8:25 PM Thursday2 - December 2021
ಬ್ರೇಕಿಂಗ್ ನ್ಯೂಸ್
ಸರ್ವಧರ್ಮಿಯರು ಸಂದರ್ಶಿಸುವ ಪುಣ್ಯ ಕ್ಷೇತ್ರ ಧರ್ಮಸ್ಥಳ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್  ಚಳ್ಳಕೆರೆ ತಾಲೂಕಿನಲ್ಲಿ ಅಕ್ರಮ ಮದ್ಯದ ಹೊಳೆ: ಇಲ್ಲಿನ ಅಂಗಡಿ, ಹೋಟೆಲ್ ಗಳು ಕೂಡ… ಚಳ್ಳಕೆರೆ: ಶೇಂಗಾ ಸಾಗಾಟ ಮಾಡುತ್ತಿದ್ದ ಟಾಟಾ ಎಸಿಇ ಟೈರ್ ಸಿಡಿದು ಸ್ಥಳದಲ್ಲೇ ಚಾಲಕ ಸಾವು;… ಬಿಜೆಪಿಯಿಂದ ಮತ್ತೆ ಮುಖ್ಯಮಂತ್ರಿ ಬದಲಾವಣೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಧೃವನಾರಾಯಣ್ ಸಾಲು ಸಾಲಾಗಿ ಆಸ್ಪತ್ರೆ ಸೇರುತ್ತಿರುವ ಪಚ್ಚನಾಡಿ ತ್ಯಾಜ್ಯ ದುರಂತ ಸಂತ್ರಸ್ತರು: ಜಿಲ್ಲಾಧಿಕಾರಿ ಇತ್ತ… ನಾದಬ್ರಹ್ಮ ಹಂಸಲೇಖಗೆ ಹೈಕೋರ್ಟ್ ಬಿಗ್‌ ರಿಲೀಫ್ : ಪ್ರಕರಣ ದಾಖಲಾತಿಗೆ ತಡೆಯಾಜ್ಞೆ; ದೂರುದಾತರಿಗೆ… ಚಿತ್ರದುರ್ಗ: ಕಾರು- ಬೈಕ್ ಮುಖಾಮುಖಿ ಡಿಕ್ಕಿ; ಓರ್ವ ಸ್ಥಳದಲ್ಲೇ ಸಾವು; ಇನ್ನೊರ್ವ ಗಂಭೀರ… ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?: ಚಿತ್ರದುರ್ಗದಲ್ಲಿ ಸಿದ್ದು… ಕಡಲನಗರಿಯಲ್ಲಿ ಮತ್ತೆ ತಲೆ ಎತ್ತಿದ ಗ್ಯಾಂಗ್ ವಾರ್; ಮಾರಕಾಸ್ತ್ರದಿಂದ ದಾಳಿ; ಓರ್ವ ಗಂಭೀರ ಕಾರ್ಕಳ : ಕೆಲಸಕ್ಕೆಂದು ಹೋದ ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ತಣ್ಣೀರುಬಾವಿ ಬೀಚ್: ಕಡಲ ಭೋರ್ಗರೆತ ಮಧ್ಯೆ ಲಕ್ಷ ಕಂಠಗಳಿಂದ ಮೊಳಗಿದ ಕನ್ನಡ ಗೀತ ಗಾಯನ

28/10/2021, 20:21

ಮಂಗಳೂರು(reporterkarnataka.com): ರಾಜ್ಯ ಸರಕಾರದ ನಿರ್ದೇಶನದಂತೆ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಇದೇ ಅ. 28ರ ಗುರುವಾರ ಬೆಳಿಗ್ಗೆ 11 ಗಂಟೆಗೆ ತಣ್ಣೀರುಬಾವಿ ಬೀಚ್‍ನಲ್ಲಿ ಲಕ್ಷ ಕಂಠಗಳ ಕನ್ನಡ ಸಮೂಹ ಗೀತಾ ಗಾಯನವನ್ನು ಹಮ್ಮಿಕೊಳ್ಳಲಾಯಿತು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕಂತಿ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಗೀತ ಗಾಯನ ಕಾರ್ಯಕ್ರಮವನ್ನು ಡೊಂಗರಕೇರಿಯ ಕೆನರಾ ಪ್ರೌಢಶಾಲೆ, ಕೊಡಿಯಾಲ್ ಬೈಲ್‍ನ ಶಾರದ ವಿದ್ಯಾಲಯ, ಸುರತ್ಕಲ್‍ನ ಗೋವಿಂದ ದಾಸ್ ಪಿಯು ಕಾಲೇಜು, ರಥಬೀದಿಯ ಸರಕಾರಿ ಪ್ರಥಮ ದರ್ಜೆ ಕಾಲೇಜು, ಬೆಸೆಂಟ್ ಹಾಗೂ ಬಲ್ಮಠ ಮಹಿಳಾ ಕಾಲೇಜಿನ ನೂರಾರು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಸುಶ್ರಾವ್ಯವಾಗಿ ಪ್ರಸ್ತುತಪಡಿಸಿದರು.

ರಾಷ್ಟ್ರಕವಿ ಕುವೆಂಪು ವಿರಚಿತ “ಬಾರಿಸು ಕನ್ನಡ ಡಿಂಡಿಮ’’, ನಿಸಾರ್ ಅಹಮದ್ ಅವರ ‘ಜೋಗದ ಸಿರಿ ಬೆಳಕಿನಲ್ಲಿ’ ಹಾಗೂ ಹಂಸಲೇಖ ಅವರ ‘ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಗೀತೆಗಳನ್ನು ಹಾಡಿ ಕನ್ನಡ ನಾಡು-ನುಡಿಯ ಪ್ರೇಮವನ್ನು ಅನಾವರಣಗೊಳಿಸಿದರು.

ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಅವರು, ದೈನಂದಿನ ವ್ಯವಹಾರಗಳಲ್ಲಿ ಕನ್ನಡ ಭಾಷೆಯನ್ನೇ ಬಳಸುವ ಕುರಿತು ಪ್ರತಿಜ್ಞಾವಿಧಿಯನ್ನು ಬೋಧಿಸಿದರು.


ಆಡಳಿತ, ಪತ್ರ ವ್ಯವಹಾರ ಸೇರಿದಂತೆ ಪ್ರತಿ ಸಂದರ್ಭದಲ್ಲೂ ಕನ್ನಡವನ್ನೇ ಬಳಸುವುದರ ಜತೆಗೆ ಕನ್ನಡ ನಾಡಿನಲ್ಲಿ ವಾಸಿಸುವ ಕನ್ನಡೇತರ ಭಾಷಿಕರಿಗೆ ಪ್ರೀತಿಯಿಂದ ಕನ್ನಡವನ್ನು ಕಲಿಸುವುದಾಗಿ ಎಲ್ಲರೂ ಪ್ರತಿಜ್ಞೆಯನ್ನು ಸ್ವೀಕರಿಸಿದರು.

ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲು ಅವರು, ಕನ್ನಡದ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು ರಾಜ್ಯ ಸರಕಾರದಿಂದ ಮಾಡಲಾಗುತ್ತಿದೆ. ಈ ಹಿನ್ನಲೆಯಲ್ಲಿ ಇಂದು ರಾಜ್ಯದ ಉದ್ದಗಲಕ್ಕೂ ಲಕ್ಷಾಂತರ ಜನರು ಕನ್ನಡ ಭಾಷೆಯ ಮಹತ್ವ ಸಾರುವ ಗೀತೆಗಳನ್ನು ಹಾಡುವ ನೂತನ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳು ಹಾಗೂ ಕನ್ನಡ ಸಂಸ್ಕಂತಿ ಇಲಾಖೆಯ ಸಚಿವ ಸುನೀಲ್ ಕುಮಾರ್ ಅವರ ಪರಿಕಲ್ಪನೆಯಲ್ಲಿ ಹಾಡಿಸಲಾಗುತ್ತಿದೆ. ಈ ಮೂಲಕ ಮಕ್ಕಳಲ್ಲಿ ಕನ್ನಡದ ಬಗ್ಗೆ ಅಭಿಮಾನವನ್ನು ಜಾಗೃತಿಗೊಳಿಸಲಾಗುತ್ತಿದೆ. ಎಕ್ಕಡ – ಎನ್ನಡಗಳ ಮಧ್ಯೆ ಕನ್ನಡವನ್ನು ಉಳಿಸಬೇಕಿದೆ, ಜಿಲ್ಲಾಧಿಕಾರಿಯವರ ನೇತೃತ್ವದಲ್ಲಿ ಕಾರ್ಯಕ್ರಮವನ್ನು ಉತ್ತಮವಾಗಿ ರೂಪಿಸಲಾಗಿದೆ ಎಂದರು.

ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಅವರು ಮಾತನಾಡಿ, ಸರಕಾರದ ನಿರ್ದೇಶನದಂತೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಚಿವರ ಸೂಚನೆಯಂತೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಹಾಗೂ ಇತರೆ ಇಲಾಖೆಗಳ ಸಹಯೋಗದಲ್ಲಿ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಹಮ್ಮಿಕೊಳ್ಳಲಾಗಿರುವ ಕನ್ನಡಕ್ಕಾಗಿ ನಾವು ಅಭಿಯಾನದಲ್ಲಿ ಲಕ್ಷ ಕಂಠಗಳ ಗೀತ ಗಾಯನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸುಡು ಬಿಸಿಲಿನಲ್ಲಿ ನಿಂತು ಮಕ್ಕಳು ಹೆಮ್ಮೆಯಿಂದ ತಾಯ್ನುಡಿಯ ಮಹತ್ವ ಸಾರುವ ಹಾಡುಗಳನ್ನು ಹಾಡಿದ್ದಾರೆ, ನಮ್ಮ ನುಡಿ, ಸಂಸ್ಕøತಿಗಳ ಬಗ್ಗೆ ಮುಂದಿನ ಪೀಳಿಗೆಯವರಿಗೂ ಕೂಡ ಹೆಮ್ಮೆ ಮೂಡಲಿದೆ ಎಂದರು.

ಜಿಲ್ಲೆಯ ರೈಲು, ಬಸ್, ಆಟೋ ನಿಲ್ದಾಣಗಳು, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಎನ್‍ಎಂಪಿಟಿ ಸೇರಿದಂತೆ ಸರಕಾರಿ ಕಚೇರಿಗಳು, ಮಾಲ್‍ಗಳು, ಕೈಗಾರಿಕೆಗಳು, ಕಂಪನಿಗಳಲ್ಲಿ ಇಂದು ಈ ಗೀತ ಗಾಯವನ್ನು ಪ್ರಸ್ತುತ ಪಡಿಸಲಾಗಿದೆ, ಅದೇ ರೀತಿ ಜಿಲ್ಲೆಯ ಕಡಲ ತಡಿಗಳಲ್ಲಿ  ಮೀನುಗಾರರು ಕನ್ನಡ ಗೀತಗಾಯನವನ್ನು ಪ್ರಸ್ತುತಪಡಿಸಿದ್ದಾರೆ ಎಂದು ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಲ್ಲೆಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್, ಕನ್ನಡ ಅಭಿವೃದ್ದಿ ಪ್ರಾಧಿಕಾರದ ಸದಸ್ಯರಾದ ಡಾ. ದಿನಕರ ಪಚ್ಚನಾಡಿ, ಡಾ. ಮೀನಾಕ್ಷಿ ರಾಮಚಂದ್ರ, ರತ್ನಾವತಿ ಬೈಕಾಡಿ, ನಾಗರಾಜ ಶೆಟ್ಟಿ, ಪುರುಷೋತ್ತಮ ಭಂಡಾರಿ, ವಿವಿಧ ಶಾಲೆ ಕಾಲೇಜುಗಳ ದೈಹಿಕ ಶಿಕ್ಷಣ ಶಿಕ್ಷಕರು, ಉಪನ್ಯಾಸಕರು ಭಾಗವಹಿಸಿದ್ದರು. ಶಿಕ್ಷಕಿಡಾ. ಮಂಜುಳಾ ಶೆಟ್ಟಿ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು