12:20 PM Tuesday30 - November 2021
ಬ್ರೇಕಿಂಗ್ ನ್ಯೂಸ್
ಕಾರ್ಕಳ : ಕೆಲಸಕ್ಕೆಂದು ಹೋದ ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು 9 ಮಂದಿ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ: ಆರೋಪಿ ಡಾ. ರತ್ನಾಕರ್ ಗೆ… ದಂಪತಿ ಜತೆ ಸುರತ್ಕಲ್ ಟೋಲ್ ಸಿಬ್ಬಂದಿ ಅನುಚಿತ ದುರ್ವರ್ತನೆ: ಪೋಲೀಸ್ ಕಮಿಷನರ್ ಶಶಿಕುಮಾರ್… ಕಾಫಿನಾಡಲ್ಲಿ ಪ್ರಾಮಾಣಿಕ ಕಳ್ಳರು!: 4 ಬಾರ್ ಗಳಿಗೆ ಹೊಕ್ಕ ಚೋರರು: ಹಣ ಸಿಕ್ಕಿಲ್ಲ, ಆದ್ರೆ… ಕಡೂರು: ನೀರಿನ ಟ್ಯಾಂಕ್ ಕ್ಲೀನ್ ಮಾಡುವಾಗ ಉಸಿರುಗಟ್ಟಿ ಇಬ್ಬರು ಸಾವು; ಒಬ್ಬ ಗಂಭೀರ ಬೆಂಗಳೂರು: ನವಜಾತ ಹೆಣ್ಣು ಶಿಶುವನ್ನು ದೇವರ ಗುಡಿ ಮುಂದಿಟ್ಟು ಪರಾರಿ ಮೂಡಿಗೆರೆ: ಒಣ ಗಾಂಜಾ ಮಾರಾಟ; ಮಾಲು ಸಹಿತ ಆರೋಪಿ ಬಂಧನ ಕಲಬುರಗಿ ಪಾಲಿಕೆ ಕಮಿಷನರ್ ವಿರುದ್ಧ ಲವ್, ಸೆಕ್ಸ್, ದೋಖಾ ಆರೋಪ: ಕಮಿಷನರ್ ಈ… ಸೋವೇನ ಹಳ್ಳಿ, ಹಗರಿಬೊಮ್ಮನ ಹಳ್ಳಿಗೆ ಸಮರ್ಪಕ ಬಸ್ ವ್ಯವಸ್ಥೆ: ಗ್ರಾಮಸ್ಥರ ಹಕ್ಕೊತ್ತಾಯ 9 ಮಂದಿ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ: ಡಾ. ರತ್ನಾಕರ್ ಬಂಧನ; 2…

ಇತ್ತೀಚಿನ ಸುದ್ದಿ

ಮಾಜಿ‌ ಮುಖ್ಯಮಂತ್ರಿ ಸಿದ್ದರಾಮಯ್ಯ ದಲಿತ ವಿರೋಧಿ ಅಲ್ಲ; ದಲಿತರ ಪರ ಅತೀ ಹೆಚ್ಚು ಕೆಲಸ ಮಾಡಿದವರು: ಕೃಷ್ಣ ಡಿ.ಚಿಗರಿ

13/11/2021, 09:16

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ 
ಅಂತರಗಂಗೆ ರಾಯಚೂರು
info.reporterkarnataka@gmail.com

ದಲಿತ ಸಮುದಾಯಕ್ಕೆ ಸೇರಿದ್ದರೂ ದಲಿತರ ನ್ಯಾಯಬದ್ಧ ಅವಕಾಶಗಳನ್ನು ಕಿತ್ತುಕೊಳ್ಳುತ್ತಿರುವ ಬಗ್ಗೆ ತುಟಿಕ್ ಪಿಟಿಕ್ ಎನ್ನದ ಗೋವಿಂದ ಕಾರಜೋಳ, ರಮೇಶ್ ಜಿಗಜಿಣಗಿ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾತನ್ನು ತಿರುಚಿ ಅಪಪ್ರಚಾರಕ್ಕೆ ಮುಂದಾಗಿರುವುದು ಹಾಸ್ಯಾಸ್ಪದ ಸಂಗತಿ ಎಂದು ಮಸ್ಕಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೃಷ್ಣಾ ಡಿ.ಚಿಗರಿ‌ ಹೇಳಿದರು.

ಅಧಿಕಾರ ಸಿಕ್ಕಾಗ ದಲಿತರ ಪರವಾಗಿ ಅತಿ ಹೆಚ್ಚಿನ ಕೆಲಸ ಮಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಬ್ಬ ನಿಜವಾದ ಅಂಬೇಡ್ಕರ್ ವಾದಿ. ದಲಿತರಿಗೆ SCP/STP ಕಾಯ್ದೆ, ಜಾರಿಗೊಳಿಸಿ, ಗುತ್ತಿಗೆ ಮೀಸಲಾತಿ ಅವಕಾಶ ಕಲ್ಪಿಸಿ, ಬಡ್ತಿ ಮೀಸಲಾತಿ ಯೋಜನೆ ರೂಪಿಸಿ, ಕಲ್ಲು ಗಣಿಗಾರಿಕೆಯಲ್ಲಿ ಮೀಸಲಾತಿ, ಕೈಗಾರಿಕೆಯಲ್ಲಿ ಮೀಸಲಾತಿಯನ್ನು ಜಾರಿಗೊಳಿಸಿದ ಸಿದ್ದರಾಮಯ್ಯ ಅವರು SCP/STP ಕಾಯ್ದೆಯಡಿ 30 ಸಾವಿರ ಕೋಟಿ ರೂಪಾಯಿಗಳ ಅನುದಾನವನ್ನು ನಿಗದಿಗೊಳಿಸಿದರು ಎಂದರು.

ಬಹುಶಃ ಈಗ ದೊಡ್ಡದಾಗಿ ಅಪಪ್ರಚಾರ ಮಾಡುತ್ತಿರುವ ಬಿಜೆಪಿಯ ಯಾವ ನಾಯಕರೂ ಕೂಡಾ ಸಿದ್ದರಾಮಯ್ಯನವರ ರೀತಿ ತಮ್ಮ ರಾಜಕೀಯ ಇತಿಹಾಸದಲ್ಲಿ ದಲಿತರ ಪರವಾದ ಕಾರ್ಯಕ್ರಮ ರೂಪಿಸುವುದಿರಲಿ, ಅವರಂತೆ ಯೋಚಿಸಲೂ ಕೂಡಾ ಸಾಧ್ಯವಿಲ್ಲ.ಅಂಬೇಡ್ಕರ್ ಸಿದ್ದಾಂತವನ್ನು ತಮ್ಮಬದುಕಲ್ಲೇ ಅಳವಡಿಸಿಕೊಂಡಿರುವ ಸಿದ್ದರಾಮಯ್ಯ ಅವರು ಎಂದಿಗೂ ದಲಿತರ ವಿರುದ್ಧವಾಗಿ ಹಗುರವಾಗಿ ಹಿಂದೆಯೂ ಮಾತನಾಡಿಲ್ಲ, ಇಂದೂ ಮಾತಾಡಿಲ್ಲ ಮುಂದೆಯೂ ಮಾತನಾಡಲ್ಲ ಎಂದು ಅವರು ನುಡಿದರು.

ದಲಿತರ ಹಿತಾಸಕ್ತಿ ಕಾಪಾಡುವ ಜಾಗದಲ್ಲಿ ದಲಿತರ ಅವಕಾಶಗಳನ್ನು ತಪ್ಪಿಸುತ್ತಿರುವ ಬಿಜೆಪಿಯ ದಲಿತ ನಾಯಕರು ತಮ್ಮ ಸುಳ್ಳು ಪ್ರಚಾರಕ್ಕೆ ಮತ್ತು ದಲಿತ ವಿರೋಧಿ ನೀತಿಗಳಿಗಾಗಿ ರಾಜ್ಯದ ಜನತೆಯ ಮುಂದೆ ಬಹಿರಂಗವಾಗಿ ಕ್ಷಮೆಯಾಚಿಸಲಿ ಎಂದು ಮಸ್ಕಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೃಷ್ಣಾ ಡಿ.ಚಿಗರಿ‌ ಈ ಮೂಲಕ ಆಗ್ರಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು