10:46 AM Tuesday30 - November 2021
ಬ್ರೇಕಿಂಗ್ ನ್ಯೂಸ್
ಕಾರ್ಕಳ : ಕೆಲಸಕ್ಕೆಂದು ಹೋದ ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು 9 ಮಂದಿ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ: ಆರೋಪಿ ಡಾ. ರತ್ನಾಕರ್ ಗೆ… ದಂಪತಿ ಜತೆ ಸುರತ್ಕಲ್ ಟೋಲ್ ಸಿಬ್ಬಂದಿ ಅನುಚಿತ ದುರ್ವರ್ತನೆ: ಪೋಲೀಸ್ ಕಮಿಷನರ್ ಶಶಿಕುಮಾರ್… ಕಾಫಿನಾಡಲ್ಲಿ ಪ್ರಾಮಾಣಿಕ ಕಳ್ಳರು!: 4 ಬಾರ್ ಗಳಿಗೆ ಹೊಕ್ಕ ಚೋರರು: ಹಣ ಸಿಕ್ಕಿಲ್ಲ, ಆದ್ರೆ… ಕಡೂರು: ನೀರಿನ ಟ್ಯಾಂಕ್ ಕ್ಲೀನ್ ಮಾಡುವಾಗ ಉಸಿರುಗಟ್ಟಿ ಇಬ್ಬರು ಸಾವು; ಒಬ್ಬ ಗಂಭೀರ ಬೆಂಗಳೂರು: ನವಜಾತ ಹೆಣ್ಣು ಶಿಶುವನ್ನು ದೇವರ ಗುಡಿ ಮುಂದಿಟ್ಟು ಪರಾರಿ ಮೂಡಿಗೆರೆ: ಒಣ ಗಾಂಜಾ ಮಾರಾಟ; ಮಾಲು ಸಹಿತ ಆರೋಪಿ ಬಂಧನ ಕಲಬುರಗಿ ಪಾಲಿಕೆ ಕಮಿಷನರ್ ವಿರುದ್ಧ ಲವ್, ಸೆಕ್ಸ್, ದೋಖಾ ಆರೋಪ: ಕಮಿಷನರ್ ಈ… ಸೋವೇನ ಹಳ್ಳಿ, ಹಗರಿಬೊಮ್ಮನ ಹಳ್ಳಿಗೆ ಸಮರ್ಪಕ ಬಸ್ ವ್ಯವಸ್ಥೆ: ಗ್ರಾಮಸ್ಥರ ಹಕ್ಕೊತ್ತಾಯ 9 ಮಂದಿ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ: ಡಾ. ರತ್ನಾಕರ್ ಬಂಧನ; 2…

ಇತ್ತೀಚಿನ ಸುದ್ದಿ

ಮೀನುಗಾರಿಕೆಗೆ ರೋಬೋಟಿಕ್ಸ್ ತಂತ್ರಜ್ಞಾನ, ಮಂಗಳೂರಿನಲ್ಲಿ ಸಾಫ್ಟ್ ವೇರ್ ಪಾರ್ಕ್: ಸಚಿವ ಅಶ್ವತ್ಥನಾರಾಯಣ ಘೋಷಣೆ

30/10/2021, 09:25

ಮಂಗಳೂರು(reporterkarnataka.com): ರಾಜ್ಯದ ಕರಾವಳಿಯಲ್ಲಿ ರೋಬೋಟಿಕ್ಸ್ ಮತ್ತು ಕೃತಕ ಬುದ್ಧಿಮತ್ತೆ (ಆರ್ಟಿಫಿಷಿಯಲ್ ಇಂಟೆಲಿಜೆನ್ಸ್) ತಂತ್ರಜ್ಞಾನದ ಮೂಲಕ ಮೀನುಗಾರಿಕೆಯನ್ನು ದೊಡ್ಡ ಆದಾಯದ ಮೂಲವನ್ನಾಗಿ ಬೆಳೆಸಲಾಗುವುದು ಮತ್ತು ಮಂಗಳೂರಿನಲ್ಲಿ ಸಾಫ್ಟ್ ವೇರ್ ಪಾರ್ಕ್ ಸ್ಥಾಪಿಸಲಾಗುವುದು ಎಂದು ಐಟಿ-ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವರಾದ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.

ಅವರು ಶುಕ್ರವಾರ ನಗರದ ಖಾಸಗಿ ಹೋಟೆಲ್‍ನಲ್ಲಿ `ಬಿಯಾಂಡ್ ಬೆಂಗಳೂರು’ ಉಪಕ್ರಮದಡಿ ಹಮ್ಮಿಕೊಂಡಿದ್ದ ಒಂದು ದಿನದ `ಮಂಗಳೂರು ಟೆಕ್ನೋವಾಂಜಾ’ ಸಮಾವೇಶದಲ್ಲಿ ಮಾತನಾಡಿದರು.

ದಕ್ಷಿಣ ಕನ್ನಡವೂ ಸೇರಿದಂತೆ ರಾಜ್ಯದ ಕರಾವಳಿಯಲ್ಲಿ ಅಪಾರವಾದ ಮತ್ಸ್ಯ ಸಂಪತ್ತಿದೆ. ಸರಕಾರವು ಜೈವಿಕ ಸಂಪನ್ಮೂಲಗಳನ್ನು ಆಧರಿಸಿದ ಆರ್ಥಿಕ ಮೂಲಗಳಲ್ಲಿ (ಬಯೊನಾಮಿಕ್ಸ್) ಗುರುತಿಸಿರುವ ಆದಾಯದ ಐದು ಶಕ್ತಿಗಳಲ್ಲಿ ಮೀನುಗಾರಿಕೆಯೂ ಒಂದಾಗಿದೆ. ಇದನ್ನು ಆದಾಯದ ದೊಡ್ಡ ವಲಯವಾಗಿ ಬೆಳೆಸಲು ಅತ್ಯಾಧುನಿಕ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು.

ಇದಲ್ಲದೆ, ಕಿಯೋನಿಕ್ಸ್ ವತಿಯಿಂದ ಮಂಗಳೂರಿನಲ್ಲಿ ಸಾಫ್ಟ್‍ವೇರ್ ಪಾರ್ಕನ್ನು ಸ್ಥಾಪಿಸಲಾಗುವುದು. ಇದಕ್ಕೆ ಬೇಕಾದ ತಾಂತ್ರಿಕ ಅನುಮತಿ ಈಗಾಗಲೇ ಸಿಕ್ಕಿದ್ದು, ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ಅಡಿಯಲ್ಲಿ `ಎಲಿವೇಟ್’ ಕಾರ್ಯಕ್ರಮದ ಅನ್ವಯ ಮಂಗಳೂರು ಕ್ಲಸ್ಟರ್ ಗೆ ವಿಶೇಷ ನಿಧಿಯನ್ನು ಕೊಡಲಾಗುವುದು. ಜತೆಗೆ, ಮಂಗಳೂರಿನಲ್ಲಿ 12 ಕೋಟಿ ರೂ. ವೆಚ್ಚದಲ್ಲಿ ಆರ್ಥಿಕ ಸೇವೆಗಳನ್ನು (ಫಿನ್-ಟೆಕ್) ಒದಗಿಸುವ ಉತ್ಕøಷ್ಟತಾ ಕೇಂದ್ರವನ್ನು ಸ್ಥಾಪಿಸಲಾಗುವುದು ಎಂದು ಸಚಿವರು ಘೋಷಿಸಿದರು.

ರಾಜ್ಯದಲ್ಲಿ ಉದ್ದಿಮೆಗಳ ಬೆಳವಣಿಗೆಗೆ ದೂರಸಂಪರ್ಕ ಮತ್ತು ಅಂತರ್ಜಾಲ ಸೇವೆಗಳು ಅಡೆತಡೆ ಇಲ್ಲದೆ ನಡೆಯಬೇಕು. ಇದನ್ನು ಪರಿಗಣಿಸಿ, ಸದ್ಯದಲ್ಲೇ ಟೆಲಿಕಾಂ ನೀತಿಯನ್ನು ಜಾರಿಗೆ ತರಲಾಗುತ್ತಿದ್ದು, ಏಕಗವಾಕ್ಷಿ ವ್ಯವಸ್ಥೆ ಪದ್ಧತಿಯನ್ನು ಅಳವಡಿಸಿಕೊಳ್ಳಲಾಗುವುದು. ಅಲ್ಲದೆ ದೂರದ ಪ್ರದೇಶಗಳಲ್ಲಿ ಉಪಗ್ರಹ ಆಧಾರಿತ ಸೇವೆಗಳನ್ನು ಆರಂಭಿಸಲಾಗುವುದು ಎಂದು ಅವರು ಭರವಸೆ ನೀಡಿದರು.

ಡಿಜಿಟಲ್ ಎಕಾನಮಿ ಮಿಷನ್ ತರಹದ ವಿನೂತನ ಉಪಕ್ರಮವು ಸಿಂಗಪುರ್ ಬಿಟ್ಟರೆ ಇರುವುದು ರಾಜ್ಯದಲ್ಲಿ ಮಾತ್ರ. ವಿಷನ್ ಗ್ರೂಪುಗಳನ್ನು ರಚಿಸಿದ್ದರಲ್ಲೂ ದೇಶಕ್ಕೆ ನಾವೇ ನಂಬರ್ ಒನ್! ಕರ್ನಾಟಕದ ಉದ್ದಗಲಕ್ಕೂ ಉದ್ದಿಮೆಗಳನ್ನು ಬೆಳೆಸಬೇಕೆನ್ನುವುದೇ ಸರಕಾರದ ಪ್ರತಿಜ್ಞೆ ಎಂದವರು ಹೇಳಿದರು.

ಇದೇ ಸಂದರ್ಭದಲ್ಲಿ ಅವರು ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ಯೋಜನೆಯ ನೂತನ ಕಚೇರಿಯನ್ನು ಮತ್ತು `ಫ್ಯೂಚರ್ ಡಿಜಿಟಲ್ ಜಾಬ್ಸ್@ಮಂಗಳೂರು’ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಆನ್‍ಲೈನ್ ಮೂಲಕ ಶುಭ ಹಾರೈಸಿದ ಉದ್ಯಮಿ ಟಿ.ವಿ. ಮೋಹನದಾಸ್ ಪೈ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ಮೆಡಿಕಲ್ ಕಾಲೇಜುಗಳಿವೆ. ದೇಶದ ಬೇರೆಲ್ಲೂ ಇಂತಹ ಅನುಕೂಲವಿಲ್ಲ. ಮಂಗಳೂರು ಬಿ.ಟಿ. ವಲಯದಲ್ಲಿ ಅಗಾಧವಾಗಿ ಬೆಳೆಯುವ ಸಾಧ್ಯತೆಗಳಿವೆ. ಈ ನಿಟ್ಟಿನಲ್ಲಿ ನಾವು ಮಾರುಕಟ್ಟೆ ಶೋಧನೆಗೆ ಮೊದಲು ಹೆಜ್ಜೆ ಇಡಬೇಕು ಎಂದರು.

ರಾಜ್ಯ ಐಟಿ-ಬಿಟಿ ವಿಷನ್ ಗ್ರೂಪಿನ ಮುಖ್ಯಸ್ಥ ಕ್ರಿಸ್ ಗೋಪಾಕೃಷ್ಣ ಮಾತನಾಡಿ, ಮಂಗಳೂರನ್ನು ಆರ್ಥಿಕ ಸೇವೆಗಳ ಹಬ್ ಆಗಿ ಬೆಳೆಸಲು ಇಲ್ಲಿನ ಬ್ಯಾಂಕಿಂಗ್ ವಾತಾವರಣ ಹೇಳಿಮಾಡಿಸಿದಂತಿದೆ. ಎಲ್ಲಿಂದಾದರೂ ಕೆಲಸ ಮಾಡಬಹುದು ಎನ್ನುವ ಈಗಿನ ಪರಿಸ್ಥಿತಿಯನ್ನು ನಮ್ಮ ಬೆಳವಣಿಗೆಗೆ ಸಮರ್ಥವಾಗಿ ಬೆಳೆಸಿಕೊಳ್ಳಬೇಕು ಎಂದರು.

ಕೆಡಿಇಎಂ ಮುಖ್ಯಸ್ಥ ಬಿ.ಬಿ.ನಾಯ್ಡು, ಸ್ಟಾರ್ಟಪ್ ವಿಷನ್ ಗ್ರೂಪಿನ ಮುಖ್ಯಸ್ಥ ಪ್ರಶಾಂತ ಪ್ರಕಾಶ್, ಐಟಿಬಿಟಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ.ರಮಣ ರೆಡ್ಡಿ, ಕೌಶಲ್ಯಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಎಸ್.ಸೆಲ್ವಕುಮಾರ್, ಲಹರಿ ಉಪಕ್ರಮದ ಮುಖ್ಯಸ್ಥ ಸಂಜೀವ್ ಗುಪ್ತ, ಮುಂತಾದವರು ಮಾತನಾಡಿದರು.

ಸಂಸದರಾದ ನಳೀನ್ ಕುಮಾರ್ ಕಟೀಲ್, ಶಾಸಕರಾದ ವೇದವ್ಯಾಸ್ ಕಾಮತ್, ಐಟಿಬಿಟಿ ನಿರ್ದೇಶಕಿ ಮೀನಾ ನಾಗರಾಜ್, ಬೀರೇನ್ ಘೋμï ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಒಡಂಬಡಿಕೆಗಳ ವಿನಿಮಯ:
ಕಾರ್ಯಕ್ರಮದಲ್ಲಿ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ಇಲ್ಲಿನ ಸಹ್ಯಾದ್ರಿ ಎಂಜಿನಿಯರಿಂಗ್ ಕಾಲೇಜು, ಸಿಇಒಎಲ್, ಐಎಫ್‍ಎಸ್‍ಎ, ಎಂಆರ್ಜಿ ಸಮೂಹ ಮತ್ತು ಬಿಗ್ವಿಸ್ಟಾ ಕಂಪನಿಗಳೊಂದಿಗೆ ಮಾಡಿಕೊಂಡ ಒಡಂಬಡಿಕೆಗಳನ್ನು ವಿನಿಮಯ ಮಾಡಿಕೊಳ್ಳಲಾಯಿತು. ಈ ಕಂಪನಿಗಳು ಫಿನ್ ಟೆಕ್, ಮಂಗಳೂರು ವಿಷನ್-2025, ಎನ್‍ಇಪಿ ಜಾರಿ, ಐಟಿ ಪಾರ್ಕ್ ಸ್ಥಾಪನೆ ಮುಂತಾದ ವಲಯಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲಿವೆ.

ಜನಸಾಮಾನ್ಯರಿಗೆ ಸರಕಾರದ ಯೋಜನೆ ತಲುಪಿಸುವುದು ನಮ್ಮ ಜವಬ್ದಾರಿ: ಸಚಿವ ಭಗವಂತ ಖೂಬಾ ಮಂಗಳೂರು, ಅ.29(ಕ.ವಾ.):- ಸರಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಕಾರ್ಯ ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಕೇಂದ್ರ ಸರಕಾರದ ರಾಸಾಯನಿಕ ಮತ್ತು ರಸಗೊಬ್ಬರ ಖಾತೆಯ ಸಚಿವ ಭಗವಂತ ಖೂಬಾ ಅವರು ತಿಳಿಸಿದರು.

ಅವರು ಅ. 29ರ ಶುಕ್ರವಾರ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರದ ವತಿಯಿಂದ ರಾಷ್ಟ್ರೀಯ ಏಕತಾ ಸಪ್ತಾಹದ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ಜನೌಷಧಿ ಮಿತ್ರ ಸಮ್ಮೇಳನದಲ್ಲಿ ಮಾತನಾಡಿದರು.

ಸರ್ಕಾರದ ಯೋಜನೆಗಳು ಎಲ್ಲರಿಗೂ ತಲುಪಿಸಿದಾಗ ಮಾತ್ರ ಜನಸಾಮಾನ್ಯರು ಅವುಗಳ ಲಾಭ ಪಡೆಯಲು ಸಾಧ್ಯ, ಬಡವರಿಗೆ ಕೆಲಸ, ಆಹಾರ, ಮನೆ, ಶೌಚಾಲಯ ಹಾಗೂ ಕಡಿಮೆದರದಲ್ಲಿ ಚಿಕಿತ್ಸೆ ಮತ್ತು ಸೌಲಭ್ಯಗಳು ದೊರೆಯಬೇಕು ಎಂದ ಅವರು ಕಡುಬಡವರಿಗೆ ಉಚಿತವಾಗಿ ಆರೋಗ್ಯ ಸೇವೆಗಳು ಸಿಗಬೇಕು ಎಂದರು.

ಪ್ರಸ್ತುತ ಜಿಲ್ಲೆಯಲ್ಲೀಗ 82 ಜನೌಷಧಿ ಕೇಂದ್ರಗಳಿವೆ, ಅದನ್ನು ಹೊರತು ಪಡಿಸಿ ಅಗತ್ಯವಿರುವೆಡೆ ಮುಂಬರುವ ದಿನಗಳಲ್ಲಿ ಮತ್ತಷ್ಟು ಜನೌಷಧಿ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಹಾಗೂ ಈ ಕೇಂದ್ರದ ಬಗ್ಗೆ ಸಂಪೂರ್ಣ ಮಾಹಿತಿ ಒದಗಿಸುವ ಆ್ಯಪ್ ಅನ್ನು ಬಿಡುಗಡೆ ಮಾಡುವ ಚಿಂತನೆ ಇದೆ, ಆನ್‍ಲೈನ್ ಪೋರ್ಟಲ್ ಮೂಲಕ ಜನೌಷಧಿ ಕೇಂದ್ರದಲ್ಲಿ ಯಾವೆಲ್ಲಾ ಔಷಧಿಗಳು ದೊರಕುತ್ತದೆ ಎಂಬ ಮಾಹಿತಿಯನ್ನು ಈ  ಆ್ಯಪ್ ಒಳಗೊಂಡಿರಲಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಂಸದರಾದ ನಳೀನ್ ಕುಮಾರ್ ಕಟೀಲ್, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ, ಸಮಾಜ ಕಲ್ಯಾಣ  ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕರಾದ ಡಿ. ವೇದವ್ಯಾಸ್ ಕಾಮತ್, ಉಮಾನಾಥ ಕೋಟ್ಯಾನ್, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಮೂಡ ಅಧ್ಯಕ್ಷ ರವಿಶಂಕರ್ ಮಿಜಾರು ಸೇರಿದಂತೆ ಅಧಿಕಾರಿಗಳು, ವೈದ್ಯರು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ನ.1ರಂದು ನೂತನ ಕಟ್ಟಡ ಉದ್ಘಾಟನೆ
ಮಂಗಳೂರು, ಅ.29(ಕ.ವಾ.):- ತೋಟಗಾರಿಕೆ ಉಪನಿರ್ದೇಶಕರ ಕಚೇರಿಯ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ಮುಂಬರು ನವೆಂಬರ್ 1ರ ಸೋಮವಾರ ಬೆಳಿಗ್ಗೆ 11 ಗಂಟೆಗೆ ನಗರದ ಬೆಂದೂರು ಕ್ರಾಸ್‍ನ ತೋಟಗಾರಿಕೆ ಇಲಾಖೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಅವರು ತೋಟಗಾರಿಕೆ ಉಪನಿರ್ದೇಶಕರ ನೂತನ ಕಟ್ಟಡ ಉದ್ಘಾಟಿಸಲಿದ್ದಾರೆ.  ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಡಿ. ವೇದವ್ಯಾಸ್ ಕಾಮತ್ ವಹಿಸಲಿದ್ದಾರೆ.

ತೋಟಗಾರಿಕೆ ಮತ್ತು ಯೋಜನೆ, ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯಿಕ ಸಚಿವರಾದ ಎನ್. ಮುನಿರತ್ನ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಗೌರವ ಉಪಸ್ಥಿರಿರುವರು.

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ವಿಧಾನ ಸಭಾ ಕ್ಷೇತ್ರದ ಶಾಸಕ ಯು.ಟಿ. ಖಾದರ್, ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ. ವೈ, ಪುತ್ತೂರು ಶಾಸಕ ಸಂಜೀವ ಮಠಂದೂರು, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಯು., ಮೂಡಬಿದ್ರೆ ಶಾಸಕ ಉಮಾನಾಥ್.ಎ. ಕೋಟ್ಯಾನ್, ವಿಧಾನ ಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ್ ಕೆ., ಹರೀಶ್ ಕುಮಾರ್ ಕೆ., ಎಸ್. ಎಲ್. ಭೋಜೇಗೌಡ, ಕೆ. ಪ್ರತಾಪಚಂದ್ರ ಶೆಟ್ಟಿ, ಆಯನೂರು ಮಂಜುನಾಥ, ಬಿ.ಎಂ. ಫಾರೂಕ್, ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ (ಕಿಯೋನಿಕ್ಸ್) ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ನಿತೀನ್ ಕುಮಾರ್, ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್‍ನ ಅಧ್ಯಕ್ಷ ಸಂತೋಷ ರೈ ಬೋಳಿಯಾರ್, ಕರ್ನಾಟಕ ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ. ರವೀಂದ್ರ ಶೆಟ್ಟಿ, ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ, ಬೆಂದೂರು ವಾರ್ಡ್ ಕಾರ್ಪೋರೇಟರ್ ನವೀನ್ ಆರ್. ಡಿಸೋಜ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ, ಮಂಗಳೂರು ನಗರ ಪೆÇಲೀಸ್ ಆಯುಕ್ತ ಶಶಿಕುಮಾರ್, ತೋಟಗಾರಿಕೆ ಇಲಾಖೆಯ ನಿರ್ದೇಶಕ ಕೆ. ನಾಗೇಂದ್ರ ಪ್ರಸಾದ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಬೆಂಗಳೂರು ತೋಟಗಾರಿಕೆ ಜಂಟಿ ನಿರ್ದೇಶಕ (ಯೋಜನೆ) ಎಸ್. ನಂದಾ, ತೋಟಗಾರಿಕೆ ಜಂಟಿ ನಿರ್ದೇಶಕÀ(ತೋಟಗಳು ಮತ್ತು ಉದ್ಯಾನವನಗಳು) ಡಾ. ಎಂ. ಜಗದೀಶ್, ಮೈಸೂರು ವಿಭಾಗದ ತೋಟಗಾರಿಕೆ ಜಂಟಿ ನಿರ್ದೇಶಕÀ ಹೆಚ್.ಎಂ. ನಾಗರಾಜ್ ಹಾಗೂ ಮತ್ತಿತರರು ಭಾಗವಹಿಸುವರು.

ಪೌರಕಾರ್ಮಿಕರಿಗೆ ಮೂಲಭೂತ ಸೌಲಭ್ಯ, ವಿಶ್ರಾಂತಿ ಕೊಠಡಿ ಕಲ್ಪಿಸಿಕೊಡುವಂತೆ ಎಂ.ಶಿವಣ್ಣ ಸೂಚನೆ

ಮಂಗಳೂರು ಅ.29 (ಕ.ವಾ.):- ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಕಡ್ಡಾಯವಾಗಿ ವಿಶ್ರಾಂತಿ ಕೊಠಡಿಗಳು, ಶೌಚಾಲಯದ ವ್ಯವಸ್ಥೆ ಹಾಗೂ ಇತರೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವಂತೆ ಈಗಾಗಲೇ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಲಾಗಿದೆ ಎಂದು ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರಾದ ಎಂ.ಶಿವಣ್ಣ ಅವರು ತಿಳಿಸಿದರು.

ಅವರು ಅ.29ರ ಶುಕ್ರವಾರದಂದು ನಗರದ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಪೌರ ಕಾರ್ಮಿಕರಿಗೆ ವಿಶ್ರಾಂತಿ ಕೊಠಡಿಗಳನ್ನು ಕಲ್ಪಿಕೊಡಬೇಕು, 6 ತಿಂಗಳ ಒಳಗಾಗಿ ಮಸ್ಟರಿಂಗ್ ಪಾಯಿಂಟ್‍ಗಳನ್ನು ಗುರುತಿಸಿ ವಿಶ್ರಾಂತಿ ಕೊಠಡಿಗಳನ್ನು ನಿರ್ಮಿಸುವಂತೆ ಜಿಲ್ಲಾಡಳಿತ ಹಾಗೂ ಮಹಾನಗರಪಾಲಿಕೆ ಆಯುಕ್ತರಿಗೆ ಸೂಚನೆ ನೀಡಲಾಗಿದೆ ಎಂದರು.

ಪೌರಕಾರ್ಮಿಕ ಬೆಳಗಿನ ಉಪಹಾರಕ್ಕೆ 20 ರೂಪಾಯಿಗಳನ್ನು ನಿಗದಿ ಪಡಿಸಲಾಗಿದೆ, 20 ರೂ.ಗಳಲ್ಲಿ ಕಾರ್ಮಿಕರಿಗೆ ಪೌಷ್ಠಿಕ ಆಹಾರ ನೀಡಲು ಸಾಧ್ಯವಾಗುತ್ತಿಲ್ಲವೆಂದು ಹಲವಾರು ಮುಖ್ಯಾಧಿಕಾರಿಗಳು ಹಾಗೂ ಗುತ್ತಿಗೆದಾರರು ಕೋರಿಕೆ ಸಲ್ಲಿಸಿದ್ದಾರೆ, ಗುಣಮಟ್ಟದ ಉಪಹಾರಕ್ಕಾಗಿ 50 ರೂ.ಗಳಿಗೆ ಹೆಚ್ಚಿಸುವಂತೆ ಈಗಾಗಲೇ ಸರಕಾರಕ್ಕೆ ಶಿಫಾರಸ್ಸು ಮಾಡಲಾಗಿದೆ ಎಂದು ತಿಳಿಸಿದರು.

ಪೌರಕಾರ್ಮಿಕರ ಪೌಷ್ಠಿಕತೆಯನ್ನು ಹೆಚ್ಚಿಸುವ ಸಲುವಾಗಿ ಅವರಿಗೆ ಪ್ರತಿದಿನ 1 ಲೋಟ ಹಾಲು ಮತ್ತು ಮೊಟ್ಟೆಯನ್ನು ವಿತರಿಸಲು ಚಿಂತಿಸಲಾಗಿದ್ದು, ಈ ಬಗ್ಗೆ ಸರಕಾರ ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಳ್ಳಲಿದೆ, ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳಿಗೆ ತರಬೇತಿ ಆಯೋಜಿಸಿ ಎಂ.ಎಸ್. (ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್) ಕಾಯ್ದೆ-2013ರ ಕುರಿತು ಎಲ್ಲಾ ಅಧಿಕಾರಿಗಳಿಗೂ ಅರಿವು ಮೂಡಿಸಲಾಗುತ್ತಿದೆ ಎಂದರು.

ಜಿಲ್ಲೆಯಲ್ಲಿ ಪೌರಕಾರ್ಮಿಕರು ಸುರಕ್ಷಿತ ಪರಿಕರಗಳನ್ನು ಧರಿಸದೇ ಇರುವುದು ಕಂಡು ಬಂದಿದ್ದು, ಪೌರಕಾರ್ಮಿಕರು ಸುರಕ್ಷತಾ ಪರಿಕರಗಳನ್ನು ಧರಿಸುವಂತೆ ಆಯಾ ಗುತ್ತಿಗೆದಾರರು ನೋಡಿಕೊಳ್ಳಬೇಕು. ಇಲ್ಲದಿದ್ದಲ್ಲಿ ಸರಕಾರದ ನಿಯಮಗಳನ್ವಯ ಸಂಬಂಧಿಸಿದವರ ವಿರುದ್ಧ ದಂಡವನ್ನು ವಿಧಿಸುವಂತೆ ಮಹಾನಗರ ಪಾಲಿಕೆ ಆಯುಕ್ತರಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.

ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಕನಿಷ್ಠ ವೇತನ, ಪಿ.ಎಫ್. ಇ.ಎಸ್.ಐ ಪಾವತಿಸದಿರುವುದು ಗಮನಕ್ಕೆ ಬಂದಿದ್ದು, ಈ ಬಗ್ಗೆಯೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ, ಈ ಎಲ್ಲಾ ಕಾರ್ಯಕ್ರಮಗಳನ್ನು ಸಮಾಜ ಕಲ್ಯಾಣ ಅಧಿಕಾರಿಗಳು ಹಾಗೂ ಕಾರ್ಮಿಕ ಅಧಿಕಾರಿಗಳು, ಪ್ರತಿ ವಾರಕ್ಕೊಮ್ಮೆ ಸ್ಥಳೀಯ ಸಂಸ್ಥೆಗಳಿಗೆ ಭೇಟಿ ನೀಡಿ ಕುಂದು ಕೊರತೆಗಳನ್ನು ಆಲಿಸಿ ಆಯೋಗಕ್ಕೆ ವರದಿ ಸಲ್ಲಿಸುವಂತೆ ಸೂಚಿಸಿದರು.

ಸಫಾಯಿ ಕರ್ಮಚಾರಿ ಆಯೋಗದ ಕಾರ್ಯದರ್ಶಿ ಆರ್. ರಮಾ, ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕಿ ಗಾಯತ್ರಿ ನಾಯಕ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸಿದ್ಧಲಿಂಗಶ್  ಬೇವಿನಮಟ್ಟಿ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಆನಂದ ಕುಮಾರ್ ಹಾಗೂ ಇತರ ಅಧಿಕಾರಿಗಳು ಗೋಷ್ಠಿಯಲ್ಲಿದ್ದರು.

ಪೌರಕಾರ್ಮಿಕರಿಗೆ ಸೂಕ್ತ ಪರಿಕರಗಳನ್ನು ಕಲ್ಪಿಸುವಂತೆ ಜಿಲ್ಲಾಡಳಿತ ಹಾಗೂ ಮಹಾನಗರಪಾಲಿಕೆಗೆ ಸೂಚನೆ: ಎಂ.ಶಿವಣ್ಣ
ಮಂಗಳೂರು ಅ.29 (ಕ.ವಾ.):- ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರ ಹಿತರಕ್ಷಣೆಗಾಗಿ ಸುರಕ್ಷಿತ ಪರಿಕರಗಳಾದ ಗ್ಲೌಸ್, ಮಾಸ್ಕ್ ಹಾಗೂ ಸಮವಸ್ತ್ರಗಳನ್ನು ಕಡ್ಡಾಯವಾಗಿ ಒದಗಿಸುವಂತೆ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರಾದ ಎಂ.ಶಿವಣ್ಣ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಅವರು ಅ.29ರ ಶುಕ್ರವಾರ ನಗರದ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಜಿಲ್ಲಾ ನಗರಾಭಿವೃದ್ಧಿ ಕೋಶ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿರುವ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಎಂ.ಎಸ್. (ಮ್ಯಾನ್ಯುಯೆಲ್ ಸ್ಕ್ವಾವೆಂಜಿಂಗ್) ಕಾಯ್ದೆ-2013ರ ಕುರಿತು ತರಬೇತಿಯನ್ನು ಹಾಗೂ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರು ಮತ್ತು ಸ್ವಚ್ಛತಾ ಕಾರ್ಮಿಕರ ಸಮಸ್ಯೆ ಕುರಿತು ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರಾಜ್ಯದಲ್ಲಿ ಸಫಾಯಿ ಕರ್ಮಚಾರಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಮತ್ತು ಅವರ ಕುಂದು-ಕೊರತೆಗಳನ್ನು ಗಣನೆಗೆ ತೆಗೆದುಕೊಂಡು ಸಮಾಜದಲ್ಲಿ ಸ್ಥಾನಮಾನ, ಸೌಲಭ್ಯ ಮತ್ತು ಅವಕಾಶಗಳನ್ನು ಪಡೆದುಕೊಳ್ಳುವಂತೆ ನೋಡಿಕೊಳ್ಳಬೇಕು ಎಂದರು.

ಎಂ.ಎಸ್.ಕಾಯ್ದೆ-2013ರನ್ವಯ ಮಲಹೊರುವುದು ಅನಿಷ್ಟ ಪದ್ಧತಿಯಾಗಿದ್ದು, ಅದನ್ನು ಸಂಪೂರ್ಣ ನಿಷೇಧಿಸಲಾಗಿದೆ. ಯಾವುದೇ ವ್ಯಕ್ತಿ ಅಥವಾ ಸಂಸ್ಥೆ ಮಲ ಹೊರುವ ಕೆಲಸಕ್ಕೆ ಯಾರೇ ವ್ಯಕ್ತಿಯನ್ನು ನೇಮಕ ಮಾಡಿಕೊಂಡಲ್ಲಿ ಕಾನೂನು ರೀತಿ 1 ರಿಂದ 5 ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ ದಂಡದ ಶಿಕ್ಷೆಗೆ ಗುರಿಪಡಿಸಲಾಗುತ್ತದೆÉ ಎಂದು ಎಚ್ಚರಿಕೆ ನೀಡಿದರು.

 ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಮಲ ಗುಂಡಿಗಳನ್ನು ಸ್ವಚ್ಛಗೊಳಿಸಲು ಯಂತ್ರೋಪಕರಣಗಳಿದ್ದೂ, ಸಾರ್ವಜನಿಕರು ಸ್ಥಳೀಯ ಸಂಸ್ಥೆಗಳನ್ನು ಸಂಪರ್ಕಿಸಿ ಯಂತ್ರಗಳ ಮುಖಾಂತರ ಮಲಗುಂಡಿಗಳನ್ನು ಸ್ವಚ್ಛ ಮಾಡಿಸಿಕೊಳ್ಳಬೇಕೆಂದು ಸೂಚಿಸಿದರು.

ಸರಕಾರ ಒದಗಿಸಿರುವ ಸೌಲಭ್ಯಗಳನ್ನು ಪಡೆಯುವಲ್ಲಿ ಕಾರ್ಮಿಕರು ಜಾಗೃತರಾಗಬೇಕು ಹಾಗೂ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಿ ಈ ಬಗ್ಗೆ ಮಾಹಿತಿ ಒದಗಿಸಬೇಕು, ಅದಕ್ಕೆ ಸಂಬಂಧಿಸಿದ ಅಧಿಕಾರಿಗಳು ಕೂಡಲೇ ಕಾರ್ಯಪ್ರವೃತ್ತರಾಗಬೇಕು ಎಂದರು.

ನಗರ ಸ್ಥಳೀಯ ಸಂಸ್ಥೆಗಳು, ಗ್ರಾಮ ಪಂಚಾಯತ್‍ಗಳು, ಆಸ್ಪತ್ರೆ, ಮಾಲ್‍ಗಳು ಹಾಗೂ ಇತರೆ ಕಡೆಗಳಲ್ಲಿ ಕೆಲಸ ಮಾಡುವಂತ ಸಫಾಯಿ ಕರ್ಮಚಾರಿಗಳ ಸಂಖ್ಯೆ ನಿಖರವಾಗಿ ಇಲ್ಲದೇ ಇರುವುದರಿಂದ ಸರ್ವೇ ಕಾರ್ಯವನ್ನು ರಾಷ್ಟ್ರೀಯ ಕಾನೂನು ವಿಶ್ವವಿದ್ಯಾನಿಲಯ ಮುಖಾಂತರ ನಡೆಸಲಾಗುತ್ತಿದೆ ಎಂದರು.

ಜಿಲ್ಲಾಧಿಕಾರಿ ಡಾ.ರಾಜೇಂದ್ರ.ಕೆ.ವಿ ಮಾತನಾಡಿ, ಕೊರೊನಾ ಹಿನ್ನಲೆಯಲ್ಲಿ ಪೌರಕಾರ್ಮಿಕರು ಕಾರ್ಯನಿರ್ವಹಿಸುವ ಸಮಯದಲ್ಲಿ ಕಡ್ಡಾಯವಾಗಿ ಮಾಸ್ಕ್, ಗ್ಲೌಸ್ ಹಾಗೂ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವಂತೆ ಮಹಾನಗರಪಾಲಿಕೆಯ ಆರೋಗ್ಯಾಧಿಕಾರಿಗಳು ನೋಡಿಕೊಳ್ಳುವುದರೊಂದಿಗೆ ಪರಿಶೀಲನೆ ನಡೆಸಬೇಕು. ತಪ್ಪಿದ್ದಲ್ಲಿ ಆರೋಗ್ಯಾಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಸಫಾಯಿ ಕರ್ಮಚಾರಿ ಆಯೋಗದ ಕಾರ್ಯದರ್ಶಿ ಆರ್.ರಮಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಡಾ.ಕುಮಾರ್, ಮಹಾನಗರಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕಿ ಗಾಯತ್ರಿ ನಾಯಕ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸಿದ್ದಲಿಂಗೇಶ ಬೇವಿನಮಟ್ಟಿ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಆನಂದ ಕುಮಾರ್ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು