9:07 PM Thursday2 - December 2021
ಬ್ರೇಕಿಂಗ್ ನ್ಯೂಸ್
ಸರ್ವಧರ್ಮಿಯರು ಸಂದರ್ಶಿಸುವ ಪುಣ್ಯ ಕ್ಷೇತ್ರ ಧರ್ಮಸ್ಥಳ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್  ಚಳ್ಳಕೆರೆ ತಾಲೂಕಿನಲ್ಲಿ ಅಕ್ರಮ ಮದ್ಯದ ಹೊಳೆ: ಇಲ್ಲಿನ ಅಂಗಡಿ, ಹೋಟೆಲ್ ಗಳು ಕೂಡ… ಚಳ್ಳಕೆರೆ: ಶೇಂಗಾ ಸಾಗಾಟ ಮಾಡುತ್ತಿದ್ದ ಟಾಟಾ ಎಸಿಇ ಟೈರ್ ಸಿಡಿದು ಸ್ಥಳದಲ್ಲೇ ಚಾಲಕ ಸಾವು;… ಬಿಜೆಪಿಯಿಂದ ಮತ್ತೆ ಮುಖ್ಯಮಂತ್ರಿ ಬದಲಾವಣೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಧೃವನಾರಾಯಣ್ ಸಾಲು ಸಾಲಾಗಿ ಆಸ್ಪತ್ರೆ ಸೇರುತ್ತಿರುವ ಪಚ್ಚನಾಡಿ ತ್ಯಾಜ್ಯ ದುರಂತ ಸಂತ್ರಸ್ತರು: ಜಿಲ್ಲಾಧಿಕಾರಿ ಇತ್ತ… ನಾದಬ್ರಹ್ಮ ಹಂಸಲೇಖಗೆ ಹೈಕೋರ್ಟ್ ಬಿಗ್‌ ರಿಲೀಫ್ : ಪ್ರಕರಣ ದಾಖಲಾತಿಗೆ ತಡೆಯಾಜ್ಞೆ; ದೂರುದಾತರಿಗೆ… ಚಿತ್ರದುರ್ಗ: ಕಾರು- ಬೈಕ್ ಮುಖಾಮುಖಿ ಡಿಕ್ಕಿ; ಓರ್ವ ಸ್ಥಳದಲ್ಲೇ ಸಾವು; ಇನ್ನೊರ್ವ ಗಂಭೀರ… ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?: ಚಿತ್ರದುರ್ಗದಲ್ಲಿ ಸಿದ್ದು… ಕಡಲನಗರಿಯಲ್ಲಿ ಮತ್ತೆ ತಲೆ ಎತ್ತಿದ ಗ್ಯಾಂಗ್ ವಾರ್; ಮಾರಕಾಸ್ತ್ರದಿಂದ ದಾಳಿ; ಓರ್ವ ಗಂಭೀರ ಕಾರ್ಕಳ : ಕೆಲಸಕ್ಕೆಂದು ಹೋದ ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಕುಂದಾಪುರ: 50 ಸಾವಿರ ರೂ. ಮೌಲ್ಯದ ಗಾಂಜಾ, ಬ್ರೌನ್ ಶುಗರ್ ವಶ; ಕಾರವಾರದ ಮೂಲದ ವ್ಯಕ್ತಿ ಬಂಧನ

22/10/2021, 18:58

ಕುಂದಾಪುರ(reporterkarnataka.com): ಗುರುವಾರ ತಡರಾತ್ರಿ ನಗರದ ಶಾಸ್ತ್ರಿ ಪಾರ್ಕ್ ಬಳಿ ಗಾಂಜಾ ಸಾಗಾಟ ನಡೆಸಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಪೋಲಿಸರು ಬಂಧಿಸಿದ್ದಾರೆ. 

ಕಾರವಾರ ಮೂಲದ ಮಹಮ್ಮದ್ ಜಾಫರ್ ಗುಡುಮಿಯಾ(28) ಬಂಧಿತ ಆರೋಪಿ.

ಕುಂದಾಪುರ ಡಿವೈಎಎಸ್ಪಿ ರಾತ್ರಿ ರೈಂಡ್ಸ್ ಕರ್ತವ್ಯದಲ್ಲಿದ್ದಾಗ ಶಾಸ್ತ್ರಿ ಪಾರ್ಕ್ ಬಳಿ ಅನುಮಾನಸ್ಪದವಾಗಿ ಕಂಡುಬಂದ ವ್ಯಕ್ತಿಯನ್ನು ವಿಚಾರಿಸಿದಾಗ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿರುವುದು ಬೆಳಕಿಗೆ ಬಂದಿದೆ.

ಬಂಧಿತನಿಂದ 40 ಸಾವಿರ ರೂ ಮೌಲ್ಯದ 1 ಕೆಜಿ 810 ಗ್ರಾಂ ಗಾಂಜಾ ಹಾಗೂ 10 ಸಾವಿರ ರೂ ಮೌಲ್ಯದ 1 ಗ್ರಾಂ ಬ್ರೌನ್ ಶುಗರ್, 1500 ರೂ ನಗದು ವಶಪಡಿಸಿಕೊಳ್ಳಲಾಗಿದೆ. 


ಉಡುಪಿ ಜಿಲ್ಲಾ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಹೆಚ್ಚುವರಿ ಎಸ್ಪಿ ಕುಮಾರ್ ಚಂದ್ರ ಅವರ ಮಾರ್ಗದರ್ಶನದಲ್ಲಿ, ಕುಂದಾಪುರ ಅಪರಾಧ ವಿಭಾಗದ ರಾಘವೇಂದ್ರ ಉಪ್ಪುಂದ, ರಾಮು ಹೆಗ್ಡೆ, ವಿಜಯ್, ರಮೇಶ್, ಕುಂದಾಪುರ ಠಾಣೆಯ ರಾಘವೇಂದ್ರ ಮೊಗೇರ, ವಿಜೇತ್, ಜೀಪು ಚಾಲಕ ರಾಜು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು