3:47 PM Thursday2 - December 2021
ಬ್ರೇಕಿಂಗ್ ನ್ಯೂಸ್
ಚಳ್ಳಕೆರೆ ತಾಲೂಕಿನಲ್ಲಿ ಅಕ್ರಮ ಮದ್ಯದ ಹೊಳೆ: ಇಲ್ಲಿನ ಅಂಗಡಿ, ಹೋಟೆಲ್ ಗಳು ಕೂಡ… ಚಳ್ಳಕೆರೆ: ಶೇಂಗಾ ಸಾಗಾಟ ಮಾಡುತ್ತಿದ್ದ ಟಾಟಾ ಎಸಿಇ ಟೈರ್ ಸಿಡಿದು ಸ್ಥಳದಲ್ಲೇ ಚಾಲಕ ಸಾವು;… ಬಿಜೆಪಿಯಿಂದ ಮತ್ತೆ ಮುಖ್ಯಮಂತ್ರಿ ಬದಲಾವಣೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಧೃವನಾರಾಯಣ್ ಸಾಲು ಸಾಲಾಗಿ ಆಸ್ಪತ್ರೆ ಸೇರುತ್ತಿರುವ ಪಚ್ಚನಾಡಿ ತ್ಯಾಜ್ಯ ದುರಂತ ಸಂತ್ರಸ್ತರು: ಜಿಲ್ಲಾಧಿಕಾರಿ ಇತ್ತ… ನಾದಬ್ರಹ್ಮ ಹಂಸಲೇಖಗೆ ಹೈಕೋರ್ಟ್ ಬಿಗ್‌ ರಿಲೀಫ್ : ಪ್ರಕರಣ ದಾಖಲಾತಿಗೆ ತಡೆಯಾಜ್ಞೆ; ದೂರುದಾತರಿಗೆ… ಚಿತ್ರದುರ್ಗ: ಕಾರು- ಬೈಕ್ ಮುಖಾಮುಖಿ ಡಿಕ್ಕಿ; ಓರ್ವ ಸ್ಥಳದಲ್ಲೇ ಸಾವು; ಇನ್ನೊರ್ವ ಗಂಭೀರ… ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?: ಚಿತ್ರದುರ್ಗದಲ್ಲಿ ಸಿದ್ದು… ಕಡಲನಗರಿಯಲ್ಲಿ ಮತ್ತೆ ತಲೆ ಎತ್ತಿದ ಗ್ಯಾಂಗ್ ವಾರ್; ಮಾರಕಾಸ್ತ್ರದಿಂದ ದಾಳಿ; ಓರ್ವ ಗಂಭೀರ ಕಾರ್ಕಳ : ಕೆಲಸಕ್ಕೆಂದು ಹೋದ ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು 9 ಮಂದಿ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ: ಆರೋಪಿ ಡಾ. ರತ್ನಾಕರ್ ಗೆ…

ಇತ್ತೀಚಿನ ಸುದ್ದಿ

ಮಸ್ಕಿ; ವೀರರಾಣಿ ಕಿತ್ತೂರು ಚನ್ನಮ್ಮ ಪಿಯು ಕಾಲೇಜಿನ ಕಟ್ಟಡ ಉದ್ಘಾಟನೆ

27/10/2021, 17:52

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ 
ಅಂತರಗಂಗೆ ರಾಯಚೂರು
info.reporterkarnataka@gmail.com

ಇಂದಿನ ಆಧುನಿಕ ತಂತ್ರಜ್ಞಾನ ಯುಗದಲ್ಲಿ ಉತ್ಕೃಷ್ಟ ಶಿಕ್ಷಣ ಪಡೆದು ದೇಶಕ್ಕೆ ಆಸ್ತಿಯಾಗಬೇಕು ಎಂದು ಕಾಲೇಜಿನ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಿದ ಸಂಸ್ಥೆಯ ಗೌರವಾಧ್ಯಕ್ಷ

ಡಾ.ಶಿವಶರಣಪ್ಪ ಇತ್ಲಿ ಕರೆ ನೀಡಿದರು.

ಸ್ಥಳೀಯ ವೀರರಾಣಿ ಕಿತ್ತೂರು ಚನ್ನಮ್ಮ ಪಿಯು ಕಾಲೇಜಿನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಶೈಕ್ಷಣಿಕ ಕ್ಷೇತ್ರದಲ್ಲಿ ಪರಿಶ್ರಮ ಇರುವಲ್ಲಿ ಸರಸ್ವತಿ ನೆಲೆಸುತ್ತಾಳೆ. ಶಿಕ್ಷಣ ನೀಡುವ ಹಾಗೂ ಪಡೆಯುವ ಉತ್ಸಾಹದ ಜತೆ ಅನುಭವವಿರಬೇಕು. ಜ್ಞಾನಕ್ಕೆ ಪೇಟೆಂಟ್ ಎನ್ನುವುದಿಲ್ಲ. ಶಿಕ್ಷಣ ನೀಡಲು ಸಜ್ಜಾಗಿ ನಿಂತಿರುವ ಕಟ್ಟದ ಹೂರಣ ಅದ್ಭುತವಾಗಿದೆ. ಇಲ್ಲಿನ ಪರಿಸರ ಎಲ್ಲ ಹಂತದಲ್ಲಿ ಪರಿಶುದ್ಧವಾಗಿದೆ. ಹೀಗಾಗಿ ಶಿಕ್ಷಣ ಸಂಸ್ಥೆಗೆ ಸರಸ್ವತಿ ಒಲಿಯಲಿದ್ದಾಳೆ ಎಂದು ಅವರು ಹೇಳಿದರು.

ವರ್ತಕರಾದ ಪಂಪಣ್ಣ ಗುಂಡಳ್ಳಿ ಮಾತನಾಡಿ, ಕಾಲೇಜಿನ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಮತ್ತು ಜೀವನಕ್ಕೆ ಬೇಕಾದ ನೀತಿಯನ್ನು ಉಪನ್ಯಾಸಕರು ಬೋಧಿಸಬೇಕು. ಈ ವಿದ್ಯಾ ಸಂಸ್ಥೆಯಲ್ಲಿ ಅಧ್ಯಯನ ಮಾಡಿದ ವಿದ್ಯಾರ್ಥಿಗಳು ಉತ್ತಮ ಪ್ರಜೆಗಳಾಗಿ ಕಾಲೇಜಿಗೆ ಕೀರ್ತಿ ತರುವಂತಹವರು ನಿವಾಗಬೇಕು ಎಂದು ನುಡಿದರು.                           ನೂತನ ಕಾಲೇಜು ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಮುಖಂಡರಾದ ಮಹಾದೇವಪ್ಪ ಗೌಡ ಪೋಲಿಸ್ ಪಾಟೀಲ್, ಯಲ್ಲೋಜಿರಾವ್ ಕೊರೆಕರ್, ಮಲ್ಲಪ್ಪ ಕುಡತಿನಿ,ಸಂಸ್ಥೆಯ ಅಧ್ಯಕ್ಷರಾಗದ ಸುಭಾಷ್ ಕೊರೆಕರ್,ಖಜಾಂಚಿ ಪಿ ರಾಮು, ಕಾಲೇಜಿನ ಪ್ರಾಚಾರ್ಯ ಲಕ್ಷ್ಮಣ ಕರ್ಲಿ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಇನ್ನಿತರ ಉಪಸ್ಥಿತರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು