12:28 PM Saturday20 - April 2024
ಬ್ರೇಕಿಂಗ್ ನ್ಯೂಸ್
ಎಡಪದವು: ಅಂಗಡಿಗೆ ಗುದ್ದಿದ ಲಾರಿಯಿಂದ ಸರಣಿ ಅಪಘಾತ; ಬಸ್, ಕಾರು, ಸ್ಕೂಟರ್ ಜಖಂ;… ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ

ಇತ್ತೀಚಿನ ಸುದ್ದಿ

ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಕೇಂದ್ರ ಯುವ ಜನ,ಕ್ರೀಡಾ ಇಲಾಖೆಯಿಂದ ಸ್ವಚ್ಛತಾ ಕಾರ್ಯಕ್ರಮ

11/10/2021, 11:13

ಮಂಗಳೂರು (reporterkarnatak.com ): ದೇಶದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಕೇಂದ್ರ ಯುವ ಜನ,  ಕ್ರೀಡಾ ಇಲಾಖೆ, ವತಿಯಿಂದ ಸ್ವಚ್ಛತಾ ಕಾರ್ಯಕ್ರಮವು ನಗರದ ಮಂಗಳಾ ಸ್ಟೇಡಿಯಂ ಹಾಗೂ ಕರಾವಳಿ ಮೈದಾನದಲ್ಲಿ  ಇತ್ತೀಚಿಗೆ ಜರುಗಿತು.

ನೆಹರು ಯುವ ಕೇಂದ್ರದ ಸಮನ್ವಯಧಿಕಾರಿ ರಘು ವೀರ್ ಸೂಟರ್  ಪೇಟೆ ಮಾತನಾಡಿ ಸ್ವಚ್ಛತೆ ಮನೆಮನೆಯಲ್ಲಿ ಪ್ರಾರಂಭವಾಗಬೇಕು ಎಂದರು.

ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ. ಎ. ಮಾತನಾಡಿ ಸ್ವಚ್ಛ ಪರಿಸರದಿಂದ ಉತ್ತಮ ಆರೋಗ್ಯದ ಪರಿಕಲ್ಪನೆ ಇದೆ ಎಂದರು.

ಕ್ರೀಡಾ ಇಲಾಖೆಯ ನಿರ್ದೇಶಕ ಪ್ರದೀಪ್ ಡಿ ಸೋಜಾ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಕೆನರಾ ಕಾಲೇಜಿನ ಯೋಜನೆ ಎನ್.ಎಸ್.ಎಸ್ ಯೋಜನಾಧಿಕಾರಿ ಸೀಮಾ ಪ್ರಭು ಉಪಸ್ಥಿತರಿದ್ದರು.




ಸ್ವಚ್ಛತಾ ಕಾರ್ಯದಲ್ಲಿ ಕೆನರಾ ಹಾಗೂ ಬೆಸೆಂಟ್   ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಸ್ವಯಂಸೇವಕರು, ಕ್ರೀಡಾ ಇಲಾಖೆಯ ಕ್ರೀಡಾಳುಗಳು ಹಾಗೂ ಪೋಷಕರು ಭಾಗಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು