1:37 PM Saturday4 - December 2021
ಬ್ರೇಕಿಂಗ್ ನ್ಯೂಸ್
ಚಳ್ಳಕೆರೆ ಗಂಜಿಗುಂಟೆ ಲಂಬಾಣಿ ತಾಂಡದಲ್ಲಿ ಹೆಚ್ಚುತ್ತಿದೆ ಬೀದಿ ನಾಯಿಗಳ ಕಾಟ: ಶ್ವಾನ ಕಡಿತಕ್ಕೆ ಯುವಕ ಬಲಿ ಚಿಕ್ಕಮಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಬೆಂಗಾವಲು ವಾಹನ ಅಪಘಾತ: ಓರ್ವ ಸಿಬ್ಬಂದಿಗೆ ತೀವ್ರ… ಮಲೆನಾಡಲ್ಲಿ ಮತ್ತೆ ಮಳೆ ಅಬ್ಬರ: ಬೆಳೆ ಕಳೆದುಕೊಳ್ಳುವ ಆತಂಕದಲ್ಲಿ ಕೃಷಿಕರು  ರಂಗಾಪುರ: ಇದು ಅಂಗನವಾಡಿ ಕಟ್ಟಡ ನಾ? ಅಥವಾ ಸಾರ್ವಜನಿಕ ಶೌಚಾಲಯ ನಾ? ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನ ಹಸ್ತಾಂತರ ಹೆತ್ತವರು ಮದುವೆ ಮಾಡಿಸದ ಬೇಸರ: ನೇಣು ಬಿಗಿದು ಪ್ರೇಮಿಗಳು ಆತ್ಮಹತ್ಯೆ  ಸರ್ವಧರ್ಮಿಯರು ಸಂದರ್ಶಿಸುವ ಪುಣ್ಯ ಕ್ಷೇತ್ರ ಧರ್ಮಸ್ಥಳ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್  ಚಳ್ಳಕೆರೆ ತಾಲೂಕಿನಲ್ಲಿ ಅಕ್ರಮ ಮದ್ಯದ ಹೊಳೆ: ಇಲ್ಲಿನ ಅಂಗಡಿ, ಹೋಟೆಲ್ ಗಳು ಕೂಡ… ಚಳ್ಳಕೆರೆ: ಶೇಂಗಾ ಸಾಗಾಟ ಮಾಡುತ್ತಿದ್ದ ಟಾಟಾ ಎಸಿಇ ಟೈರ್ ಸಿಡಿದು ಸ್ಥಳದಲ್ಲೇ ಚಾಲಕ ಸಾವು;… ಬಿಜೆಪಿಯಿಂದ ಮತ್ತೆ ಮುಖ್ಯಮಂತ್ರಿ ಬದಲಾವಣೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಧೃವನಾರಾಯಣ್

ಇತ್ತೀಚಿನ ಸುದ್ದಿ

ವಸತಿ ಶಾಲೆಯ ಗಣಿತ ಶಿಕ್ಷಕನ ಕಾಮದಾಟ: ಅಪ್ರಾಪ್ತ ವಿದ್ಯಾರ್ಥಿನಿಯರ ಜತೆ ಅಶ್ಲೀಲ ವರ್ತನೆ; ಹೆತ್ತವರ ಆಕ್ರೋಶ

14/10/2021, 19:37

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ರಾಯಚೂರು ಜಿಲ್ಲೆಯಲ್ಲಿ ವಸತಿ ಶಾಲೆಯೊಂದರ ಗಣಿತ ಶಿಕ್ಷಣ ಕಾಮ ಪುರಾಣ ಬಿಚ್ಚಿಕೊಂಡಿದೆ. ಹೈಸ್ಕೂಲ್ ನಲ್ಲಿ ಕಲಿಯುತ್ತಿರುವ ಹದಿಹರೆಯದ ವಿದ್ಯಾರ್ಥಿನಿಯರ ಜತೆ ಈತನ ಅಶ್ಲೀಲ, ಅಸಭ್ಯ ವರ್ತನೆ ಬಯಲಾಗಿದೆ. ತನ್ನ ಕಾಮಾಯಣ ಬಯಲಾಗುತ್ತಿದ್ದಂತೆ ಶಿಕ್ಷಕ ಪರಾರಿಯಾಗಿದ್ದಾನೆ.

ಮಸ್ಕಿ ತಾಲೂಕಿನ ವಟಗಲ್ ಗ್ರಾಮದ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಸುಶಿಕ್ಷಿತ ಸಮಾಜ ತಲೆ ತಗ್ಗಿಸುವ ಘಟನೆ ನಡೆದಿದೆ. ಇಲ್ಲಿ ಅತಿಥಿ ಗಣಿತ ಶಿಕ್ಷಕ ತನ್ನ ವಿದ್ಯಾರ್ಥಿನಿಯರ ಜತೆ ಅಸಹ್ಯವಾಗಿ ವರ್ತಿಸಿರುವ ವೀಡಿಯೊ ಬಯಲಾಗಿದೆ.

ಕಷ್ಟಪಟ್ಟು ಓದಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ ಬಡ ಹೆಣ್ಮಕ್ಕಳು ವಸತಿ ಶಾಲೆಯ ಪ್ರವೇಶ ಪಡೆಯುತ್ತಾರೆ. ಮನೆಯವರು ಕೂಡ ತಮ್ಮ ಮಕ್ಕಳು ಸುರಕ್ಷಿತವಾಗಿ ಶಿಕ್ಷಣ ಪಡೆಯುತ್ತಾರೆ ಎಂಬ ನಂಬಿಕೆ ಹೊಂದಿರುತ್ತಾರೆ. ಆದರೆ ಬೇಲಿಯೇ ಎದ್ದು ಹೊಲ ಮೇಯ್ದರೆ ಏನು ಮಾಡಲು ಸಾಧ್ಯ? ಶಿಕ್ಷಣ ಕೊಡಬೇಕಾದ, ತನ್ನ ವಿದ್ಯಾರ್ಥಿಗಳನ್ನು ತನ್ನ ಮಕ್ಕಳಂತೆ ಜೋಪಾನ ಮಾಡಬೇಕಾದ ಶಿಕ್ಷಕನೇ ಹಲ್ಕಾ ಕೆಲಸಕ್ಕೆ ಕೈಹಾಕಿ ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಮಾಡಿದ್ದಾನೆ.

ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಪ್ರೌಢಾವಸ್ಥೆಗೆ ಬಂದಿರುವ 7,8 ,9, ಮತ್ತು 10 ನೇ ತರಗತಿಗಳಲ್ಲಿ ಕಲಿಯುತ್ತಿರುವ ಹೆಣ್ಮಕ್ಕಳಿದ್ದಾರೆ. ಆದರೆ ಇಲ್ಲಿನ ಗಣಿತ ಶಿಕ್ಷಕನ ವಿದ್ಯಾರ್ಥಿನಿಯರ ಜತೆ ಅಶ್ಲೀಲವಾಗಿ, ಅಸಭ್ಯವಾಗಿ ನಡೆದು ಕೊಳ್ಳುತ್ತಿರುವ ವಿಡಿಯೋ ಕೆಲವು ದಿನಗಳಿಂದ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದೆ. ಇದನ್ನು ಕಂಡು ಹೌಹಾರಿದ ಶಿಕ್ಷಕ ಇಂದು ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.

ಇನ್ನು ಈ ಶಿಕ್ಷಕನ ದುರ್ವರ್ತನೆ ಕಂಡ ಗ್ರಾಮಸ್ಥರು ವಸತಿ ನಿಲಯಕ್ಕೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂತಹ ಕೆಟ್ಟ ಶಿಕ್ಷಕರನ್ನು ಅಮಾನತು ಮಾಡಿ ಕಾನೂನು ಕ್ರಮ ಕೈಗೊಳ್ಳಿ ಎಂದು ಆಗ್ರಹಿಸಿದ್ದಾರೆ.

ಹೆಣ್ಣು ಮಕ್ಕಳ ಜತೆ ಅಸಹ್ಯವಾಗಿ ವರ್ತಿಸುವ ಶಿಕ್ಷಕನನ್ನು ತಕ್ಷಣ ಅಮಾನತು ಮಾಡಿ ಕಠಿಣ ಕ್ರಮ ಕೈಗೊಳ್ಳಿ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಅನಿತಾ ಬಿ ಮಂತ್ರಿ ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು