12:00 PM Tuesday30 - November 2021
ಬ್ರೇಕಿಂಗ್ ನ್ಯೂಸ್
ಕಾರ್ಕಳ : ಕೆಲಸಕ್ಕೆಂದು ಹೋದ ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು 9 ಮಂದಿ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ: ಆರೋಪಿ ಡಾ. ರತ್ನಾಕರ್ ಗೆ… ದಂಪತಿ ಜತೆ ಸುರತ್ಕಲ್ ಟೋಲ್ ಸಿಬ್ಬಂದಿ ಅನುಚಿತ ದುರ್ವರ್ತನೆ: ಪೋಲೀಸ್ ಕಮಿಷನರ್ ಶಶಿಕುಮಾರ್… ಕಾಫಿನಾಡಲ್ಲಿ ಪ್ರಾಮಾಣಿಕ ಕಳ್ಳರು!: 4 ಬಾರ್ ಗಳಿಗೆ ಹೊಕ್ಕ ಚೋರರು: ಹಣ ಸಿಕ್ಕಿಲ್ಲ, ಆದ್ರೆ… ಕಡೂರು: ನೀರಿನ ಟ್ಯಾಂಕ್ ಕ್ಲೀನ್ ಮಾಡುವಾಗ ಉಸಿರುಗಟ್ಟಿ ಇಬ್ಬರು ಸಾವು; ಒಬ್ಬ ಗಂಭೀರ ಬೆಂಗಳೂರು: ನವಜಾತ ಹೆಣ್ಣು ಶಿಶುವನ್ನು ದೇವರ ಗುಡಿ ಮುಂದಿಟ್ಟು ಪರಾರಿ ಮೂಡಿಗೆರೆ: ಒಣ ಗಾಂಜಾ ಮಾರಾಟ; ಮಾಲು ಸಹಿತ ಆರೋಪಿ ಬಂಧನ ಕಲಬುರಗಿ ಪಾಲಿಕೆ ಕಮಿಷನರ್ ವಿರುದ್ಧ ಲವ್, ಸೆಕ್ಸ್, ದೋಖಾ ಆರೋಪ: ಕಮಿಷನರ್ ಈ… ಸೋವೇನ ಹಳ್ಳಿ, ಹಗರಿಬೊಮ್ಮನ ಹಳ್ಳಿಗೆ ಸಮರ್ಪಕ ಬಸ್ ವ್ಯವಸ್ಥೆ: ಗ್ರಾಮಸ್ಥರ ಹಕ್ಕೊತ್ತಾಯ 9 ಮಂದಿ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ: ಡಾ. ರತ್ನಾಕರ್ ಬಂಧನ; 2…

ಇತ್ತೀಚಿನ ಸುದ್ದಿ

ಉಡುಪಿ: ಇ-ಸ್ಯಾಂಡ್ ಆಪ್ ನಲ್ಲಿ ಮರಳು ಲಭ್ಯ; ಸ್ವರ್ಣಾ, ಸೀತಾ ನದಿ ಪಾತ್ರಗಳಲ್ಲಿ ಮರಳು ದಿಬ್ಬ ತೆರವು

27/10/2021, 08:42

ಉಡುಪಿ(reporterkarnataka.com): ಉಡುಪಿ ಜಿಲ್ಲೆಯ ಬ್ರಹ್ಮಾವರ ಮತ್ತು ಉಡುಪಿ ತಾಲ್ಲೂಕುಗಳ ವ್ಯಾಪ್ತಿಯಲ್ಲಿನ ಸ್ವರ್ಣಾ ಮತ್ತು ಸೀತಾ ನದಿ ಪಾತ್ರಗಳಲ್ಲಿ ಮರಳು ದಿಬ್ಬ ತೆರವುಗೊಳಿಸುವ ಕಾರ್ಯವು ಪ್ರಗತಿಯಲ್ಲಿದ್ದು, ಮರಳನ್ನು ಸಾರ್ವಜನಿಕರಿಗೆ, ಅಭಿವೃದ್ಧಿ ಕಾಮಗಾರಿಗಳಿಗೆ UDUPI E-SAND APP ನ ಮೂಲಕ ಪೂರೈಸಲು ತೀರ್ಮಾನಿಸಲಾಗಿರುತ್ತದೆ. 

ಅದರಂತೆ  ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿನ ಸಾರ್ವಜನಿಕರಿಗೆ/ ಅಭಿವೃದ್ಧಿ ಕಾಮಗಾರಿಗಳಿಗೆ ಮರಳನ್ನು ವಿತರಿಸುವ ಕಾರ್ಯ ಪ್ರಾರಂಭಗೊಂಡಿದ್ದು, ಮರಳು ಅವಶ್ಯಕತೆ ಇರುವವರು UDUPI E-SAND APP ಮುಖಾಂತರ ಪಡೆಯಬಹುದಾಗಿದ್ದು,  ಯಾವುದೇ ಕಾರಣಕ್ಕೂ ಹೊರ ಜಿಲ್ಲೆಗೆ ಮರಳು ಪೂರೈಸಲು ಅವಕಾಶವಿರುವುದಿಲ್ಲ. 

ಹೆಚ್ಚಿನ ಮಾಹಿತಿಗಾಗಿ ಹಿರಿಯ ಭೂವಿಜ್ಞಾನಿಯವರ ಕಛೇರಿ, ಗಣಿ ಮತ್ತು ಭೂವಿಜ್ಞಾನ ಇಲಾಖೆ, ಉಡುಪಿ ದೂರವಾಣಿ ಸಂಖ್ಯೆ: 0820-2572333,: 6366745888, 6364024555 Sand App Contact No: 6366745888, 6364024555 (App related queries) 6366871888 (Accounts related queries) ಸಂಪರ್ಕಿಸಬಹುದಾಗಿದೆ ಎಂದು ಹಿರಿಯ ಭೂವಿಜ್ಞಾನಿ/ ಅನುಷ್ಠಾನಾಧಿಕಾರಿ, ಜಿಲ್ಲಾ 07 ಸದಸ್ಯರ ಸಮಿತಿ ಉಡುಪಿ ಜಿಲ್ಲೆ ಅವರ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು