10:31 AM Tuesday30 - November 2021
ಬ್ರೇಕಿಂಗ್ ನ್ಯೂಸ್
ಕಾರ್ಕಳ : ಕೆಲಸಕ್ಕೆಂದು ಹೋದ ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು 9 ಮಂದಿ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ: ಆರೋಪಿ ಡಾ. ರತ್ನಾಕರ್ ಗೆ… ದಂಪತಿ ಜತೆ ಸುರತ್ಕಲ್ ಟೋಲ್ ಸಿಬ್ಬಂದಿ ಅನುಚಿತ ದುರ್ವರ್ತನೆ: ಪೋಲೀಸ್ ಕಮಿಷನರ್ ಶಶಿಕುಮಾರ್… ಕಾಫಿನಾಡಲ್ಲಿ ಪ್ರಾಮಾಣಿಕ ಕಳ್ಳರು!: 4 ಬಾರ್ ಗಳಿಗೆ ಹೊಕ್ಕ ಚೋರರು: ಹಣ ಸಿಕ್ಕಿಲ್ಲ, ಆದ್ರೆ… ಕಡೂರು: ನೀರಿನ ಟ್ಯಾಂಕ್ ಕ್ಲೀನ್ ಮಾಡುವಾಗ ಉಸಿರುಗಟ್ಟಿ ಇಬ್ಬರು ಸಾವು; ಒಬ್ಬ ಗಂಭೀರ ಬೆಂಗಳೂರು: ನವಜಾತ ಹೆಣ್ಣು ಶಿಶುವನ್ನು ದೇವರ ಗುಡಿ ಮುಂದಿಟ್ಟು ಪರಾರಿ ಮೂಡಿಗೆರೆ: ಒಣ ಗಾಂಜಾ ಮಾರಾಟ; ಮಾಲು ಸಹಿತ ಆರೋಪಿ ಬಂಧನ ಕಲಬುರಗಿ ಪಾಲಿಕೆ ಕಮಿಷನರ್ ವಿರುದ್ಧ ಲವ್, ಸೆಕ್ಸ್, ದೋಖಾ ಆರೋಪ: ಕಮಿಷನರ್ ಈ… ಸೋವೇನ ಹಳ್ಳಿ, ಹಗರಿಬೊಮ್ಮನ ಹಳ್ಳಿಗೆ ಸಮರ್ಪಕ ಬಸ್ ವ್ಯವಸ್ಥೆ: ಗ್ರಾಮಸ್ಥರ ಹಕ್ಕೊತ್ತಾಯ 9 ಮಂದಿ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ: ಡಾ. ರತ್ನಾಕರ್ ಬಂಧನ; 2…

ಇತ್ತೀಚಿನ ಸುದ್ದಿ

ಕನ್ನಡ ಚಿತ್ರರಂಗವನ್ನು ಅಗಲಿದ ಪವರ್ ಸ್ಟಾರ್ ಪುನೀತ್ ; ಅಪ್ಪುವಿನ ಅಗಲಿಕೆಗೆ ಸ್ತಬ್ಧವಾದ ಚಿತ್ರರಂಗ ; ಅತಿಯಾದ ಫಿಟ್‌ನೆಸ್ ಕಾಳಜಿಯೇ ಜೀವಕ್ಕೆ ಮುಳುವಾಯಿತೆ ?

29/10/2021, 14:26

Reporterkarnataka.com

‘ಅಪ್ಪು’ ಖ್ಯಾತಿಯ ಪವರ್ ಸ್ಟಾರ್
ಪುನೀತ್​ ರಾಜ್​ಕುಮಾರ್ ಇನ್ನು ನೆನಪು ಮಾತ್ರ.

ಕನ್ನಡದ ಪವರ್ ಸ್ಟಾರ್ ಪುನೀತ್​ ರಾಜ್​ಕುಮಾರ್​ ಅವರು ಶುಕ್ರವಾರ ಬೆಳಗ್ಗೆ ತೀವ್ರ ಹೃದಯಘಾತಕ್ಕೀಡಾಗಿ ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ಶುಕ್ರವಾರ ಬೆಳಗ್ಗೆ ಜಿಮ್​ನಲ್ಲಿ ವರ್ಕೌಟ್​ ಮಾಡುವಾಗ ಪುನೀತ್​ ರಾಜ್​ಕುಮಾರ್​ ಅವರಿಗೆ ಆರೋಗ್ಯ ಸಮಸ್ಯೆ ಉಂಟಾಯಿತು. ಹೃದಯಕ್ಕೆ ಸಂಬಂಧಿಸಿದ ಸಮಸ್ಯೆ ಕಾಣಿಸಿಕೊಂಡಿತ್ತು.

ತಕ್ಷಣ ಅವರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಪುನೀತ್​ ರಾಜ್​ಕುಮಾರ್​ ಅವರಿಗೆ ಇಸಿಜಿ ಮಾಡಿ ಚಿಕಿತ್ಸೆ ನೀಡಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾದರು.

ಫಿಟ್ನೆಸ್​ ಬಗ್ಗೆ ಪುನೀತ್​ ಹೆಚ್ಚು ಗಮನ ನೀಡುತ್ತಾರೆ. ಪ್ರತಿದಿನ ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಾರೆ. ಆರೋಗ್ಯದ ಬಗ್ಗೆ ಅವರಿಗೆ ಕಾಳಜಿ ಇದೆ. ಹಾಗಿದ್ದರೂ ಕೂಡ ಅವರಿಗೆ ಏಕಾಏಕಿ ಹೃದಯಾಘಾತವಾಗಿರುವುದು ಅಭಿಮಾನಿಗಳನ್ನು ಕಣ್ಣೀರ ಕಡಲಿನಲ್ಲಿ ಮುಳುಗಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು