣಿಯಲ್ಲಿ ಸಾವಿರಾರು ಎಕರೆ ದ್ರಾಕ್ಷೆ ಬೆಳೆ ನಾಶ; ಆಕಾಶದತ್ತ ಮುಖ… ಅಮೃತ ಮಹೋತ್ಸವ: ನ.27ರಂದು ಮಂಗಳೂರು ರಾಮಕೃಷ್ಣ ಮಠಕ್ಕೆ ಗೌರವಾಭಿನಂದನೆ ಹಾಗೂ ಪೌರಸಮ್ಮಾನ 8ರ ಬಾಲಕಿಯ ಸಾಮೂಹಿಕ ಅತ್ಯಾಚಾರ, ಕೊಲೆ: 4 ಮಂದಿ ಬಂಧನ; ತುಟಿ ಬಿಚ್ಚದ…

ಇತ್ತೀಚಿನ ಸುದ್ದಿ

ದಲಿತ ಹೆಣ್ಣು ಮಗಳ ಅತ್ಯಾಚಾರಗೈದು ಹತ್ಯೆ ಮಾಡಿದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ: ಮಸ್ಕಿಯಲ್ಲಿ ಪ್ರತಿಭಟನಾಕರರ ಆಗ್ರಹ

09/10/2021, 16:46

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಮಸ್ಕಿ ಸುರಪುರ ತಾಲೂಕಿನ ಚೌಡೇಶ್ವರಿಹಾಳ ಗ್ರಾಮದಲ್ಲಿ ಮಾದಿಗ ಸಮುದಾಯದ ಹೆಣ್ಣು ಮಗಳ ಅತ್ಯಾಚಾರ ಮಾಡಿ ಪೆಟ್ರೋಲ್ ಹಾಕಿ ಸುಟ್ಟಿರುವ ಘಟನೆ ನಿಜಕ್ಕೂ ಅತ್ಯಂತ ನೋವಿನ ಸಂಗತಿ. ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ದಲಿತ ಸಾಹಿತಿ ದಾನಪ್ಪ ನಿಲಗಲ್ ಒತ್ತಾಯಿಸಿದ್ದಾರೆ.

ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಮಸ್ಕಿ ಅಂಬೇಡ್ಕರ್ ಪ್ರತಿಮೆ ವರೆಗೆ ನಡೆದ ಪಂಜಿನ ಮೆರವಣಿಗೆ ನಂತರ ಅವರು ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದರು.

 ಈ ಸರ್ಕಾರದ ಆಡಳಿತದಲ್ಲಿ ಅತಿ ಹೆಚ್ಚಿನ ಪ್ರಮಾಣದಲ್ಲಿ ಮಾದಿಗರಿಗೆ ಮೇಲೆ ನಿರಂತರವಾಗಿ ಅಸ್ಪೃಶ್ಯತೆ ಆಚರಣೆ, ಮಾರಣಾಂತಿಕ ಹಲ್ಲೆ, ಕೊಲೆ, ಅತ್ಯಾಚಾರ ನಡೆಯುತ್ತಿರುವುದು ಕಂಡು ಬರುತ್ತಿದೆ. ಆದರೆ ಸರ್ಕಾರ ಇಂತಹ ಪ್ರಕರಣಗಳು ನಡೆದರು ಯಾವುದೇ ರೀತಿಯ ಕಠಿಣ ಕ್ರಮ ತೆಗೆದುಕೊಳ್ಳದೆ ಅಸಡ್ಡೆ ತೋರುತ್ತಿದೆ. ಆಡಳಿತ ಪಕ್ಷದಲ್ಲಿ ಇರುವ ಮಾದಿಗ ಶಾಸಕರು ಈ ಕುರಿತು 


ಮಾತನಾಡಬೇಕು. ಹಾಗೆ ವಿರೋಧ ಪಕ್ಷದ ಶಾಸಕ ಸರ್ಕಾರದ ಗಮನ ಸೆಳೆದು ಇಂತಹ ಘಟನಾವಳಿಗಳು ನಿಯಂತ್ರಣ ಸಾಧಿಸಲು ಒತ್ತಾಯ ಮಾಡಬೇಕು. ಅತ್ಯಾಚಾರ ಮಾಡಿದ ಆರೋಪಿಗಳನ್ನು ಬಂಧಿಸಿ ಗಲ್ಲುಶಿಕ್ಷೆಗೆ ಒಳಪಡಿಸಬೇಕೆಂದು.

ಇತ್ತೀಚಿನ ಸುದ್ದಿ

ಜಾಹೀರಾತು