2:07 AM Friday26 - April 2024
ಬ್ರೇಕಿಂಗ್ ನ್ಯೂಸ್
ಚಳ್ಳಕೆರೆ ತಾಲೂಕಿನಲ್ಲಿ ಶಾಂತಿಯುತ ಮತದಾನ: ಚುನಾವಣೆ ಕರ್ತವ್ಯನಿರತ ಮಹಿಳಾ ಸಿಬ್ಬಂದಿ ಸಾವು ನಂಜನಗೂಡಿನಲ್ಲಿ ಶಾಂತಿಯುತ ಚುನಾವಣೆ: ಸಂಜೆ 4ಕ್ಕೆ ಸುಮಾರು ಶೇ.65 ಮತದಾನ ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್…

ಇತ್ತೀಚಿನ ಸುದ್ದಿ

ಉಪ ಚುನಾವಣೆ ಫಲಿತಾಂಶದಿಂದ ಧೃತಿಗೆಟ್ಟಿಲ್ಲ, ಅಸೆಂಬ್ಲಿ ಎಲೆಕ್ಷನ್ ಗೆ ಇದು ದಿಕ್ಸೂಚಿಯಲ್ಲ: ದೇವೇಗೌಡ

02/11/2021, 22:44

ಹೊಸದಿಲ್ಲಿ(reporterkarnataka.com):

ರಾಜ್ಯದಲ್ಲಿ ನಡೆದ ಉಪ ಚುನಾವಣೆಯ. ಫಲಿತಾಂಶದಿಂದ ನಾನು ಧೃತಿಗೆಟ್ಟಿಲ್ಲ. ಅಸೆಂಬ್ಲಿ ಚುನಾವಣೆಗೆ ಇದು ದಿಕ್ಸೂಚಿಯಲ್ಲ. ಈ ದೇವೇಗೌಡರು ಇನ್ನೂ ಜೀವಂತವಾಗಿದ್ದಾರೆ. ಸಾರ್ವತ್ರಿಕ ಚುನಾವಣೆಗೆ ಇನ್ನೂ ಒಂದೂವರೆ ವರ್ಷ ಇದೆ. ರಾಜ್ಯ ಪ್ರವಾಸ ಮಾಡುತ್ತೇನೆ. ನಾನು ಜೆಡಿಎಸ್ ಸೊರಗಿರುವ ಕ್ಷೇತ್ರಗಳ ಪ್ರವಾಸ ಮಾಡುತ್ತೇನೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ನಾಯಕ ಎಚ್. ಡಿ. ದೇವೇಗೌಡ ಹೇಳಿದರು.

ಉಪ ಚುನಾವಣೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಹಣದ ಹೊಳೆ ಹರಿಸಿದೆ. ಸಾರ್ವತ್ರಿಕ ಚುನಾವಣೆಯಲ್ಲಿ ಯಾರೂ ಅಷ್ಟು ದುಡ್ಡು ಖರ್ಚು ಮಾಡೊಕಾಗಲ್ಲ ಎಂದು ಹೊಸದಿಲ್ಲಿಯಲ್ಲಿ ಮಾಧ್ಯಮ ಜತೆ ಮಾತನಾಡಿದ ದೇವೇಗೌಡರು ವಿಶ್ಲೇಷಿಸಿದರು.

ನಾನು ತಿಂಗಳಿಗೆ ಎರಡು ಜಿಲ್ಲೆಗಳ ಪ್ರವಾಸ ಮಾಡುತ್ತೇನೆ. ಕುಮಾರಸ್ವಾಮಿ ಹಳೆ ಮೈಸೂರು‌ ಭಾಗದಲ್ಲಿ ಪ್ರವಾಸ ಮಾಡಲಿದ್ದಾರೆ. ಪ್ರತಿಯೊಂದನ್ನು ಅಳೆದು ತೂಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತೇವೆ. ಪರೋಕ್ಷವಾಗಿ ಇದು ಅಸೆಂಬ್ಲಿ ಚುನಾವಣೆಗೆ ದಿಕ್ಸುಚಿ ಅಲ್ಲ ಎಂದು ಅವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು