10:23 PM Thursday2 - December 2021
ಬ್ರೇಕಿಂಗ್ ನ್ಯೂಸ್
ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನ ಹಸ್ತಾಂತರ ಹೆತ್ತವರು ಮದುವೆ ಮಾಡಿಸದ ಬೇಸರ: ನೇಣು ಬಿಗಿದು ಪ್ರೇಮಿಗಳು ಆತ್ಮಹತ್ಯೆ  ಸರ್ವಧರ್ಮಿಯರು ಸಂದರ್ಶಿಸುವ ಪುಣ್ಯ ಕ್ಷೇತ್ರ ಧರ್ಮಸ್ಥಳ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್  ಚಳ್ಳಕೆರೆ ತಾಲೂಕಿನಲ್ಲಿ ಅಕ್ರಮ ಮದ್ಯದ ಹೊಳೆ: ಇಲ್ಲಿನ ಅಂಗಡಿ, ಹೋಟೆಲ್ ಗಳು ಕೂಡ… ಚಳ್ಳಕೆರೆ: ಶೇಂಗಾ ಸಾಗಾಟ ಮಾಡುತ್ತಿದ್ದ ಟಾಟಾ ಎಸಿಇ ಟೈರ್ ಸಿಡಿದು ಸ್ಥಳದಲ್ಲೇ ಚಾಲಕ ಸಾವು;… ಬಿಜೆಪಿಯಿಂದ ಮತ್ತೆ ಮುಖ್ಯಮಂತ್ರಿ ಬದಲಾವಣೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಧೃವನಾರಾಯಣ್ ಸಾಲು ಸಾಲಾಗಿ ಆಸ್ಪತ್ರೆ ಸೇರುತ್ತಿರುವ ಪಚ್ಚನಾಡಿ ತ್ಯಾಜ್ಯ ದುರಂತ ಸಂತ್ರಸ್ತರು: ಜಿಲ್ಲಾಧಿಕಾರಿ ಇತ್ತ… ನಾದಬ್ರಹ್ಮ ಹಂಸಲೇಖಗೆ ಹೈಕೋರ್ಟ್ ಬಿಗ್‌ ರಿಲೀಫ್ : ಪ್ರಕರಣ ದಾಖಲಾತಿಗೆ ತಡೆಯಾಜ್ಞೆ; ದೂರುದಾತರಿಗೆ… ಚಿತ್ರದುರ್ಗ: ಕಾರು- ಬೈಕ್ ಮುಖಾಮುಖಿ ಡಿಕ್ಕಿ; ಓರ್ವ ಸ್ಥಳದಲ್ಲೇ ಸಾವು; ಇನ್ನೊರ್ವ ಗಂಭೀರ… ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?: ಚಿತ್ರದುರ್ಗದಲ್ಲಿ ಸಿದ್ದು…

ಇತ್ತೀಚಿನ ಸುದ್ದಿ

ಶಿರ್ವ: ಮೀನು ಹಿಡಿಯುವಾಗ ಅಕಸ್ಮಾತ್ ಕಾಲು ಜಾರಿ ನೀರು ಪಾಲಾಗಿದ್ದ ದೈವ ನರ್ತಕನ ಶವ ಪತ್ತೆ

11/10/2021, 18:19

ಶಿರ್ವ(reporterkarnataka.com): ಇಲ್ಲಿನ ನಡಿಬೆಟ್ಟು ಅಣೆಕಟ್ಟು ಬಳಿ ಮೀನು ಹಿಡಿಯಲು ಹೋಗಿ ಆಕಸ್ಮಿಕವಾಗಿ ಜಾರಿಬಿದ್ದು ನೀರು ಪಾಲಾದ ದೈವ ನರ್ತಕ, ಶಿರ್ವ ಮಟ್ಟಾರು  ನಿವಾಸಿ ದಿಲೀಪ್ (30) ಅವರ ಶವ ಸೋಮವಾರ ಮಧ್ಯಾಹ್ನ ಅಣೆಕಟ್ಟು ಬಳಿ ಪತ್ತೆಯಾಗಿದೆ.

ಉಡುಪಿ ಅಗ್ನಿಶಾಮಕ ದಳದ ಠಾಣಾಧಿಕಾರಿ ಸತೀಶ್ ಎನ್. ನೇತೃತ್ವದಲ್ಲಿ ಸತೀಶ್ ಮತ್ತು ಸಿಬ್ಬಂದಿ ಹಾಗೂ ಮಲ್ಪೆಯ ಮುಳುಗುತಜ್ಞ ಈಶ್ವರ್ ಸತತ 4 ಗಂಟೆ ಗಳ ಕಾಲ ಕಾರ್ಯಾಚರಣೆ ನಡೆಸಿ ಶವವನ್ನು ಪತ್ತೆಹಚ್ಚಿದ್ದಾರೆ. ಭಾನುವಾರ ರಾತ್ರಿ ಬೆಳಕಿನ ಅಡಚಣೆಯಿಂದಾಗಿ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿತ್ತು.

ಘಟನಾ ಸ್ಥಳಕ್ಕೆ ಶಿರ್ವ ಪಿ ಎಸ್ ಐ ಶ್ರೀಶೈಲ್ ಮುರಾಗೋಡ್ ಮತ್ತು ಸಿಬಂದಿ ಆಗಮಿಸಿ   ತನಿಖೆ ನಡೆಸುತ್ತಿದ್ದಾರೆ.

ಅಗ್ನಿಶಾಮಕದಳದ ಶಂಕರ್, ಉಮೇಶ್, ವಿನಾಯಕ, ಚಂದ್ರಶೇಖರ, ಸುಜೇಶ್ ಮತ್ತು ಆದರ್ಶ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ದಿಲೀಪ್ ಚಿಕ್ಕ ವಯಸ್ಸಿನಲ್ಲೇ ಕರಾವಳಿಯಾದ್ಯಂತ ದೈವಸ್ಥಾನಗಳಲ್ಲಿ ದೈವ ನರ್ತಕರಾಗಿ, ಸೇವಕರಾಗಿ ಹೆಸರು ಮಾಡಿದ್ದರು. ಬಬ್ಬುಸ್ವಾಮಿ ದೈವದ ನರ್ತಕರಾಗಿ ಹೆಚ್ಚು ಪ್ರಸಿದ್ದಿ ಗಳಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು