2:10 AM Friday19 - April 2024
ಬ್ರೇಕಿಂಗ್ ನ್ಯೂಸ್
ಎಡಪದವು: ಅಂಗಡಿಗೆ ಗುದ್ದಿದ ಲಾರಿಯಿಂದ ಸರಣಿ ಅಪಘಾತ; ಬಸ್, ಕಾರು, ಸ್ಕೂಟರ್ ಜಖಂ;… ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ

ಇತ್ತೀಚಿನ ಸುದ್ದಿ

ಸಿಂದಗಿ ಉಪ ಚುನಾವಣೆ: ಕಾಂಗ್ರೆಸ್ – ಬಿಜೆಪಿ- ಜೆಡಿಎಸ್ ನಡುವೆ ತ್ರಿಕೋನ ಸ್ಪರ್ಧೆ;  ಯಾರ ಕೊರಳಿಗೆ ವಿಜಯ ಮಾಲೆ? 

28/10/2021, 11:08

ವಿಜಯಪುರ(reporterkarnataka.com): ರಾಜ್ಯದಲ್ಲಿ ಉಪ ಚುನಾವಣೆ ನಡೆಯಲಿರುವ ಹಾನಗಲ್ ಮತ್ತು ಸಿಂದಗಿ ಕ್ಷೇತ್ರದಲ್ಲಿ ರಾಜಕೀಯ ರಂಗು ರಂಗೇರಿದೆ. ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಯಾರು ಗೆಲ್ಲುತ್ತಾರೆ? ಯಾರು ಸೋಲುತ್ತಾರೆ ?ಎನ್ನುವ ಲೆಕ್ಕಾಚಾರ ಶುರುವಾಗಿದೆ.

ಸಿಂದಗಿಯಲ್ಲಿ ಮಾಜಿ ಸಚಿವ ಎಂ.ಸಿ. ಮನಗೂಳಿ ಅವರ ನಿಧದಿಂದ ತೆರವಾಗಿರುವ ಸ್ಥಾನಕ್ಕೆ ಈ ಚುನಾವಣೆ ನಡೆಯುತ್ತಿದೆ. ಈ ಬಾರಿ ಇಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಕಾಂಗ್ರೆಸ್ ನಿಂದ ಪಂಚಮಸಾಲಿ ಸಮುದಾಯಕ್ಕೆ ಸೇರಿದ ಮಾಜಿ ಸಚಿವ ಎಂ.ಸಿ. ಮನಗೂಳಿ ಅವರ ಪುತ್ರ ಅಶೋಕ್ ಮನಗೂಳಿ ಸ್ಪರ್ಧಿಸುತ್ತಿದ್ದಾರೆ. ಬಿಜೆಪಿಯಿಂದ ಗಾಣಿಗ ಸಮುದಾಯದ ರಮೇಶ್ ಬೂಸನೂರು ಹಾಗೂ ಜನತಾದಳದಿಂದ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ನಾಜಿಯಾ ಶಕೀಲ್ ಅಂಗಡಿ ಅವರು ಕಣಕ್ಕಿಳಿದ್ದಾರೆ. 

ಒಂದು ಕಾಲದಲ್ಲಿ ಸಿಂದಗಿ ಕಾಂಗ್ರೆಸ್ ನ ಭದ್ರಕೋಟೆ ಆಗಿತ್ತು. ಆದರೆ ಕಳೆದ ಎರಡು ಮೂರು ದಶಕಗಳಿಂದ ಇಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಸ್ಪರ್ಧೆ ನಡೆಯುತ್ತಿದೆ. ಆದರೆ ಈ ಬಾರಿ ಮಾಜಿ ಸಚಿವ ಎಂ.ಸಿ. ಮನಗೂಳಿ ಅವರ ಪುತ್ರ ಕಾಂಗ್ರೆಸ್ ನಿಂದ ಕಣಕ್ಕಿಳಿದಿರುವುದರಿಂದ ಒಂದು ಕಡೆ ಅನುಕಂಪದ ಅಲೆಯೂ ಇದ್ದು, ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.

ಸಿಂದಗಿ ಕ್ಷೇತ್ರದಲ್ಲಿ ಗಾಣಿಗ ಸಮುದಾಯ ಪ್ರಾಬಲ್ಯ ಹೊಂದಿದೆ. ಕುರುಬ ಮತ್ತು ಮುಸ್ಲಿಂ ಸಮುದಾಯ

ಹೆಚ್ಚು ಕಡಿಮೆ ಸರಿಸಮಾನವಾಗಿದೆ. ಇಲ್ಲಿ ಗಾಣಿಗ ಸಮುದಾಯ ಪ್ರಾಬಲ್ಯ ಹೊಂದಿದ ಕಾರಣದಿಂದಲೇ ಬಿಜೆಪಿ ರಮೇಶ್ ಬೂಸನೂರು ಅವರನ್ನು ಮತ್ತೆ ಅಖಾಡಕ್ಕೆ ಇಳಿಸಿದೆ. ಮಾಜಿ ಸಚಿವ ಎಂ.ಸಿ. ಮನಗೊಳಿ ನಿಧನದಿಂದ ತೆರವಾಗಿರುವ ಈ ಸ್ಥಾನಕ್ಕೆ ಅನುಕಂಪದ ಅಲೆಯನ್ನು ಪಡೆಯಲು ಕಾಂಗ್ರೆಸ್ ಅವರ ಪುತ್ರ ಅಶೋಕ್ ಮನಗೂಳಿ ಅವರಿಗೆ ಟಿಕೆಟ್ ನೀಡಿದೆ. ಇನ್ನು ಮುಸ್ಲಿಂ ಮತಗಳನ್ನು ಬಾಚಿಕೊಳ್ಳಲು ಜನತಾದಳ ಅಲ್ಪಸಂಖ್ಯಾತ ಅಭ್ಯರ್ಥಿ ನಾಜಿಯಾ ಶಕೀಲ್ ಅವರನ್ನು ಕಣಕ್ಕಿಳಿಸಿದೆ. ಎಲ್ಲ ಪ್ರಮುಖ ಪಕ್ಷಗಳು ಜಾತಿ ಲೆಕ್ಕಾಚಾರದಲ್ಲೇ ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ.

ಸಿಂದಗಿ ವಿಧಾನಸಭೆ ಕ್ಷೇತ್ರ ಈಗಾಗಲೇ 14 ಬಾರಿ ಚುನಾವಣೆ ಕಂಡಿದೆ. ಇಲ್ಲಿನ ಚುನಾವಣೆ ಇತಿಹಾಸವನ್ನು ನೋಡಿದರೆ 8 ಬಾರಿ ಕಾಂಗ್ರೆಸ್ ಗೆದ್ದಿದೆ. ತಲಾ 3 ಬಾರಿ ಜೆಡಿಎಸ್ ಮತ್ತು ಬಿಜೆಪಿ ಗೆಲುವು ಸಾಧಿಸಿದೆ.

ಒಂದು ಕಾಲದಲ್ಲಿ ಕಾಂಗ್ರೆಸ್ ನ ಭದ್ರಕೋಟೆಯಾಗಿದ್ದ ಸಿಂದಗಿಗೆ ಕಳೆದ ಮೂರು ದಶಕಗಳ ಹಿಂದೆ ಜನತಾದಳ ಮತ್ತು ಬಿಜೆಪಿ ಎಂಟ್ರಿ ಕೊಟ್ಟಿದೆ. ಈ ಎರಡು ಪಕ್ಷಗಳು ತಲಾ 3 ಬಾರಿ ಇಲ್ಲಿ ಗೆಲುವು ಸಾಧಿಸಿದೆ. ಕಾಂಗ್ರೆಸ್ 3 ನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ. ಆದರೆ ಈ ಬಾರಿ ಎಂ.ಸಿ. ಮನಗೂಳಿ ಅವರ ಪುತ್ರನಿಗೆ ಮಣೆ ಹಾಕುವ ಮೂಲಕ ಕಾಂಗ್ರೆಸ್ ಡಿಫರೆಂಟ್ ಗೇಮ್ ಶುರುಮಾಡಿದೆ.

ಸಿಂದಗಿ ಕ್ಷೇತ್ರದಲ್ಲಿ ಒಟ್ಟು 2,34,584 ಮತದಾರರಿದ್ದಾರೆ. ಇವರಲ್ಲಿ ಪುರುಷರು 1.20,991, ಮಹಿಳೆಯರು 1,13,561 ಹಾಗೂ ಇತರರು 32 ಮಂದಿ ಇದ್ದಾರೆ. ಇವರಲ್ಲಿ ಗಾಣಿಗ ಸಮುದಾಯ ಪ್ರಾಬಲ್ಯ ಹೊಂದಿದೆ. ಬಿಜೆಪಿ ಅಭ್ಯರ್ಥಿ ರಮೇಶ್ ಬೂಸನೂರು ಅವರ ಗಾಣಿಗ ಸಮುದಾಯ 42 ಸಾವಿರ ಮತದಾರರನ್ನು ಹೊಂದಿದೆ. ಕುರುಬ ಸಮುದಾಯ 31,500, ಮುಸ್ಲಿಂ 35 ಸಾವಿರ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ. 33 ಸಾವಿರ, ಪಂಚಮಸಾಲಿ 29 ಸಾವಿರ, ಗಂಗಾಮತ 19 ಸಾವಿರ, ಬಣಜಿಗ 8 ಸಾವಿರ ಹಾಗೂ ಇತರ ಮತದಾರರು 33 ಸಾವಿರ ಮಂದಿ ಇದ್ದಾರೆ. ಇಲ್ಲಿ ಯಾರು ಗೆಲುವು ಸಾಧಿಸಬೇಕಾದರೂ 33 ಸಾವಿರ ಮಂದಿ ಇತರರ ಮತ ಮಹತ್ವವನ್ನು ಪಡೆದಿದೆ.

ಈ ಕ್ಷೇತ್ರದ ವಿಶೇಷ ಏನೆಂದರೆ ಇಲ್ಲಿನ ಮತದಾರರು ಒಬ್ಬ ಅಭ್ಯರ್ಥಿಯನ್ನು ಎರಡು ಬಾರಿಗಿಂತ ಹೆಚ್ಚು ಸಲ ಗೆಲ್ಲಿಸಿಲ್ಲ

ಇತ್ತೀಚಿನ ಸುದ್ದಿ

ಜಾಹೀರಾತು