1:33 PM Saturday4 - December 2021
ಬ್ರೇಕಿಂಗ್ ನ್ಯೂಸ್
ಚಳ್ಳಕೆರೆ ಗಂಜಿಗುಂಟೆ ಲಂಬಾಣಿ ತಾಂಡದಲ್ಲಿ ಹೆಚ್ಚುತ್ತಿದೆ ಬೀದಿ ನಾಯಿಗಳ ಕಾಟ: ಶ್ವಾನ ಕಡಿತಕ್ಕೆ ಯುವಕ ಬಲಿ ಚಿಕ್ಕಮಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಬೆಂಗಾವಲು ವಾಹನ ಅಪಘಾತ: ಓರ್ವ ಸಿಬ್ಬಂದಿಗೆ ತೀವ್ರ… ಮಲೆನಾಡಲ್ಲಿ ಮತ್ತೆ ಮಳೆ ಅಬ್ಬರ: ಬೆಳೆ ಕಳೆದುಕೊಳ್ಳುವ ಆತಂಕದಲ್ಲಿ ಕೃಷಿಕರು  ರಂಗಾಪುರ: ಇದು ಅಂಗನವಾಡಿ ಕಟ್ಟಡ ನಾ? ಅಥವಾ ಸಾರ್ವಜನಿಕ ಶೌಚಾಲಯ ನಾ? ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನ ಹಸ್ತಾಂತರ ಹೆತ್ತವರು ಮದುವೆ ಮಾಡಿಸದ ಬೇಸರ: ನೇಣು ಬಿಗಿದು ಪ್ರೇಮಿಗಳು ಆತ್ಮಹತ್ಯೆ  ಸರ್ವಧರ್ಮಿಯರು ಸಂದರ್ಶಿಸುವ ಪುಣ್ಯ ಕ್ಷೇತ್ರ ಧರ್ಮಸ್ಥಳ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್  ಚಳ್ಳಕೆರೆ ತಾಲೂಕಿನಲ್ಲಿ ಅಕ್ರಮ ಮದ್ಯದ ಹೊಳೆ: ಇಲ್ಲಿನ ಅಂಗಡಿ, ಹೋಟೆಲ್ ಗಳು ಕೂಡ… ಚಳ್ಳಕೆರೆ: ಶೇಂಗಾ ಸಾಗಾಟ ಮಾಡುತ್ತಿದ್ದ ಟಾಟಾ ಎಸಿಇ ಟೈರ್ ಸಿಡಿದು ಸ್ಥಳದಲ್ಲೇ ಚಾಲಕ ಸಾವು;… ಬಿಜೆಪಿಯಿಂದ ಮತ್ತೆ ಮುಖ್ಯಮಂತ್ರಿ ಬದಲಾವಣೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಧೃವನಾರಾಯಣ್

ಇತ್ತೀಚಿನ ಸುದ್ದಿ

Mangaluru | ಲೋಕಾಯುಕ್ತ ವಿಶೇಷ ಸರಕಾರಿ ಅಭಿಯೋಜಕ ಲಾಯರ್ ಕೆ.ಎಸ್.ಎನ್.ರಾಜೇಶ್ ಮೇಲೆ ಎಫ್ಐಆರ್ ದಾಖಲು ; ಅತ್ಯಾಚಾರ ಯತ್ನ ಆರೋಪ

19/10/2021, 10:15

ಮಂಗಳೂರು(reporterkarnataka.com) ಮಂಗಳೂರು ಲೋಕಾಯುಕ್ತ ವಿಭಾಗದ ವಿಶೇಷ ಸರಕಾರಿ ಅಭಿಯೋಜಕ ಕೆ.ಎಸ್.ಎನ್. ರಾಜೇಶ್ ಅವರ ವಿರುದ್ಧ ಅತ್ಯಾಚಾರಕ್ಕೆ ಯತ್ನಿಸಿದ ಬಗ್ಗೆ ದೂರು ದಾಖಲಾಗಿದೆ.

ಕಾನೂನು ವಿದ್ಯಾರ್ಥಿನಿಯೋರ್ವಳು ನಗರದ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದು ವಕೀಲರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಮಂಗಳೂರಿನಲ್ಲಿ ಕಾನೂನು ವಿದ್ಯಾರ್ಥಿನಿಯಾಗಿರುವ ಸಂತ್ರಸ್ತೆ ಕಳೆದ ಆಗಸ್ಟ್ 8 ರಂದು ನ್ಯಾಯವಾದಿ ಕೆ.ಎಸ್.ಎನ್ ರಾಜೇಶ್ ಅವರ ಕರಂಗಲ್ಪಾಡಿಯ ಕಚೇರಿಯಲ್ಲಿ ತರಬೇತಿಗಾಗಿ ಸೇರಿದ್ದಳು.

ಈ ನಡುವೆ, ರಾಜೇಶ್ ಯುವತಿಯನ್ನು ಪುಸಲಾಯಿಸಿ ಸೆಕ್ಸ್ ನಡೆಸಲು ಒತ್ತಾಯಿಸುತ್ತಿದ್ದ. ಕಳೆದ ಸೆ.25 ರಂದು ತನ್ನ ಚೇಂಬರ್ ಒಳಗೆ ಕರೆದು ಅಸಭ್ಯವಾಗಿ ವರ್ತಿಸಿದ್ದು, ಅತ್ಯಾಚಾರಕ್ಕೆ ಯತ್ನಿಸಿದ್ದಾಗಿ ಯುವತಿ ದೂರಿನಲ್ಲಿ ತಿಳಿಸಿದ್ದಾಳೆ.ಇದರ ಬೆನ್ನಲ್ಲೇ ಎಫ್‌ಐಆರ್ ದಾಖಲಾಗಿದ್ದು ರಾಜೇಶ್ ಕಚೇರಿಯಲ್ಲಿ ಸಹೋದ್ಯೋಗಿ ಆಗಿದ್ದಾರೆ ಎನ್ನಲಾದ ಮಹಾಲಕ್ಷ್ಮಿ ಹೆಗ್ಡೆ ಮತ್ತು ಧ್ರುವ ಎಂಬವರ ವಿರುದ್ಧವೂ ಪ್ರಕರಣದಲ್ಲಿ ಆರೋಪಿಗಳಾಗಿ ಹೆಸರಿಸಲಾಗಿದೆ

ಆರೋಪಿ ವಿರುದ್ಧ ಸೆಕ್ಷನ್ 376,376-2,376(2)-ಕೆ,376 ಸಿ, 511, 354(), 354(2), 354 (2), 354 (8), 506, 34, 384, 388, 389 ಅಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಇದರ ಬೆನ್ನಲ್ಲೇ ಎಫ್‌ಐಆರ್ ದಾಖಲಾಗಿದ್ದು ರಾಜೇಶ್ ಕಚೇರಿಯಲ್ಲಿ ಸಹೋದ್ಯೋಗಿ ಆಗಿದ್ದಾರೆ ಎನ್ನಲಾದ ಮಹಾಲಕ್ಷ್ಮಿ ಹೆಗ್ಡೆ ಮತ್ತು ಧ್ರುವ ಎಂಬವರ ವಿರುದ್ಧವೂ ಪ್ರಕರಣದಲ್ಲಿ ಆರೋಪಿಗಳಾಗಿ ಹೆಸರಿಸಲಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು