1:42 PM Friday19 - April 2024
ಬ್ರೇಕಿಂಗ್ ನ್ಯೂಸ್
ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ…

ಇತ್ತೀಚಿನ ಸುದ್ದಿ

ನೈತಿಕ ಪೊಲೀಸ್ ಗಿರಿ ಸಮರ್ಥನೆ: ಮುಖ್ಯಮಂತ್ರಿಗೆ ಆಲ್ ಇಂಡಿಯಾ ಲಾಯರ್ಸ್ ಅಸೋಸಿಯೇಶನ್ ಫಾರ್ ಜಸ್ಟೀಸ್ ನೋಟಿಸ್ ಜಾರಿ

18/10/2021, 21:40

ಬೆಂಗಳೂರು(reporterkarnataka.com): ನೈತಿಕ ಪೊಲೀಸ್ ಗಿರಿಯನ್ನು ಸಮರ್ಥಿಸಿ ಕಳೆದ ವಾರ ಹೇಳಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಆಲ್ ಇಂಡಿಯಾ ಲಾಯರ್ಸ್ ಅಸೋಸಿಯೇಷನ್ ಫಾರ್ ಜಸ್ಟೀಸ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ನೋಟಿಸ್ ಜಾರಿ ಮಾಡಿದೆ.

ಮುಖ್ಯಮಂತ್ರಿ ನೀಡಿರುವ ಹೇಳಿಕೆ ಅವರು ಅಧಿಕಾರ ವಹಿಸುವ ಸಂದರ್ಭದಲ್ಲಿ ಮಾಡಿದ ಪ್ರಮಾಣ ವಚನಕ್ಕೆ ವಿರುದ್ಧವಾದದ್ದು. ಇದು ಸಂವಿಧಾನದ ಉಲ್ಲಂಘನೆಯಾಗಿದೆ ಎಂದು ಉಲ್ಲೇಖಿಸಿ ನೋಟಿಸ್ ನೀಡಲಾಗಿದೆ.

ಸರ್ವೋಚ್ವ ನ್ಯಾಯಾಲಯ ಅಂತರ್ ಜಾತಿ ಹಾಗೂ ಅಂತರ್ ಧರ್ಮ ವಿವಾಹದ ರಕ್ಷಣೆ ಬಗ್ಗೆ ನೀಡಿದ ತೀರ್ಪುಗಳ‌ ಸ್ಪಷ್ಟ ‌ಉಲ್ಲಂಘನೆಯಾಗಿದೆ. ಮತೀಯ ಗೂಂಡಾಗಿರಿಯನ್ನು ಸಿಎಂ ಬೊಮ್ಮಾಯಿ ಸಮರ್ಥಿಸಿಕೊಂಡಿದ್ದು, ಆ ಹೇಳಿಕೆಯನ್ನು ವಾಪಸ್ಸು ಪಡೆಯಬೇಕು. ರಾಜ್ಯದ ಜನರನ್ನು ಕ್ಷಮೆಯಾಚಿಸಬೇಕು ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು