11:22 AM Saturday27 - November 2021
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಪುಂಡರ ಎರಡು ತಂಡಗಳ ನಡುವೆ ಮಾರಾಮಾರಿ; ರಸ್ತೆಯಲ್ಲಿ ಓಡಾಡಿ ಹೊಡೆದಾಟ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ  ಭೂಮಿ ಕಂಪನ: ಭಯಭೀತರಾದ ಜನ ಆರೋಗ್ಯ ಇಲಾಖೆಯಲ್ಲೊಬ್ಬ ಕಚ್ಚೆ ಹರುಕ ವೈದ್ಯ!!: ಗುತ್ತಿಗೆ ಸಿಬ್ಬಂದಿ ಯುವತಿಯರ ಜತೆಗಿನ ರಾಸಲೀಲೆ… ದೇವಸ್ಥಾನದೊಳಗೆ ಸೀದಾ ಪ್ರವೇಶಿಸಿದ ಆ ಭಿಕ್ಷುಕಿ ಅಜ್ಜಿ ಸ್ವಾಮೀಜಿ ಕೈಗೆ ಕೊಟ್ಟಿದ್ದೇನು? ಆಂಜನೇಯ… ವೇದಾವತಿ ಡ್ಯಾಂ: ನದಿಯಲ್ಲಿ ಈಜದಂತೆ, ನೀರಿಗಿಳಿದು ಸೆಲ್ಫಿ ತೆಗೆಯದಂತೆ ಶಾಸಕ ರಘುಮೂರ್ತಿ ಮನವಿ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆಗೆ ಎದೆ ನೋವು: ಪುಣೆ ಆಸ್ಪತ್ರೆಗೆ ದಾಖಲು ವೇದಾವತಿ ಚೆಕ್ ಡ್ಯಾಂನಲ್ಲಿ ನೀರು ಪಾಲಾದ ಇಬ್ಬರ ಪೈಕಿ ಒಂದು ಶವ ಪತ್ತೆ:… ನಿರಂತರ ಮಳೆ: ಅಥಣಿಯಲ್ಲಿ ಸಾವಿರಾರು ಎಕರೆ ದ್ರಾಕ್ಷೆ ಬೆಳೆ ನಾಶ; ಆಕಾಶದತ್ತ ಮುಖ… ಅಮೃತ ಮಹೋತ್ಸವ: ನ.27ರಂದು ಮಂಗಳೂರು ರಾಮಕೃಷ್ಣ ಮಠಕ್ಕೆ ಗೌರವಾಭಿನಂದನೆ ಹಾಗೂ ಪೌರಸಮ್ಮಾನ 8ರ ಬಾಲಕಿಯ ಸಾಮೂಹಿಕ ಅತ್ಯಾಚಾರ, ಕೊಲೆ: 4 ಮಂದಿ ಬಂಧನ; ತುಟಿ ಬಿಚ್ಚದ…

ಇತ್ತೀಚಿನ ಸುದ್ದಿ

ಬೆಳ್ತಂಗಡಿ ಇಳಂತಿಲ ಬಳಿ ಪತ್ತೆಯಾದ ಗ್ರೆನೇಡ್ 40 ವರ್ಷ ಹಳೆಯದ್ದೇ?: ತನಿಖೆ ಆರಂಭ

08/11/2021, 09:18

ಮಂಗಳೂರು(reporterkarnataka.com): ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಬೇಲಿಯ ಬಳಿ ಪತ್ತೆಯಾಗಿ ಭಾರಿ ಆತಂಕ ಸೃಷ್ಟಿಸಿದ ಐದು ಗ್ರೆನೇಡ್‌ಗಳು ಸುಮಾರು 40 ವರ್ಷ ಹಳೆಯದ್ದು ಎಂದು ತಿಳಿದು ಬಂದಿದೆ.

ನಿವೃತ್ತ ಸೇನಾಧಿಕಾರಿ ಜಯಕುಮಾರ್ ಪೂಜಾರಿ ಅವರು ಉಪ್ಪಿನಂಗಡಿಯಿಂದ ಸಂಜೆ 6 ಗಂಟೆ ಸುಮಾರಿಗೆ ತಮ್ಮ ಮನೆಯ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಗ್ರೆನೇಡ್‌ಗಳು ಪತ್ತೆಯಾಗಿವೆ. ಪ್ಲಾಸ್ಟಿಕ್ ಕವರ್‌ನಲ್ಲಿ ಒಂದು ಗ್ರೆನೇಡ್ ಹಾಗೂ ಉಳಿದ ನಾಲ್ಕು ಗ್ರೆನೇಡ್‌ಗಳು ನೆಲದ ಮೇಲೆ ಬಿದ್ದಿದ್ದವು ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

ಅವುಗಳನ್ನು ಸುರಕ್ಷಿತವಾಗಿ ತಮ್ಮ ನಿವಾಸಕ್ಕೆ ತೆಗೆದುಕೊಂಡು ಹೋದ ಜಯಕುಮಾರ್ ಪೂಜಾರಿ ಅವರು ನಂತರ ಪೊಲೀಸರಿಗೆ ಮಾಹಿತಿ ನೀಡಿದ್ದರು. ಕೂಡಲೇ ದಕ್ಷಿಣ ಕನ್ನಡ ಪೊಲೀಸರು ಗ್ರೆನೇಡ್ ವಶಪಡಿಸಿಕೊಂಡಿದ್ದಾರೆ. ಗ್ರೆನೇಡ್‌ಗಳು ಸುಮಾರು 40 ವರ್ಷಗಳಷ್ಟು ಹಳೆಯದಾಗಿವೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು