10:59 AM Tuesday30 - November 2021
ಬ್ರೇಕಿಂಗ್ ನ್ಯೂಸ್
ಕಾರ್ಕಳ : ಕೆಲಸಕ್ಕೆಂದು ಹೋದ ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು 9 ಮಂದಿ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ: ಆರೋಪಿ ಡಾ. ರತ್ನಾಕರ್ ಗೆ… ದಂಪತಿ ಜತೆ ಸುರತ್ಕಲ್ ಟೋಲ್ ಸಿಬ್ಬಂದಿ ಅನುಚಿತ ದುರ್ವರ್ತನೆ: ಪೋಲೀಸ್ ಕಮಿಷನರ್ ಶಶಿಕುಮಾರ್… ಕಾಫಿನಾಡಲ್ಲಿ ಪ್ರಾಮಾಣಿಕ ಕಳ್ಳರು!: 4 ಬಾರ್ ಗಳಿಗೆ ಹೊಕ್ಕ ಚೋರರು: ಹಣ ಸಿಕ್ಕಿಲ್ಲ, ಆದ್ರೆ… ಕಡೂರು: ನೀರಿನ ಟ್ಯಾಂಕ್ ಕ್ಲೀನ್ ಮಾಡುವಾಗ ಉಸಿರುಗಟ್ಟಿ ಇಬ್ಬರು ಸಾವು; ಒಬ್ಬ ಗಂಭೀರ ಬೆಂಗಳೂರು: ನವಜಾತ ಹೆಣ್ಣು ಶಿಶುವನ್ನು ದೇವರ ಗುಡಿ ಮುಂದಿಟ್ಟು ಪರಾರಿ ಮೂಡಿಗೆರೆ: ಒಣ ಗಾಂಜಾ ಮಾರಾಟ; ಮಾಲು ಸಹಿತ ಆರೋಪಿ ಬಂಧನ ಕಲಬುರಗಿ ಪಾಲಿಕೆ ಕಮಿಷನರ್ ವಿರುದ್ಧ ಲವ್, ಸೆಕ್ಸ್, ದೋಖಾ ಆರೋಪ: ಕಮಿಷನರ್ ಈ… ಸೋವೇನ ಹಳ್ಳಿ, ಹಗರಿಬೊಮ್ಮನ ಹಳ್ಳಿಗೆ ಸಮರ್ಪಕ ಬಸ್ ವ್ಯವಸ್ಥೆ: ಗ್ರಾಮಸ್ಥರ ಹಕ್ಕೊತ್ತಾಯ 9 ಮಂದಿ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ: ಡಾ. ರತ್ನಾಕರ್ ಬಂಧನ; 2…

ಇತ್ತೀಚಿನ ಸುದ್ದಿ

ಇಂಧನ ಬೆಲೆ ಇಳಿಕೆ ಸಂತಸ ತಂದಿದೆ, ಇದರಲ್ಲಿ ಯಾವುದೇ ರಾಜಕೀಯ ಇಲ್ಲ: ಶಾಸಕ ವೇದವ್ಯಾಸ ಕಾಮತ್

07/11/2021, 13:34

ಮಂಗಳೂರು(reporterkarnataka.com): ಕೇಂದ್ರ ಹಾಗೂ ರಾಜ್ಯ ಇಂಧನ ಮೇಲಿನ ಬೆಲೆ ಇಳಿಕೆ ಮಾಡಿದ ಕ್ರಮ ಶ್ಲಾಾಘನೀಯವಾಗಿದ್ದು, ಇದು ದೀಪಾವಳಿ ವೇಳೆಗೆ ಕೊಡುಗೆಯಾಗಿದೆ. ಇದರಿಂದ ಎಲ್ಲ ಜನತೆಗೆ ಪ್ರಯೋಜನ ಲಭಿಸಿದಂತಾಗಿದೆ. ಇದರಲ್ಲಿ ಸರ್ಕಾರದ ಯಾವುದೇ ರಾಜಕೀಯ ಇಲ್ಲ ಎಂದು ಶಾಸಕ ವೇದವ್ಯಾಾಸ ಕಾಮತ್ ಹೇಳಿದರು.

ಈ ಕುರಿತು ಪತ್ರಿಕಾ ಹೇಳಿಕೆಯಲ್ಲಿ ಅವರು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಅನಿವಾರ್ಯ ಕಾರಣಗಳಿಂದ ಇಂಧನ ಬೆಲೆ ಏರಿಕೆಯಾಗಿತ್ತು. ಇದೀಗ ಡೀಸೆಲ್ ಮತ್ತು ಪೆಟ್ರೋಲ್ ಮೇಲಿನ ಸುಂಕವನ್ನು ಕೇಂದ್ರ ಸರ್ಕಾರ ಕಡಿತಗೊಳಿಸಿದೆ. ಇದರಿಂದಾಗಿ ತೈಲ ಬೆಲೆಯಲ್ಲಿ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ. ಇದನ್ನು ಬೇರೆಯೇ ರೀತಿಯಲ್ಲಿ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ವಿನಾ ಕಾರಣ ಟೀಕಿಸುತ್ತಿವೆ. ಇಂಧನ ಬೆಲೆ ಇಳಿಕೆಗೂ ದೇಶದಲ್ಲಿ ನಡೆದ ಉಪಚುನಾವಣೆ ಫಲಿತಾಂಶಗಳಿಗೂ ಯಾವುದೇ ಸಂಬಂಧ ಇಲ್ಲ. ತನ್ನ ರಾಜಕೀಯ ಬೇಳೆ ಬೇಯಿಸಿಕೊಳ್ಳಲು
ಹಾಗೂ ಜನತೆಯಲ್ಲಿ ತಪ್ಪು ಅಭಿಪ್ರಾಾಯ ಮೂಡಿಸಲು ಕಾಂಗ್ರೆಸ್ ಹಾಗೂ ವಿಪಕ್ಷಗಳು ಈ ರೀತಿಯ ಅಪಪ್ರಚಾರದಲ್ಲಿ ತೊಡಗಿವೆ. 

ಇದಕ್ಕೆ ಜನತೆ ಕಿವಿಗೊಡಬೇಕಾಗಿಲ್ಲ ಎಂದು ವೇದವ್ಯಾಾಸ ಕಾಮತ್ ವಿನಂತಿಸಿದ್ದಾಾರೆ.

ಇತ್ತೀಚಿನ ಸುದ್ದಿ

ಜಾಹೀರಾತು