10:39 AM Saturday27 - November 2021
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಪುಂಡರ ಎರಡು ತಂಡಗಳ ನಡುವೆ ಮಾರಾಮಾರಿ; ರಸ್ತೆಯಲ್ಲಿ ಓಡಾಡಿ ಹೊಡೆದಾಟ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ  ಭೂಮಿ ಕಂಪನ: ಭಯಭೀತರಾದ ಜನ ಆರೋಗ್ಯ ಇಲಾಖೆಯಲ್ಲೊಬ್ಬ ಕಚ್ಚೆ ಹರುಕ ವೈದ್ಯ!!: ಗುತ್ತಿಗೆ ಸಿಬ್ಬಂದಿ ಯುವತಿಯರ ಜತೆಗಿನ ರಾಸಲೀಲೆ… ದೇವಸ್ಥಾನದೊಳಗೆ ಸೀದಾ ಪ್ರವೇಶಿಸಿದ ಆ ಭಿಕ್ಷುಕಿ ಅಜ್ಜಿ ಸ್ವಾಮೀಜಿ ಕೈಗೆ ಕೊಟ್ಟಿದ್ದೇನು? ಆಂಜನೇಯ… ವೇದಾವತಿ ಡ್ಯಾಂ: ನದಿಯಲ್ಲಿ ಈಜದಂತೆ, ನೀರಿಗಿಳಿದು ಸೆಲ್ಫಿ ತೆಗೆಯದಂತೆ ಶಾಸಕ ರಘುಮೂರ್ತಿ ಮನವಿ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆಗೆ ಎದೆ ನೋವು: ಪುಣೆ ಆಸ್ಪತ್ರೆಗೆ ದಾಖಲು ವೇದಾವತಿ ಚೆಕ್ ಡ್ಯಾಂನಲ್ಲಿ ನೀರು ಪಾಲಾದ ಇಬ್ಬರ ಪೈಕಿ ಒಂದು ಶವ ಪತ್ತೆ:… ನಿರಂತರ ಮಳೆ: ಅಥಣಿಯಲ್ಲಿ ಸಾವಿರಾರು ಎಕರೆ ದ್ರಾಕ್ಷೆ ಬೆಳೆ ನಾಶ; ಆಕಾಶದತ್ತ ಮುಖ… ಅಮೃತ ಮಹೋತ್ಸವ: ನ.27ರಂದು ಮಂಗಳೂರು ರಾಮಕೃಷ್ಣ ಮಠಕ್ಕೆ ಗೌರವಾಭಿನಂದನೆ ಹಾಗೂ ಪೌರಸಮ್ಮಾನ 8ರ ಬಾಲಕಿಯ ಸಾಮೂಹಿಕ ಅತ್ಯಾಚಾರ, ಕೊಲೆ: 4 ಮಂದಿ ಬಂಧನ; ತುಟಿ ಬಿಚ್ಚದ…

ಇತ್ತೀಚಿನ ಸುದ್ದಿ

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ : ಪುತ್ತೂರು ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

27/10/2021, 15:14

ಪುತ್ತೂರು (reporterkarnataka.com)

ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ಖಾಸಗಿ ವಿದ್ಯಾಸಂಸ್ಥೆಯೊಂದರ ದೈಹಿಕ ಶಿಕ್ಷಣ ನಿರ್ದೇಶಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.

ಪುತ್ತೂರಿನ ಖಾಸಗಿ ವಿದ್ಯಾಸಂಸ್ಥೆಯೊಂದರ ದೈಹಿಕ ಶಿಕ್ಷಣ ನಿರ್ದೇಶಕ ಎಲ್ಯಾಸ್ ಪಿಂಟೋ ವಿರುದ್ಧ ಆರೋಪ ದಾಖಲಾಗಿದೆ.

ಈ ಘಟನೆ ಅಕ್ಟೋಬರ್ 23 ರಂದು ನಡೆದಿದ್ದು ಎನ್ನಲಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಂತ್ರಸ್ತೆ ವಿದ್ಯಾರ್ಥಿನಿ ವಿದ್ಯಾಸಂಸ್ಥೆಗೆ ಸೇರಿದ ಹಾಸ್ಟೆಲ್‌ನಲ್ಲಿ ವಾಸ್ತವ್ಯವಿದ್ದಳು.

ವ್ಯಾಯಾಮ ಹೇಳಿಕೊಡುವ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ವರದಿಯಾಗಿದ್ದು, ಶಿಕ್ಷಕ ಕಿರುಕುಳ ನೀಡುತ್ತಿರುವ ಬಗ್ಗೆ ವಿದ್ಯಾರ್ಥಿನಿ ಪೋಷಕರಿಗೆ ಮಾಹಿತಿ ನೀಡಿದ್ದಾಳೆ.
ಬಳಿಕ ಎಚ್ಚೆತ್ತ ವಿದ್ಯಾರ್ಥಿನಿಯ ಪೋಷಕರು ಆರೋಪಿ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಸದ್ಯ ಆರೋಪಿ ಎಲ್ಯಾಸ್ ಪಿಂಟೋನನ್ನು ಪೋಲಿಸರು ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು