12:18 PM Saturday20 - April 2024
ಬ್ರೇಕಿಂಗ್ ನ್ಯೂಸ್
ಎಡಪದವು: ಅಂಗಡಿಗೆ ಗುದ್ದಿದ ಲಾರಿಯಿಂದ ಸರಣಿ ಅಪಘಾತ; ಬಸ್, ಕಾರು, ಸ್ಕೂಟರ್ ಜಖಂ;… ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ

ಇತ್ತೀಚಿನ ಸುದ್ದಿ

ಅಂಗನವಾಡಿ, LKG,  UKG ಇಂದಿನಿಂದ ಓಪನ್ : ಮಕ್ಕಳಿಗೆ ಏನೆಲ್ಲ ನಿಯಮಗಳಿಗೆ? ಪೂರ್ತಿ ವಿವರ ಓದಿ ನೋಡಿ

08/11/2021, 09:24

ಬೆಂಗಳೂರು(reporterkarnataka.com): ಅಂಗನವಾಡಿ ಕೇಂದ್ರ ಆರಂಭದ ಕುರಿತಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ಕೋವಿಡ್-19 ಹಿನ್ನಲೆಯಲ್ಲಿ ಅಂಗನವಾಡಿ ಕೇಂದ್ರಗಳಿಗೆ ಫಲಾನುಭವಿಗಳು ಬರುವುದನ್ನು ನಿರ್ಬಂಧಿಸಲಾಗಿತ್ತು. ಅಲ್ಲದೇ ಫಲಾನುಭವಿಗಳ ಮನೆಗೆ ಪೂರಕ ಪೌಷ್ಟಿಕ ಆಹಾರವನ್ನು ವಿತರಿಸಲಾಗುತ್ತಿತ್ತು.

ರಾಜ್ಯ ಸರ್ಕಾರವು ಪತ್ರದಲ್ಲಿ ಶೇ.2ಕ್ಕಿಂತ ಕಡಿಮೆ ಟಿಪಿಆರ್ ಇರುವ ತಾಲ್ಲೂಕುಗಳಲ್ಲಿ ಕೋವಿಡ್-19 ( Covid19 ) ಶಿಷ್ಟಾಚಾರವನ್ನು ಕಟ್ಟುನಿಟ್ಟಾಗಿ ಪಾಲಿಸುವ ಹಾಗೂ ಲಸಿಕೆ ಪಡೆದಿರುವ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಮೂಲಕ ಸೇವೆಗಳನ್ನು ಒದಗಿಸಲು 2 ಗಂಟೆಗಳ ಕಾಲ ತೆರೆಯಲು ಅಗತ್ಯ ಕ್ರಮ ಕೈಗೊಳ್ಳಲು ತಿಳಿಸಲಾಗಿರುತ್ತದೆ.

ಅಂಗನವಾಡಿ ಕೇಂದ್ರಗಳನ್ನು ( ಪುನರ್ ಪ್ರಾರಂಭಿಸಲು ಅನುಸರಿಸಬೇಕಾದ ಮಾರ್ಗಸೂಚಿ ಕ್ರಮಗಳು ಇಂತಿವೆ:

* ಅಂಗನವಾಡಿ ಕೇಂದ್ರದ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರು ಎರಡು ಡೋಸ್ ಲಸಿಕೆ ಪಡೆದಿರಬೇಕು.

* ಕೇಂದ್ರದ ಒಳ ಆವರಣ ಮತ್ತು ಸುತ್ತಮುತ್ತಲಿನ ಆವರಣವನ್ನು ಸ್ವಚ್ಛಗೊಳಿಸುವುದು

* ಅಂಗವಾಡಿ ಕೇಂದ್ರಗಳಲ್ಲಿನ ಪಾಕೋಪಕರಣ, ಮಕ್ಕಳು ಕುಳಿತುಕೊಳ್ಳಲು ಉಪಯೋಗಿಸಿದ ಜಮಖಾನ, ಡೆಸ್ಕ್, ಕುರ್ಚಿ, ಆಟಿಕೆ ಸಮಾನುಗಳನ್ನು ಅಂಗನವಾಡಿ ಪ್ರಾರಂಭದ ಹಿಂದಿನ ದಿನ ಶುಚಿಗೊಳಿಸುವುದು.

* ಶೌಚಾಲಯ, ಅಂಗನವಾಡಿಯ ನೆಲ, ಗೋಡೆ, ಕಿಟಕಿ, ಬಾಗಿಲು ಮುಂತಾದವುಗಳನ್ನು ಸೋಪಿನ ದ್ರಾವಣದಲ್ಲಿ ಸ್ವಚ್ಚಗೊಳಿಸುವುದು.

* ಪೌಷ್ಟಿಕ ಆಹಾರ ತಯಾರಿಸುವ ಎಲ್ಲಾ ಪಾತ್ರೆ, ಲೋಟ, ಕುಕ್ಕರ್ ಶುಚಿಗೊಳಿಸುವುದು.

* ಅಂಗನವಾಡಿ ಕೇಂದ್ರಗಳನ್ನು ತೆರೆಯುವ ಬಗ್ಗೆ ಗ್ರಾಮ ಪಂಚಾಯ್ತಿ ಮತ್ತು ಬಾಲವಿಕಾಸ ಸಮಿತಿಯ ಸದಸ್ಯರಿಗೆ ಮಾಹಿತಿ ನೀಡುವುದು.

* ಅಂಗನವಾಡಿ ಕೇಂದ್ರಗಳಿಗೆ ಹಾಜರಾಗಲು ಇಚ್ಚಿಸುವ ಮಕ್ಕಳ ಪೋಷಕರಿಂದ ಒಪ್ಪಿಗೆ ಪತ್ರವನ್ನು ಕಡ್ಡಾಯವಾಗಿ ಅಂಗನವಾಡಿ ಕಾರ್ಯಕರ್ತೆಯು ಪಡೆಯುವುದು

* ಅಂಗವಾಡಿ ಕೇಂದ್ರಗಳ ಫಲಾನುಭವಿಗಳ ಎಲ್ಲಾ ಪೋಷಕರು 2 ಡೋಸ್ ಕೋವಿಡ್ ಲಸಿಕೆ ಪಡೆದಿರಬೇಕು.

*ಕೋವಿಡ್ ಪಾಸಿಟಿವಿಟಿ ದರ 2ಕ್ಕಿಂತ ಕಡಿಮೆ ಇರುವ ತಾಲೂಕುಗಳಲ್ಲಿ ಅಂಗನವಾಡಿ ಕೇಂದ್ರಗಳನ್ನು ಪ್ರಾಂಭಿಸುವುದು.

* ಅಂಗನವಾಡಿ ಕೇಂದ್ರಗಳನ್ನು ಮೊದಲಿನ ಹಂತದಲ್ಲಿ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ತೆರೆಯುವುದು.

*ಎಲ್ ಕೆ ಜಿ ಮತ್ತು ಯುಕೆಜಿ ತರಗತಿಗಳನ್ನು ಪ್ರಾರಂಭಿಸಲು ಅನುಸರಿಸಬೇಕಾದ ಮಾರ್ಗಸೂಚಿ ಕ್ರಮಗಳು

ರಾಜ್ಯದಲ್ಲಿನ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಶಾಲೆಗಳಲ್ಲಿನ ಹಾಗೂ ಪೂರ್ವ ಪ್ರಾಥಮಿಕ ಶಾಲೆಗಳಲ್ಲಿನ ಎಲ್ ಕೆ ಜಿ ಮತ್ತು ಯುಕೆಜಿ ತರಗತಿಗಳನ್ನು ಪ್ರಾರಂಭಿಸಲು ಶಾಲೆಗಳ ಎಲ್ಲಾ ಶಿಕ್ಷಕರು, ವಿದ್ಯಾರ್ಥಿಗಳಿಗೆ ಅನ್ವಯಿಸುವಂತೆ, ಈ ಕೆಳಕಂಡ ಕ್ರಮವಹಿಸಲು ಸೂಚಿಸಿದೆ.

ದಿನಾಂಕ 08-11-2021ರಿಂದ ಅರ್ಧ ದಿನ ಎಲ್ಲಾ ಶಾಲೆಗಳಲ್ಲಿ ಎಲ್ ಕೆ ಜಿ ಮತ್ತು ಯುಕೆಜಿ ತರಗತಿಗಳನ್ನು ಪ್ರಾರಂಭಿಸುವುದು.

ಕೋವಿಡ್-19ರ ಸೋಂಕಿನ ಪ್ರಮಾಣ ಶೇ.2ಕ್ಕಿಂತ ಕಡಿಮೆ ಇರುವ ತಾಲೂಕುಗಳಲ್ಲಿ ಮಾತ್ರ ಸದರಿ ತರಗತಿಗಳನ್ನು ಭೌತಿಕವಾಗಿ ಪ್ರಾರಂಭಿಸುವುದು.

ಶಾಲೆ ಪ್ರಾರಂಭಕ್ಕೂ ಮುನ್ನಾ ಸೋಂಕು ನಿವಾರಕ ದ್ರಾವಣಗಳಿಂದ ಶುದ್ಧೀಕರಿಸುವುದು, ಸ್ಯಾನಿಟೈಸ್ ಮಾಡುವುದು.

ಶಾಲೆಗಳಲ್ಲಿ ಹಾಜರಾಗುವ ಎಲ್ ಕೆ ಜೆ ಮತ್ತು ಯುಕೆಜಿ ತರಗತಿಯ ಎಲ್ಲಾ ವಿದ್ಯಾರ್ಥಿಗಳು ಪೋಷಕರಿಂದ ಒಪ್ಪಿಗೆ ಪತ್ರ ಕಡ್ಡಾಯವಾಗಿ ತರಬೇಕು.

ಶಾಲೆಗೆ ಹಾಜರಾಗುವ ಎಲ್ಲಾ ಶಿಕ್ಷಕರು, ಇತರೆ ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಎಚ್ಚರಿಕೆ ವಹಿಸುವುದು.

ಶಿಕ್ಷಕರು ಎರಡು ಡೋಸ್ ಲಸಿಕೆ ಹಾಕಿಸಿಕೊಂಡಿರಬೇಕು.

ಮಕ್ಕಳಿಗೆ ಮನೆಯಿಂದಲೇ ಉಪಹಾರ, ಕುಡಿಯುವ ಶುದ್ಧನೀರನ್ನು ಕಳುಹಿಸುವಂತೆ ಎಲ್ಲಾ ಪೋಷಕರಿಗೆ ಸೂಚಿಸುವುದು.

ಶಾಲೆಗಳಲ್ಲಿ ಮಕ್ಕಳಿಗೆ ಕುಡಿಯಲು ಬಿಸಿನೀರು ವ್ಯವಸ್ಥೆ ಮಾಡುವುದು.

ಇತ್ತೀಚಿನ ಸುದ್ದಿ

ಜಾಹೀರಾತು