10:34 AM Tuesday30 - November 2021
ಬ್ರೇಕಿಂಗ್ ನ್ಯೂಸ್
ಕಾರ್ಕಳ : ಕೆಲಸಕ್ಕೆಂದು ಹೋದ ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು 9 ಮಂದಿ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ: ಆರೋಪಿ ಡಾ. ರತ್ನಾಕರ್ ಗೆ… ದಂಪತಿ ಜತೆ ಸುರತ್ಕಲ್ ಟೋಲ್ ಸಿಬ್ಬಂದಿ ಅನುಚಿತ ದುರ್ವರ್ತನೆ: ಪೋಲೀಸ್ ಕಮಿಷನರ್ ಶಶಿಕುಮಾರ್… ಕಾಫಿನಾಡಲ್ಲಿ ಪ್ರಾಮಾಣಿಕ ಕಳ್ಳರು!: 4 ಬಾರ್ ಗಳಿಗೆ ಹೊಕ್ಕ ಚೋರರು: ಹಣ ಸಿಕ್ಕಿಲ್ಲ, ಆದ್ರೆ… ಕಡೂರು: ನೀರಿನ ಟ್ಯಾಂಕ್ ಕ್ಲೀನ್ ಮಾಡುವಾಗ ಉಸಿರುಗಟ್ಟಿ ಇಬ್ಬರು ಸಾವು; ಒಬ್ಬ ಗಂಭೀರ ಬೆಂಗಳೂರು: ನವಜಾತ ಹೆಣ್ಣು ಶಿಶುವನ್ನು ದೇವರ ಗುಡಿ ಮುಂದಿಟ್ಟು ಪರಾರಿ ಮೂಡಿಗೆರೆ: ಒಣ ಗಾಂಜಾ ಮಾರಾಟ; ಮಾಲು ಸಹಿತ ಆರೋಪಿ ಬಂಧನ ಕಲಬುರಗಿ ಪಾಲಿಕೆ ಕಮಿಷನರ್ ವಿರುದ್ಧ ಲವ್, ಸೆಕ್ಸ್, ದೋಖಾ ಆರೋಪ: ಕಮಿಷನರ್ ಈ… ಸೋವೇನ ಹಳ್ಳಿ, ಹಗರಿಬೊಮ್ಮನ ಹಳ್ಳಿಗೆ ಸಮರ್ಪಕ ಬಸ್ ವ್ಯವಸ್ಥೆ: ಗ್ರಾಮಸ್ಥರ ಹಕ್ಕೊತ್ತಾಯ 9 ಮಂದಿ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ: ಡಾ. ರತ್ನಾಕರ್ ಬಂಧನ; 2…

ಇತ್ತೀಚಿನ ಸುದ್ದಿ

ಮಾರ್ಗನ್ಸ್ ಗೇಟ್ : ರಾಮಕ್ಷತ್ರೀಯ ಸಂಘದಿಂದ ನಾಳೆ ರಕ್ತದಾನ ಶಿಬಿರ ಮತ್ತು ಉಚಿತ ನೇತ್ರ ಹಾಗೂ ದಂತ ಚಿಕಿತ್ಸಾ ಶಿಬಿರ

13/11/2021, 20:18

ಮಂಗಳೂರು(reporterkarnataka.com): ಮಂಗಳೂರು ರಾಮಕ್ಷತ್ರೀಯ ಸೇವಾ ಸಂಘ, ರಾಮಕ್ಷತ್ರೀಯ ಯುವ ವೃಂದ ಮತ್ತು ಮಹಿಳಾ ವೃಂದ, ಭಕ್ತವೃಂದ ಗುರುಪರಾಶಕ್ತಿ ಮಠ ಮರಕಡ ಮತ್ತು ಮಂಗಳೂರು ಲಯನ್ಸ್ ಕ್ಲಬ್ ಮಿಲಾಗ್ರೀಸ್, ಶ್ರೀ ಲಕ್ಷ್ಮ ಣಾನಂದ ವಿವಿಧೋದ್ದೇಶ ಸಹಕಾರಿ ಸಂಘದ ಆಶ್ರಯದಲ್ಲಿ ಎ.ಜೆ. ಆಸ್ಪತ್ರೆ ಮಂಗಳೂರು ಮತ್ತು ಕೆಎಂಸಿ ಆಸ್ಪತ್ರೆ ಮಂಗಳೂರು ಸಹಯೋಗದಲ್ಲಿ ರಕ್ತದಾನ ಶಿಬಿರ ಮತ್ತು ಉಚಿತ ಬೃಹತ್ ಕಣ್ಣಿನ ಹಾಗೂ ದಂತ ಚಿಕಿತ್ಸಾ ಶಿಬಿರ ನಗರದ ಜಪ್ಪು ಮಾರ್ಗನ್ಸ್ ಗೇಟಿನ ರಾಮಕ್ಷತ್ರೀಯ ಮಂದಿರದಲ್ಲಿ ನವೆಂಬರ್ 14ರಂದು ಬೆಳಗ್ಗೆ 9.30ರಿಂದ 12.30ರ ತನಕ ನಡೆಯಲಿದೆ.

ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಅವರು ಶಿಬಿರವನ್ನು ಉದ್ಘಾಟಿಸುವರು. ರಾಮಕ್ಷತ್ರೀಯ ಸಂಘದ ಅಧ್ಯಕ್ಷ ಕೆ. ರವೀಂದ್ರ ಅಧ್ಯಕ್ಷತೆ ವಹಿಸುವರು.  ಮಂಗಳೂರಿನ ಎ.ಜೆ. ಮೆಡಿಕಲ್ ಕಾಲೇಜಿನ ಮುಖ್ಯಸ್ಥ ಡಾ. ಜಯರಾಮ ಶೆಟ್ಟಿ, ಕೆಎಂಸಿ ಬ್ಲಡ್‌ ಬ್ಯಾಂಕಿನ ನಿರ್ದೇಶಕರಾದ ಡಾ. ದೀಪಾ ಅಡಿಗ, ಅರಣ್ಯ ಇಲಾಖೆ

ಕರಾವಳಿ ವಲಯ ನಿಯಂತ್ರಣಾಧಿಕಾರಿ ಶ್ರೀಧರ ಪಿ., ಮಂಗಳೂರು ಉತ್ತರ ಠಾಣೆ ಪೊಲೀಸ್ ನಿರೀಕ್ಷಕ ರಾಘವೇಂದ್ರ ಬೈಂದೂರು, ಲಯನ್ಸ್ ಕ್ಲಬ್ ಮಂಗಳೂರು ಮಿಲಾಗ್ರೀಸ್ ಅಧ್ಯಕ್ಷ ತುಲಾರ್ ರೈ 

ಮುಖ್ಯ ಅತಿಥಿಯಾಗಿ ಭಾಗವಹಿಸುವರು.

ಶಿಬಿರದಲ್ಲಿ ಉಚಿತ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ಮತ್ತು ಕನ್ನಡಕ್ಕ ವಿತರಣೆ ಮತ್ತು ದಂತ ಚಿಕಿತ್ಸೆ ನಡೆಸಲಾಗುವುದು.

ಇತ್ತೀಚಿನ ಸುದ್ದಿ

ಜಾಹೀರಾತು