4:46 PM Thursday25 - April 2024
ಬ್ರೇಕಿಂಗ್ ನ್ಯೂಸ್
ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ…

ಇತ್ತೀಚಿನ ಸುದ್ದಿ

ಜನರು ಮಾನಸಿಕ ಆರೋಗ್ಯ ರಕ್ಷಣೆಗೆ ಮೊದಲು ಆದ್ಯತೆ ನೀಡಿ: ನ್ಯಾಯಾಧೀಶ ಎಚ್.ಆರ್. ದೇವರಾಜ್ 

15/10/2021, 19:12

ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಜನರು ಮಾನಸಿಕ ಆರೋಗ್ಯ ರಕ್ಷಣೆಗೆ ಮೊದಲು ಆದ್ಯತೆ ನೀಡಬೇಕು ಎಂದು ಜೆಎಂಎಫ್‌ಸಿ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶ ಎಚ್.ಆರ್.ದೇವರಾಜ್ ಹೇಳಿದರು.

ಶ್ರೀನಿವಾಸಪುರ ತಾಲೂಕಿನ ಗೌನಿಪಲ್ಲಿ ಗ್ರಾಮದದಲ್ಲಿ ಕಾನೂನು ಸೇವಾ ಪ್ರಾಧಿಕಾರ ಹಾಗೂ ಸ್ಥಳೀಯ ಗ್ರಾಮ ಪಂಚಾಯಿತಿ ವತಿಯಿಂದ ಭಾನುವಾರ ಏರ್ಪಡಿಸಿದ್ದ ಮಾನಸಿಕ ಆರೋಗ್ಯ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು , ಜನರು ಬೇರೆ ಬೇರೆ ಕಾರಣಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗುತ್ತಿದ್ದಾರೆ . ಅದು ಕೆಲವು ಸಲ ಅಪಾಯಕಾರಿ ಆಗುವ ಸಂಭವ ಇರುತ್ತದೆ ಎಂದು ಹೇಳಿದರು . ಮನುಷ್ಯ ಮಾನಸಿಕ ಸಮತೋಲನ ಕಾಪಾಡಿಕೊಳ್ಳಬೇಕು . ಖಿನ್ನತೆಯ ಲಕ್ಷಣಗಳು ಕಂಡುಬಂದಲ್ಲಿ ಮನೋವೈದ್ಯರ ಸಲಹೆ ಪಡೆಯಬೇಕು ಎಂದು ಹೇಳಿದರು.

ಅಪರ ಸಿವಿಲ್ ನ್ಯಾಯಾಧೀಶ ನಾಗೇಶ್ ನಾಯಕ್ , ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅರುಣ ರವಿಕುಮಾರ್‌ , ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್‌ ಸಿ.ರವಿಕುಮಾರ್ ಪಿಡಿಒ ಶಂಕರಪ್ಪ ಇದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು