10:20 AM Saturday27 - November 2021
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಪುಂಡರ ಎರಡು ತಂಡಗಳ ನಡುವೆ ಮಾರಾಮಾರಿ; ರಸ್ತೆಯಲ್ಲಿ ಓಡಾಡಿ ಹೊಡೆದಾಟ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ  ಭೂಮಿ ಕಂಪನ: ಭಯಭೀತರಾದ ಜನ ಆರೋಗ್ಯ ಇಲಾಖೆಯಲ್ಲೊಬ್ಬ ಕಚ್ಚೆ ಹರುಕ ವೈದ್ಯ!!: ಗುತ್ತಿಗೆ ಸಿಬ್ಬಂದಿ ಯುವತಿಯರ ಜತೆಗಿನ ರಾಸಲೀಲೆ… ದೇವಸ್ಥಾನದೊಳಗೆ ಸೀದಾ ಪ್ರವೇಶಿಸಿದ ಆ ಭಿಕ್ಷುಕಿ ಅಜ್ಜಿ ಸ್ವಾಮೀಜಿ ಕೈಗೆ ಕೊಟ್ಟಿದ್ದೇನು? ಆಂಜನೇಯ… ವೇದಾವತಿ ಡ್ಯಾಂ: ನದಿಯಲ್ಲಿ ಈಜದಂತೆ, ನೀರಿಗಿಳಿದು ಸೆಲ್ಫಿ ತೆಗೆಯದಂತೆ ಶಾಸಕ ರಘುಮೂರ್ತಿ ಮನವಿ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆಗೆ ಎದೆ ನೋವು: ಪುಣೆ ಆಸ್ಪತ್ರೆಗೆ ದಾಖಲು ವೇದಾವತಿ ಚೆಕ್ ಡ್ಯಾಂನಲ್ಲಿ ನೀರು ಪಾಲಾದ ಇಬ್ಬರ ಪೈಕಿ ಒಂದು ಶವ ಪತ್ತೆ:… ನಿರಂತರ ಮಳೆ: ಅಥಣಿಯಲ್ಲಿ ಸಾವಿರಾರು ಎಕರೆ ದ್ರಾಕ್ಷೆ ಬೆಳೆ ನಾಶ; ಆಕಾಶದತ್ತ ಮುಖ… ಅಮೃತ ಮಹೋತ್ಸವ: ನ.27ರಂದು ಮಂಗಳೂರು ರಾಮಕೃಷ್ಣ ಮಠಕ್ಕೆ ಗೌರವಾಭಿನಂದನೆ ಹಾಗೂ ಪೌರಸಮ್ಮಾನ 8ರ ಬಾಲಕಿಯ ಸಾಮೂಹಿಕ ಅತ್ಯಾಚಾರ, ಕೊಲೆ: 4 ಮಂದಿ ಬಂಧನ; ತುಟಿ ಬಿಚ್ಚದ…

ಇತ್ತೀಚಿನ ಸುದ್ದಿ

ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಸುಳ್ಳು ದೂರು ನೀಡಿದ್ದ ಪತ್ನಿ ಸೇರಿ 5 ಮಂದಿ ಅರೆಸ್ಟ್; ಯಾಕೆ ನಡೆಯಿತು ಈ ಹತ್ಯೆ?

22/10/2021, 19:04

ಕುಂದಾಪುರ(reporterkarnataka.com): ಇಲ್ಲಿನ ಶಂಕರನಾರಾಯಣ ಠಾಣೆ ವ್ಯಾಪ್ತಿಯ ಅಂಪಾರಿನಲ್ಲಿ ಮಂಗಳವಾರದಂದು ಬೆಳಕಿಗೆ ಬಂದಿದ್ದ ವಿವಾಹಿತ ವ್ಯಕ್ತಿಯೊಬ್ಬರ ಆತ್ಮಹತ್ಯೆ ಪ್ರಕಣ ಇದೀಗ ತಿರುವು ಪಡೆದುಕೊಂಡಿದ್ದು, ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅಂಪಾರು ಗ್ರಾಮದ ಮೂಡುಬಗೆಯ ವಿವೇಕ ನಗರದ ನಿವಾಸಿ ನಾಗರಾಜ (36) ಕೊಲೆಯಾದ ದುರ್ದೈವಿ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗರಾಜ್ ಅವರ ಪತ್ನಿ ಸೇರಿದಂತೆ ಐವರನ್ನು ಶಂಕರನಾರಾಯಣ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಗಳಾದ ಪತ್ನಿ ಮಮತಾ (34), ಆಕೆಯ ಪರಿಚಿತರಾಗಿರುವ ಕುಮಾರ್ ಹಾಗೂ ದಿನಕರ ಎಂಬುವರನ್ನು ಪೊಲೀಸರು ಬಂಧಿಸಿದ್ದು, ಪ್ರಕರಣದಲ್ಲಿ ಭಾಗಿಯಾಗಿದ್ದಾರೆನ್ನಲಾದ ಇಬ್ಬರು ಬಾಲಕರನ್ನು ರೀಮ್ಯಾಂಡ್ ಹೋಂಗೆ ಕಳುಹಿಸಲಾಗಿದೆ.

ಏನಿದು ಪ್ರಕರಣ?: ನಾಗರಾಜ್ ಸೋಮವಾರ ರಾತ್ರಿ ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪತ್ನಿ ಮಮತಾ ಪೊಲೀಸರಿಗೆ ದೂರು ನೀಡಿದ್ದರು. ನಾಗರಾಜ್ ವಿಪರೀತ ಕುಡಿತದ ಚಟ ಹೊಂದಿದ್ದರಿಂದಲೇ ಜಿಗುಪ್ಸೆಗೊಂಡು ಸಾವನ್ನಪ್ಪಿರುವುದಾಗಿಯೂ ದೂರಿನಲ್ಲಿ ವಿವರಿಸಲಾಗಿತ್ತು. ಮೊದಲು ಪೊಲೀಸರು ಪತ್ನಿಯ ಹೇಳಿಕೆಯಂತೆಯೇ ದೂರ ದಾಖಲಿಸಿಕೊಂಡಿದ್ದರು.

ಮೃತದೇಹದ ಮೇಲೆ ಗಾಯ: ನಾಗರಾಜ ಅವರ ಸಾವಿನ ಸುದ್ದಿ ತಿಳಿದು ಅವರ ಸಹೋದರಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸುಳಗೋಡು ಮಾಲ್ವೆ ಗ್ರಾಮದ ನಿವಾಸಿ ನಾಗರತ್ನ ಹಾಗೂ ಸಂಬಂಧಿಕರು ಶವಗಾರದಲ್ಲಿರುವ ಮೃತದೇಹವನ್ನು ಪರೀಕ್ಷಿಸಿದಾಗ ಮೃತದೇಹದ ಮೈ ಮೇಲೆ ಹಾಗೂ ಕುತ್ತಿಗೆ ಭಾಗಗಳಲ್ಲಿ ಗಾಯಗಳಾಗಿತ್ತು. ಅಲ್ಲದೇ ನಾಗರಾಜ್ ಕೆಲ ದಿನಗಳ ಹಿಂದೆ ಸಹೋದರಿಗೆ ಕರೆ ಮಾಡಿ ಪತ್ನಿ ಮತ್ತು ಕೆಲವರು ಸೇರಿ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಸಹೋದರಿ ಜೊತೆ ತಮ್ಮ‌ ನೋವುಗಳನ್ನು ತೋಡಿಕೊಂಡಿದ್ದರು. ಹೀಗಾಗಿ ಇದೊಂದು ವ್ಯವಸ್ಥಿತವಾದ ಕೊಲೆ ಎಂದು ಸಂಶಯ ವ್ಯಕ್ತಪಡಿಸಿದ ಸಹೋದರಿ ನಾಗರತ್ನ ಅವರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು. ಸಹೋದರಿ ನೀಡಿದ ದೂರಿನನ್ವಯ ಶಂಕರನಾರಾಯಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಆರೋಪಿಗಳನ್ನು ಕ್ಷಿಪ್ರಗತಿಯಲ್ಲಿ ಬಂಧಿಸಿದ್ದಾರೆ‌.

ಲವ್ ಮ್ಯಾರೇಜ್ ಕೊನೆಗೂ ಡ್ಯಾಮೇಜ್!
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ನಾಗರಾಜ ಹಾಗೂ ಮಮತಾ ಅವರು ಕಳೆದ ಹತ್ತು ವರ್ಷಗಳ ಹಿಂದೆ ಪ್ರೀತಿಸಿ ವಿವಾಹವಾಗಿದ್ದು, ತಮ್ಮ ಮೂವರು ಮಕ್ಕಳೊಂದಿಗೆ ಜೀವನ ಸಾಗಿಸುತ್ತಿದ್ದರು. ಬರಬರುತ್ತಾ ನಾಗರಾಜ ವಿಪರೀತ ಕುಡಿದು, ಮನೆಯಲ್ಲಿ ದಿನಾಲೂ ಜಗಳ ಮಾಡುತ್ತಿದ್ದರು ಎನ್ನಲಾಗಿದೆ. ಇದೇ ಕಾರಣಕ್ಕೆ ಇವರಿಬ್ಬರ ಸಂಸಾರದಲ್ಲಿ ಬಿರುಕು ಮೂಡಿತ್ತು ಎನ್ನಲಾಗಿದೆ. ನಾಗರಾಜ ಅವರ ಕೊಲೆಗೆ ಅಕ್ರಮ ಸಂಬಂಧ ಕಾರಣ ಎನ್ನುವ ಮಾತುಗಳು ಸ್ಥಳೀಯವಾಗಿ ಕೇಳಿ ಬರುತ್ತಿವೆಯಾದರೂ ಈ ಬಗ್ಗೆ ಸ್ಪಷ್ಟ ಮಾಹಿತಿ ಪೊಲೀಸರ ತನಿಖೆಯಿಂದಷ್ಟೇ ತಿಳಿದುಬರಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು