12:38 PM Saturday4 - December 2021
ಬ್ರೇಕಿಂಗ್ ನ್ಯೂಸ್
ಚಳ್ಳಕೆರೆ ಗಂಜಿಗುಂಟೆ ಲಂಬಾಣಿ ತಾಂಡದಲ್ಲಿ ಹೆಚ್ಚುತ್ತಿದೆ ಬೀದಿ ನಾಯಿಗಳ ಕಾಟ: ಶ್ವಾನ ಕಡಿತಕ್ಕೆ ಯುವಕ ಬಲಿ ಚಿಕ್ಕಮಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಬೆಂಗಾವಲು ವಾಹನ ಅಪಘಾತ: ಓರ್ವ ಸಿಬ್ಬಂದಿಗೆ ತೀವ್ರ… ಮಲೆನಾಡಲ್ಲಿ ಮತ್ತೆ ಮಳೆ ಅಬ್ಬರ: ಬೆಳೆ ಕಳೆದುಕೊಳ್ಳುವ ಆತಂಕದಲ್ಲಿ ಕೃಷಿಕರು  ರಂಗಾಪುರ: ಇದು ಅಂಗನವಾಡಿ ಕಟ್ಟಡ ನಾ? ಅಥವಾ ಸಾರ್ವಜನಿಕ ಶೌಚಾಲಯ ನಾ? ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನ ಹಸ್ತಾಂತರ ಹೆತ್ತವರು ಮದುವೆ ಮಾಡಿಸದ ಬೇಸರ: ನೇಣು ಬಿಗಿದು ಪ್ರೇಮಿಗಳು ಆತ್ಮಹತ್ಯೆ  ಸರ್ವಧರ್ಮಿಯರು ಸಂದರ್ಶಿಸುವ ಪುಣ್ಯ ಕ್ಷೇತ್ರ ಧರ್ಮಸ್ಥಳ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್  ಚಳ್ಳಕೆರೆ ತಾಲೂಕಿನಲ್ಲಿ ಅಕ್ರಮ ಮದ್ಯದ ಹೊಳೆ: ಇಲ್ಲಿನ ಅಂಗಡಿ, ಹೋಟೆಲ್ ಗಳು ಕೂಡ… ಚಳ್ಳಕೆರೆ: ಶೇಂಗಾ ಸಾಗಾಟ ಮಾಡುತ್ತಿದ್ದ ಟಾಟಾ ಎಸಿಇ ಟೈರ್ ಸಿಡಿದು ಸ್ಥಳದಲ್ಲೇ ಚಾಲಕ ಸಾವು;… ಬಿಜೆಪಿಯಿಂದ ಮತ್ತೆ ಮುಖ್ಯಮಂತ್ರಿ ಬದಲಾವಣೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಧೃವನಾರಾಯಣ್

ಇತ್ತೀಚಿನ ಸುದ್ದಿ

ಪಂಚ ಭಾಷಾ ನಟಿ ಜೂಲಿ ಲಕ್ಷ್ಮೀ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ: ವಿಶೇಷ ಪೂಜೆ ಸಲ್ಲಿಕೆ

21/10/2021, 08:42

ಕುಂದಾಪುರ(reporterkarnataka.com): ಕನ್ನಡ ಚಿತ್ರರಂಗದ ಹಿರಿಯ ನಟಿ ಲಕ್ಷ್ಮಿ ಕೊಲ್ಲೂರು ಶ್ರೀ‌ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ‌ ನೀಡಿದರು. ಬುಧವಾರದಂದು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ಕೊಟ್ಟ ಅವರು ಶ್ರೀ ದೇವಿಯ ದರ್ಶನ ಪಡೆದರು.

ನಂತರ ಮಾತನಾಡಿದ ಅವರು ಈ ದೇವಾಲಯಕ್ಕೆ ಬಂದಾಗ ನನ್ನ ತವರು ಮನೆಗೆ ಬಂದ ಹಾಗೆ ಆಗುತ್ತದೆ. ನನ್ನ ತಾಯಿಯನ್ನು ನೋಡಿದೆ. ಈ ದೇವಸ್ಥಾನದ ಶುದ್ದತೆ ನಿಜಕ್ಕೂ ಆಶ್ಚರ್ಯವಾಗುತ್ತದೆ. ಬೇರೆ ಬೇರೆ ಕಡೆಗಳಿಂದ ಬರುವ ಭಕ್ತರಿಗೆ ಕಿಂಚಿತ್ತೂ ಸಮಸ್ಯೆಯಾಗದಂತೆ ವ್ಯವಸ್ಥೆ ಮಾಡಿರುವುದು ಬಹಳ ಸಂತಸವಾಗಿದೆ ಎಂದು ಹೇಳಿದರು.

ದಕ್ಷಿಣ ಭಾರತ ಚಿತ್ರರಂಗದ ಖ್ಯಾತ ಕಲಾವಿದೆಯರಲ್ಲೊಬ್ಬರಾದ ಲಕ್ಷ್ಮಿ ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಚಿತ್ರರಂಗದ ಅನೇಕ ಚಲನಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಈ ಕಾರಣದಿಂದಾಗಿ ಪಂಚಭಾಷಾ ತಾರೆ ಎಂದೂ ಕರೆಯಿಸಿಕೊಳ್ಳುತ್ತಾರೆ

ಇತ್ತೀಚಿನ ಸುದ್ದಿ

ಜಾಹೀರಾತು