11:44 AM Tuesday30 - November 2021
ಬ್ರೇಕಿಂಗ್ ನ್ಯೂಸ್
ಕಾರ್ಕಳ : ಕೆಲಸಕ್ಕೆಂದು ಹೋದ ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು 9 ಮಂದಿ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ: ಆರೋಪಿ ಡಾ. ರತ್ನಾಕರ್ ಗೆ… ದಂಪತಿ ಜತೆ ಸುರತ್ಕಲ್ ಟೋಲ್ ಸಿಬ್ಬಂದಿ ಅನುಚಿತ ದುರ್ವರ್ತನೆ: ಪೋಲೀಸ್ ಕಮಿಷನರ್ ಶಶಿಕುಮಾರ್… ಕಾಫಿನಾಡಲ್ಲಿ ಪ್ರಾಮಾಣಿಕ ಕಳ್ಳರು!: 4 ಬಾರ್ ಗಳಿಗೆ ಹೊಕ್ಕ ಚೋರರು: ಹಣ ಸಿಕ್ಕಿಲ್ಲ, ಆದ್ರೆ… ಕಡೂರು: ನೀರಿನ ಟ್ಯಾಂಕ್ ಕ್ಲೀನ್ ಮಾಡುವಾಗ ಉಸಿರುಗಟ್ಟಿ ಇಬ್ಬರು ಸಾವು; ಒಬ್ಬ ಗಂಭೀರ ಬೆಂಗಳೂರು: ನವಜಾತ ಹೆಣ್ಣು ಶಿಶುವನ್ನು ದೇವರ ಗುಡಿ ಮುಂದಿಟ್ಟು ಪರಾರಿ ಮೂಡಿಗೆರೆ: ಒಣ ಗಾಂಜಾ ಮಾರಾಟ; ಮಾಲು ಸಹಿತ ಆರೋಪಿ ಬಂಧನ ಕಲಬುರಗಿ ಪಾಲಿಕೆ ಕಮಿಷನರ್ ವಿರುದ್ಧ ಲವ್, ಸೆಕ್ಸ್, ದೋಖಾ ಆರೋಪ: ಕಮಿಷನರ್ ಈ… ಸೋವೇನ ಹಳ್ಳಿ, ಹಗರಿಬೊಮ್ಮನ ಹಳ್ಳಿಗೆ ಸಮರ್ಪಕ ಬಸ್ ವ್ಯವಸ್ಥೆ: ಗ್ರಾಮಸ್ಥರ ಹಕ್ಕೊತ್ತಾಯ 9 ಮಂದಿ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ: ಡಾ. ರತ್ನಾಕರ್ ಬಂಧನ; 2…

ಇತ್ತೀಚಿನ ಸುದ್ದಿ

ಹೊಸಪೇಟೆ ಪೊಲೀಸರಿಂದ ಭರ್ಜರಿ ಬೇಟೆ: 6 ಮಂದಿ ಬಂಧನ, 23.94 ಲಕ್ಷ ರೂ. ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ರ‌್ಯಾಡೋ ವಾಚ್ ವಶ

11/11/2021, 18:33

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com 

ಜಿಲ್ಲೆಯ ಹೊಸಪೇಟೆ ವಿವೇಕಾನಂದ ನಗರದಲ್ಲಿ ನಡೆದಿದ್ದ ಕಳ್ಳತನವನ್ನು ಹೊಸಪೇಟೆ ಪೊಲೀಸರು ಬೇಧಿಸಿದ್ದು, 6 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 23.94 ಲಕ್ಷ ರೂ. ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ಬೆಲೆ ಬಾಳುವ ವಾಚ್ ಗಳನ್ನು ವಶಪಡಿಸಿಕೊಂಡಿದ್ದಾರೆ. 

ಈ ಕುರಿತು ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಅರುಣ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

ಬಾಲಾಪರಾಧಿ ಸೇರಿದಂತೆ 6 ಜನರನ್ನು ಹೊಸಪೇಟೆ ಗ್ರಾಮೀಣ ಪೊಲೀಸರು ಬಂಧಿಸಿದ್ದಾರೆ.

ಆನಂದ್, ತಾಯಪ್ಪ, ಮಂಜುನಾಥ, ಸಿದ್ದರಾಜು, ನಿತಿನ್ ಹಾಗೂ ಒಬ್ಬ ಬಾಲಾಪರಾಧಿ ಸೇರಿದ್ದಾನೆ.

508 ಗ್ರಾಂ ಬಂಗಾರ, 3.797 ಕೆಜಿ ಬೆಳ್ಳಿ ಆಭರಣ ಹಾಗೂ 2 ರ‌್ಯಾಡೋ ವಾಚ್ ವಶಕ್ಕೆ ಪಡೆಯಲಾಗಿದೆ. ಬಂಧಿತ ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.ಆರೋಪಿಗಳನ್ನು ಬಂಧಿಸಲು ತಂಡ ರಚಿಸಲಾಗಿತ್ತು,.

ಹೊಸಪೇಟೆ ಡಿವೈಎಸ್ಪಿ ವಿಶ್ವನಾಥ ರಾವ್ ಕುಲಕರ್ಣಿ, ಗ್ರಾಮೀಣ ಠಾಣೆ ಸಿಪಿಐ ಶ್ರೀನಿವಾಸ್ ಮೇಟಿ ನೇತೃತ್ವದಲ್ಲಿ ಕಾರ್ಯಾಚರಣೆ ಸಿಬ್ಬಂದಿಗಳಾದ ಕೊಟ್ರೇಶ್, ಪ್ರಕಾಶ್, ರಮೇಶ್, ಜೆ ಕೊಟ್ರೇಶ್, ಅಡಿವೆಪ್ಪ, ಬಿ.ನಾಗರಾಜ್, ಚಂದ್ರಪ್ಪ, ವಿ. ನಾಗರಾಜ್, ತಿಪ್ಪೇಶ, ಮಲ್ಲಿಕಾರ್ಜುನ್ ಹಾಗೂ ಜೀಪ್ ಚಾಲಕ ನಾಗರಾಜು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು ಎಂದು ಅರುಣ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು