11:39 AM Saturday20 - April 2024
ಬ್ರೇಕಿಂಗ್ ನ್ಯೂಸ್
ಎಡಪದವು: ಅಂಗಡಿಗೆ ಗುದ್ದಿದ ಲಾರಿಯಿಂದ ಸರಣಿ ಅಪಘಾತ; ಬಸ್, ಕಾರು, ಸ್ಕೂಟರ್ ಜಖಂ;… ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ

ಇತ್ತೀಚಿನ ಸುದ್ದಿ

ಭಾರತೀಯ ವಾಯುಪಡೆಯ ಮಿರಾಜ್ ಪತನ: ಪೈಲಟ್ ಸುರಕ್ಷಿತವಾಗಿ ಪಾರು; ಮಧ್ಯಪ್ರದೇಶದಲ್ಲಿ ದುರ್ಘಟನೆ

21/10/2021, 23:02

ಗ್ವಾಲಿಯರ್(reporterkarnataka.com):

ಭಾರತೀಯ ವಾಯುಪಡೆಯ ಮಿರಾಜ್ 2000 ಯುದ್ಧ ವಿಮಾನ ಗುರುವಾರ ಮಧ್ಯಪ್ರದೇಶದ ಭಿಂಡ್ ಜಿಲ್ಲೆಯ ಬಳಿ ಪತನಗೊಂಡಿದ್ದು, ಪೈಲಟ್ ಹೊರಗೆ ಧುಮುಕಿ ಬಚಾವ್ ಆಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಪೈಲಟ್ ಸುರಕ್ಷಿತವಾಗಿ ಹೊರಹಾಕಲ್ಪಟ್ಟರು ಎಂದು ಭಾರತೀಯ ವಾಯುಪಡೆ ಟ್ವೀಟ್ ಮಾಡಿದೆ. ಇಂದು ಮುಂಜಾನೆ ಮಧ್ಯಪ್ರದೇಶದ ಭಿಂಡ್ ಜಿಲ್ಲೆಯಲ್ಲಿ ಮೀರಜ್ 2000 ಏರ್‍ಕ್ರಾಫ್ಟ್ ಹಾರಾಟ ನಡೆಸುತ್ತಿದ್ದಾಗ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನಲೆಯಲ್ಲಿ ವಿಮಾನ ಪತನಗೊಂಡಿದೆ.  ವಿಮಾನ ಪತನದ ಮುನ್ಸೂಚನೆ ದೊರೆಯುತ್ತಿದ್ದಂತೆ ಪೈಲಟ್ ವಿಮಾನದಿಂದ ಪ್ಯಾರಾಚೂಟ್ ಮೂಲಕ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ.

ಮನಕ್‍ಭಾಗ್ ಪ್ರದೇಶದಲ್ಲಿ ಹಾರಾಟ ನಡೆಸುತ್ತಿದ್ದ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿತು. ನೋಡ ನೋಡುತ್ತಿದ್ದಂತೆ ವಿಮಾನ ಪತನವಾಯಿತು. ಪೈಲಟ್ ಅವರನ್ನು ರಕ್ಷಣೆ ಮಾಡಲಾಗಿದೆ ಎಂದು ಭೀಂಡ್ ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಮನೋಜ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಇಂದು ಮುಂಜಾನೆ ಗ್ವಾಲಿಯರ್‍ನಲ್ಲಿರುವ ಏರ್‍ಬೇಸ್‍ನಿಂದ ವಿಮಾನ ಹಾರಾಟ ಆರಂಭಿಸಿತ್ತು. ಘಟನಾ ಸ್ಥಳಕ್ಕೆ ಜಿಲ್ಲಾಡಳಿತ ಹಾಗೂ ವಾಯುಪಡೆ ಅಕಾರಿಗಳು ದೌಡಾಯಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು