10:35 AM Saturday27 - November 2021
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಪುಂಡರ ಎರಡು ತಂಡಗಳ ನಡುವೆ ಮಾರಾಮಾರಿ; ರಸ್ತೆಯಲ್ಲಿ ಓಡಾಡಿ ಹೊಡೆದಾಟ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ  ಭೂಮಿ ಕಂಪನ: ಭಯಭೀತರಾದ ಜನ ಆರೋಗ್ಯ ಇಲಾಖೆಯಲ್ಲೊಬ್ಬ ಕಚ್ಚೆ ಹರುಕ ವೈದ್ಯ!!: ಗುತ್ತಿಗೆ ಸಿಬ್ಬಂದಿ ಯುವತಿಯರ ಜತೆಗಿನ ರಾಸಲೀಲೆ… ದೇವಸ್ಥಾನದೊಳಗೆ ಸೀದಾ ಪ್ರವೇಶಿಸಿದ ಆ ಭಿಕ್ಷುಕಿ ಅಜ್ಜಿ ಸ್ವಾಮೀಜಿ ಕೈಗೆ ಕೊಟ್ಟಿದ್ದೇನು? ಆಂಜನೇಯ… ವೇದಾವತಿ ಡ್ಯಾಂ: ನದಿಯಲ್ಲಿ ಈಜದಂತೆ, ನೀರಿಗಿಳಿದು ಸೆಲ್ಫಿ ತೆಗೆಯದಂತೆ ಶಾಸಕ ರಘುಮೂರ್ತಿ ಮನವಿ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆಗೆ ಎದೆ ನೋವು: ಪುಣೆ ಆಸ್ಪತ್ರೆಗೆ ದಾಖಲು ವೇದಾವತಿ ಚೆಕ್ ಡ್ಯಾಂನಲ್ಲಿ ನೀರು ಪಾಲಾದ ಇಬ್ಬರ ಪೈಕಿ ಒಂದು ಶವ ಪತ್ತೆ:… ನಿರಂತರ ಮಳೆ: ಅಥಣಿಯಲ್ಲಿ ಸಾವಿರಾರು ಎಕರೆ ದ್ರಾಕ್ಷೆ ಬೆಳೆ ನಾಶ; ಆಕಾಶದತ್ತ ಮುಖ… ಅಮೃತ ಮಹೋತ್ಸವ: ನ.27ರಂದು ಮಂಗಳೂರು ರಾಮಕೃಷ್ಣ ಮಠಕ್ಕೆ ಗೌರವಾಭಿನಂದನೆ ಹಾಗೂ ಪೌರಸಮ್ಮಾನ 8ರ ಬಾಲಕಿಯ ಸಾಮೂಹಿಕ ಅತ್ಯಾಚಾರ, ಕೊಲೆ: 4 ಮಂದಿ ಬಂಧನ; ತುಟಿ ಬಿಚ್ಚದ…

ಇತ್ತೀಚಿನ ಸುದ್ದಿ

ಜಾನಪದ ಸಾಹಿತ್ಯ ಜನ ಜೀವನದ ಜತೆಗೆ ಮಣ್ಣಿನ ಸಂಸ್ಕೃತಿಗೆ ಅನುಗುಣವಾಗಿ ಹುಟ್ಟಿದೆ: ಕೆ.ಪಿ. ಶೆಣೈ

10/11/2021, 15:35

ಕಾರ್ಕಳ(reporterkarnataka.com): ಜಾನಪದ ಸಾಹಿತ್ಯ ಅನ್ನುವುದು ನಮ್ಮ ಹಿರಿಯರಿಂದ ಬಂದಿದ್ದು. ಜನ ಜೀವನದ ಜತೆಗೆ ಮಣ್ಣಿನ ಸಂಸ್ಕೃತಿಗೆ ಅನುಗುಣವಾಗಿ ಹುಟ್ಟಿದೆ. ಲಿಖಿತ ರೂಪದಲ್ಲಿ ಇಲ್ಲದೆ ಬಾಯಿಯಿಂದ ಬಾಯಿಗೆ ಹರಡಿರುವ ಅತ್ಯಂತ ಶ್ರೀಮಂತ ಸಾಹಿತ್ಯವಾಗಿದೆ. 
ಕೆ.ಪಿ.ಶೆಣೈ ಹೇಳಿದರು. ಅವರು ಅಂಡಾರು ವಿಠಲ ರುಕ್ಮಿಣಿ ಕಿಣಿ ಸಾಂಸ್ಕೃತಿಕ ಸಭಾಂಗಣ ಎಸ್.ವಿ.ಟಿ ಕಾರ್ಕಳದಲ್ಲಿ ಜರುಗಿದ ಕನ್ನಡ ಜಾನಪದ ಪರಿಷತ್ ಬೆಂಗಳೂರು, ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾ ಘಟಕ ಇದರ ಕಾರ್ಕಳ ತಾಲೂಕು ಘಟಕದ ಉದ್ಘಾಟನಾ ಸಮಾರಂಭ ಮತ್ತು ಪದಾಧಿಕಾರಿಗಳಿಗೆ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. 

ನೂತನ ತಾಲೂಕು ಅಧ್ಯಕ್ಷರಾಗಿ ದೇವದಾಸ್ ಹಾಗೂ ತಂಡ ಅಧಿಕಾರ ಸ್ವೀಕರಿಸಿದರು.

ಅಧ್ಯಕ್ಷತೆಯನ್ನು ಕನ್ನಡ ಜಾನಪದ ಪರಿಷತ್ ಜಿಲ್ಲಾಧ್ಯಕ್ಷ  ಡಾ.ಗಣೇಶ್ ಗಂಗೊಳ್ಳಿ ವಹಿಸಿದ್ದರು, ಮುಖ್ಯ ಅತಿಥಿಗಳಾಗಿ ಕನ್ನಡ ಜಾನಪದ ಪರಿಷತ್ ಕರಾವಳಿ ಜಿಲ್ಲೆಗಳ ವಿಭಾಗೀಯ ಸಂಚಾಲಕಿ ಡಾ. ಭಾರತಿ ಮರವಂತೆ ಶುಭಸಂಸನೆ ಗೈದರು.

ಕನ್ನಡ ಸಾಹಿತ್ಯ ಪರಿಷತ್ ಕಾರ್ಕಳ ತಾಲೂಕಿನ ನಿಕಟಪೂರ್ವಾಧ್ಯಕ್ಷ  ಕೊಂಡಳ್ಳಿ ಪ್ರಭಾಕರ್ ಶೆಟ್ಟಿ, ಎಸ್.ವಿ‌.ಟಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ರಾಮದಾಸ ಪ್ರಭು, ಎಸ್.ವಿ‌.ಟಿ ಪದವಿಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದ ಮುಖ್ಯ ಶಿಕ್ಷಕ ಯೋಗೇಂದ್ರ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.

ಸಂಚಾಲಕ ಚಂದ್ರನಾಥ್ ಬಜಗೋಳಿ ಸ್ವಾಗತಿಸಿ, 

ಗಣೇಶ್ ಜಾಲ್ಸೂರು ಕಾರ್ಯಕ್ರಮ ನಿರೂಪಿಸಿ, ಕಾರ್ಯದರ್ಶಿ ಮಂಜುನಾಥ್ ಕೆ. ಶಿವಪುರ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು