10:45 AM Saturday27 - November 2021
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಪುಂಡರ ಎರಡು ತಂಡಗಳ ನಡುವೆ ಮಾರಾಮಾರಿ; ರಸ್ತೆಯಲ್ಲಿ ಓಡಾಡಿ ಹೊಡೆದಾಟ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ  ಭೂಮಿ ಕಂಪನ: ಭಯಭೀತರಾದ ಜನ ಆರೋಗ್ಯ ಇಲಾಖೆಯಲ್ಲೊಬ್ಬ ಕಚ್ಚೆ ಹರುಕ ವೈದ್ಯ!!: ಗುತ್ತಿಗೆ ಸಿಬ್ಬಂದಿ ಯುವತಿಯರ ಜತೆಗಿನ ರಾಸಲೀಲೆ… ದೇವಸ್ಥಾನದೊಳಗೆ ಸೀದಾ ಪ್ರವೇಶಿಸಿದ ಆ ಭಿಕ್ಷುಕಿ ಅಜ್ಜಿ ಸ್ವಾಮೀಜಿ ಕೈಗೆ ಕೊಟ್ಟಿದ್ದೇನು? ಆಂಜನೇಯ… ವೇದಾವತಿ ಡ್ಯಾಂ: ನದಿಯಲ್ಲಿ ಈಜದಂತೆ, ನೀರಿಗಿಳಿದು ಸೆಲ್ಫಿ ತೆಗೆಯದಂತೆ ಶಾಸಕ ರಘುಮೂರ್ತಿ ಮನವಿ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆಗೆ ಎದೆ ನೋವು: ಪುಣೆ ಆಸ್ಪತ್ರೆಗೆ ದಾಖಲು ವೇದಾವತಿ ಚೆಕ್ ಡ್ಯಾಂನಲ್ಲಿ ನೀರು ಪಾಲಾದ ಇಬ್ಬರ ಪೈಕಿ ಒಂದು ಶವ ಪತ್ತೆ:… ನಿರಂತರ ಮಳೆ: ಅಥಣಿಯಲ್ಲಿ ಸಾವಿರಾರು ಎಕರೆ ದ್ರಾಕ್ಷೆ ಬೆಳೆ ನಾಶ; ಆಕಾಶದತ್ತ ಮುಖ… ಅಮೃತ ಮಹೋತ್ಸವ: ನ.27ರಂದು ಮಂಗಳೂರು ರಾಮಕೃಷ್ಣ ಮಠಕ್ಕೆ ಗೌರವಾಭಿನಂದನೆ ಹಾಗೂ ಪೌರಸಮ್ಮಾನ 8ರ ಬಾಲಕಿಯ ಸಾಮೂಹಿಕ ಅತ್ಯಾಚಾರ, ಕೊಲೆ: 4 ಮಂದಿ ಬಂಧನ; ತುಟಿ ಬಿಚ್ಚದ…

ಇತ್ತೀಚಿನ ಸುದ್ದಿ

ಬೆಂಗಳೂರಿನ ಇಂದಿರಾನಗರ 100 ಅಡಿ ರಸ್ತೆ ಅವ್ಯವಸ್ಥೆ: ‘ಕೂ’ ನಲ್ಲಿ ಜನರ ಭಾರೀ ಆಕ್ರೋಶ

22/10/2021, 20:22

ಬೆಂಗಳೂರು(reporterkarnataka.com): ರಾಜ್ಯ ರಾಜಧಾನಿ ಬೆಂಗಳೂರಿನ ಐಷಾರಾಮಿ ಪ್ರದೇಶಗಳಲ್ಲಿ ಒಂದು ಎಂದೇ ಕರೆಸಿಕೊಳ್ಳುವ ಇಂದಿರಾನಗರದ 100 ಅಡಿ ರಸ್ತೆ ಗುಂಡಿಗಳಿಂದನೇ ತುಂಬಿ ಹೋಗಿದ್ದು, ಅವ್ಯವಸ್ಥೆಯ ಆಗರವಾಗಿದೆ.  

ಇಂದಿರಾ ನಗರ ನೂರು (100) ಅಡಿ ರಸ್ತೆ, ಬೆಂಗಳೂರಿನ ಹಳೆ ವಿಮಾನ ನಿಲ್ದಾಣ ರಸ್ತೆ ಜೊತೆ ಹಳೆ ಮದ್ರಾಸ್ ರಸ್ತೆ ಸಂಪರ್ಕಿಸುತ್ತದೆ. ಒಂದು ಕೊನೆಯಲ್ಲಿ ಮಧ್ಯಂತರ ವರ್ತುಲ ರಸ್ತೆ ಫ್ಲೈಓವರ್ ಜಂಕ್ಷನ್ (ದೊಮ್ಮಲೂರು ಜಂ‍ಕ್ಷನ್), ಮತ್ತೊಂದು ಕೊನೆಯಲ್ಲಿ ಹಳೆ ವಿಮಾನ ನಿಲ್ದಾಣ ರಸ್ತೆ ಇದೆ. ಕಳೆದ ಕೆಲವು ವರ್ಷಗಳಿಂದ 100 ಅಡಿ ರಸ್ತೆ ಬೆಂಗಳೂರು ವಾಣಿಜ್ಯಿಕವಾಗಿ ಪ್ರಮುಖ ಉನ್ನತ ರಸ್ತೆಗಳ ಆಗಿ ಮಾರ್ಪಟ್ಟಿದೆ.

ರಸ್ತೆಯ ಕೆಟ್ಟ ಪರಿಸ್ಥಿತಿ ಬಗ್ಗೆ ಸಾರ್ವಜನಿಕರು ಕೂ ಮಾಡಿದ್ದೂ, ದಿನ ಬೆಳಿಗ್ಗೆ ಈ ರಸ್ತೆಯಲ್ಲಿ ಕಚೇರಿಗೆ ಹೋಗುವುದೆಂದರೆ ಯಮ ಯಾತನೆ ಎಂದು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. 


‘ಐಟಿ ಕಂಪೆನಿಗಳೇ ಸಾಲು ಸಾಲು ಚಕ್ಕಳ ಮಕ್ಕಳ ಹಾಕಿ ಕೂತಂತಿರುವ ಇಂದಿರಾನಗರದ ರೋಡು ಮೈಕೈ ತೂತು ಮಾಡಿಕೊಂಡು ಸೊರಗಿ ಸತ್ತು ಹೋಗಿದೆ.. ಅದರ ಅವಸ್ಥೆ ನೋಡಿದರೆ ಆ ರೋಡಿಗೆ ಜನ್ಮವಿತ್ತವರ ಮುಖ ನೋಡ್ಬೇಕಲ್ಲ ಅನ್ಸತ್ತೆ, ಅದನ್ನ ಏನಾದ್ರು ಮಾಡ್ರಿ ರೀ ಶ್ರೀಮಾನ್ ಬೆಂಗಳೂರನವ್ರೆ! ಪಾಪ ಕೆಂಪೇಗೌಡ್ರು!’ ಎಂದು ಸುನಿಲ್ ಎನ್ನುವವರು ಕೂ ಮಾಡಿದ್ದಾರೆ. 

* ‘ಕಷ್ಟಕಷ್ಟ. .ಬೆಂಗಳೂರಿನ ಇಂದಿರಾನಗರದ ೧೦೦ ಅಡಿ ವರ್ತುಲ ರಸ್ತೆಯಲ್ಲಿ ಪ್ರಯಾಣ ದೇವರಿಗೂ ಬೇಡ.  ಬಿಬಿಎಂಪಿ ರಸ್ತೆ ರಿಪೇರಿ ಮಾಡೋದಾದ್ರೂ ಯಾವಾಗ?’ ಎಂದು ಆಕ್ರೋಶ ವ್ಯಕ್ತಪಡಿಸ್ದದರೆ ಗಣೇಶ್ 

* ‘ಇಂದಿರಾ ನಗರದ 100 ಅಡಿ ವರ್ತುಲ ರಸ್ತೆಯಲ್ಲಿ ಸಾಗುವುದು ಜೀವ ಪಣಕ್ಕಿಟ್ಟು ನಡೆಸುವ ಯಾವುದೇ ಸಾಹಸಮಯ ಪ್ರದರ್ಶನ ನೀಡುವ ಸ್ಟಂಟ್ ಗಳಿಗೆ ಹೋಲಿಸಿದರೆ ಅದಕ್ಕಿಂತ ಕಡಿಮೆ ಅನುಭವನ್ನಂತೂ ನೀಡಲಾರದು. ನೀವೂ ಈ ಮಾರ್ಗದಲ್ಲಿ ಸಂಚರಿಸಿದ್ದರೆ ನಿಮ್ಮ ಅನಿಸಿಕೆ ಏನು?’ ಎಂದು ನರೇಶ್ ಕೂ ಮಾಡಿದ್ದಾರೆ.  

ಇತ್ತೀಚಿನ ಸುದ್ದಿ

ಜಾಹೀರಾತು