11:06 AM Saturday27 - November 2021
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಪುಂಡರ ಎರಡು ತಂಡಗಳ ನಡುವೆ ಮಾರಾಮಾರಿ; ರಸ್ತೆಯಲ್ಲಿ ಓಡಾಡಿ ಹೊಡೆದಾಟ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ  ಭೂಮಿ ಕಂಪನ: ಭಯಭೀತರಾದ ಜನ ಆರೋಗ್ಯ ಇಲಾಖೆಯಲ್ಲೊಬ್ಬ ಕಚ್ಚೆ ಹರುಕ ವೈದ್ಯ!!: ಗುತ್ತಿಗೆ ಸಿಬ್ಬಂದಿ ಯುವತಿಯರ ಜತೆಗಿನ ರಾಸಲೀಲೆ… ದೇವಸ್ಥಾನದೊಳಗೆ ಸೀದಾ ಪ್ರವೇಶಿಸಿದ ಆ ಭಿಕ್ಷುಕಿ ಅಜ್ಜಿ ಸ್ವಾಮೀಜಿ ಕೈಗೆ ಕೊಟ್ಟಿದ್ದೇನು? ಆಂಜನೇಯ… ವೇದಾವತಿ ಡ್ಯಾಂ: ನದಿಯಲ್ಲಿ ಈಜದಂತೆ, ನೀರಿಗಿಳಿದು ಸೆಲ್ಫಿ ತೆಗೆಯದಂತೆ ಶಾಸಕ ರಘುಮೂರ್ತಿ ಮನವಿ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆಗೆ ಎದೆ ನೋವು: ಪುಣೆ ಆಸ್ಪತ್ರೆಗೆ ದಾಖಲು ವೇದಾವತಿ ಚೆಕ್ ಡ್ಯಾಂನಲ್ಲಿ ನೀರು ಪಾಲಾದ ಇಬ್ಬರ ಪೈಕಿ ಒಂದು ಶವ ಪತ್ತೆ:… ನಿರಂತರ ಮಳೆ: ಅಥಣಿಯಲ್ಲಿ ಸಾವಿರಾರು ಎಕರೆ ದ್ರಾಕ್ಷೆ ಬೆಳೆ ನಾಶ; ಆಕಾಶದತ್ತ ಮುಖ… ಅಮೃತ ಮಹೋತ್ಸವ: ನ.27ರಂದು ಮಂಗಳೂರು ರಾಮಕೃಷ್ಣ ಮಠಕ್ಕೆ ಗೌರವಾಭಿನಂದನೆ ಹಾಗೂ ಪೌರಸಮ್ಮಾನ 8ರ ಬಾಲಕಿಯ ಸಾಮೂಹಿಕ ಅತ್ಯಾಚಾರ, ಕೊಲೆ: 4 ಮಂದಿ ಬಂಧನ; ತುಟಿ ಬಿಚ್ಚದ…

ಇತ್ತೀಚಿನ ಸುದ್ದಿ

ಚಿತ್ರದುರ್ಗ: ಒಂದೇ ಮನೆಯ 4 ಮಂದಿಯ ನಿಗೂಢ ಸಾವಿಗೆ ಬಿಗ್ ಟ್ವಿಸ್ಟ್; ಮನೆ ಮಗಳೇ ಹಾಕಿದ್ಲು ವಿಷ; ಅಷ್ಟಕ್ಕೂ ಅವಳ ಕೋಪಕ್ಕೆ ಕಾರಣ ಏನು?

18/10/2021, 13:30

ಚಿತ್ರದುರ್ಗ(reporterkarnataka.com): ಚಿತ್ರದುರ್ಗ ಜಿಲ್ಲೆಯ ಇಸಾಮುದ್ರ ಗ್ರಾಮದಲ್ಲಿ ಒಂದೇ ಕುಟುಂಬ ನಾಲ್ವರು ನಿಗೂಢವಾಗಿ ಸಾವನ್ನಪ್ಪಿರುವ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮನೆ ಮಗಳೇ ಈ ಹತ್ಯೆ ನಡೆದಿದ್ದಾಳೆ ಎಂಬ ಶಾಕಿಂಗ್ ನ್ಯೂಸ್ ಹೊರ ಬಿದ್ದಿದೆ.

ಜುಲೈ 12ರಂದು ಇಸಾಮುದ್ರ ಗ್ರಾಮದ ಒಂದೇ ಮನೆಯ ತಿಪ್ಪಾ ನಾಯ್ಕ್(46), ತಾಯಿ ಸುಧಾಬಾಯಿ(43), ಸಹೋದರಿ ರಮ್ಯ(16) ಹಾಗೂ ಗುಂಡಿಬಾಯಿ(75) ಸಾವಿಗೀಡಾದ್ದರು.

ಘಟನೆ ಸಂಬಂಧ ತನಿಖೆಗೆ ಸಂಬಂಧಫಟ್ಟಂತೆ ಪೋಲಿಸರು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಅಂದು ಮನೆಯಲ್ಲಿ ಮಾಡಿದ್ದ ಅಡುಗೆಯನ್ನು ಕಳುಹಿಸಿದ್ದರು. ಇದೀಗ ಪ್ರಯೋಗಾಲಯದ ವರದಿ ಬಂದಿದೆ. ಅಂದು ಅಡುಗೆ ಮಾಡಿದ್ದ ಮುದ್ದೆಗೆ ವಿಷ ಬೆರೆಸಿರುವ ಅಂಶ ಪ್ರಯೋಗಾಲಯದ ವರದಿಯಿಂದ ಬೆಳಕಿಗೆ ಬಂದಿದೆ. ಮನೆ ಮಗಳೇ ವಿಷ ಬೆರೆಸಿರುವುದು ಇದೀಗ ಪೊಲೀಸ್ ತನಿಖೆಯಿಂದ ತಿಳಿದು ಬಂದಿದೆ.

ಪೋಷಕರು ನನ್ನ ಕೆಟ್ಟದಾಗಿ ನಡೆಸಿಕೊಳ್ಳುತ್ತಿದ್ದರು, ನನಗೆ ಬೈಯುತ್ತಿದ್ದರು. ಇದರಿಂದ ನಾನು ಮನನೊಂದು ಮುದ್ದೆಗೆ ವಿಷಬೆರೆಸಿ ನಾಲ್ವರನ್ನು ಹತ್ಯೆ ಮಾಡಿರುವುದಾಗಿ ಪೊಲೀಸರ ಮುಂದೆ ಯುವತಿ ತಪ್ಪೊಪ್ಪಿಕೊಂಡಿದ್ದಾಳೆ ಅಂತ ಭರಮಸಾಗರ ಪೊಲೀಸರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಈ ನಡುವೆ ಯುವತಿಯ ತಮ್ಮ ರಾಹುಲ್(18) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾನೆ. 

ಇತ್ತೀಚಿನ ಸುದ್ದಿ

ಜಾಹೀರಾತು